ಅಕ್ರಮ ಸಕ್ರಮಕ್ಕೆ 2 ತಿಂಗಳಲ್ಲಿ ಕ್ರಮ: ಅಶೋಕ್
Team Udayavani, Apr 18, 2020, 12:21 PM IST
ಅಕ್ರಮ ಸಕ್ರಮ ಕುರಿತಂತೆ ಶುಕ್ರವಾರ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಸಭೆ ನಡೆಸಿದರು.
ಬೆಂಗಳೂರು: ನಗರ ಪ್ರದೇಶಗಳಲ್ಲಿ ಕಂದಾಯ ಭೂಮಿಯಲ್ಲಿ ಅಕ್ರಮವಾಗಿ ಕಟ್ಟಿಕೊಂಡವರ ಮನೆಗಳನ್ನು ಎರಡು ತಿಂಗಳಲ್ಲಿ ಸಕ್ರಮಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಅಕ್ರಮ ಸಕ್ರಮ ಕುರಿತಂತೆ ಶುಕ್ರವಾರ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಸಭೆ ನಡೆಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಕಂದಾಯ ಇಲಾಖೆ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ
ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅಕ್ರಮ ಮನೆಗಳ ಸಕ್ರಮ ಮಾಡುವ ಕುರಿತು ಚರ್ಚೆ ನಡೆಸಲಾಯಿತು.
ಈ ಹಿಂದೆ ಅಕ್ರಮ ಸಕ್ರಮದ ಕುರಿತಂತೆ ಸಂಪುಟ ಉಪಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದ್ದ ವರದಿಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. 2007 ರಿಂದಲೂ ಅಕ್ರಮ ಸಕ್ರಮ ಪ್ರಕರಣ ನಡೆಯುತ್ತಿದೆ. ಹಿಂದಿನ ಸರ್ಕಾರಗಳು ನಿಯಮ ಮೀರಿ ಮನೆ ಕಟ್ಟಿರುವ ಬಡವರಿಗೆ ಅನುಕೂಲ ಮಾಡಿಕೊಡಲು
ಸಕ್ರಮಗೊಳಿಸಲು ತೀರ್ಮಾನಿಸಲಾಗಿದೆ. ಆದರೆ, ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಕೋರ್ಟ್ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರ ಸಾಮಾನ್ಯ ಜನರಿಗೆ ಮಾತ್ರ ಅನುಕೂಲ ಕಲ್ಪಿಸಲು ನಿರ್ಧರಿಸಿದ್ದು, ಇದರಿಂದ ಯಾವುದೇ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಅನುಕೂಲವಾಗುವುದಿಲ್ಲ. ಅವರನ್ನು ಈ ಕಾಯ್ದೆ
ವ್ಯಾಪ್ತಿಯಿಂದ ಹೊರಗಿಟ್ಟು ಸಕ್ರಮಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ್, ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಬಿಬಿ
ಎಂಪಿ, ಬಿಡಿಎ ಆಯುಕ್ತರು ಉಪಸ್ಥಿತರಿದ್ದರು. ಅಕ್ರಮ ಸಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ಹೂಡಿರುವ ಸಂಸದ ರಾಜೀವ್ ಚಂದ್ರಶೇಖರ್ ತಮ್ಮ ದೂರನ್ನು ವಾಪಸ್ ಪಡೆಯಲು ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.