ಕೋವಿಡ್ 19 ವಿರುದ್ಧ ಹೋರಾಟ; ಭಾರತ ಆಪದ್ಭಾಂಧವ-ಸಕಾಲದ ನೆರವಿಗೆ ಅಫ್ಘಾನ್ ಕೃತಜ್ಞತೆ
ಅಫ್ಘಾನಿಸ್ತಾನ ಸೇರಿದಂತೆ ವಿಶ್ವದ 55 ದೇಶಗಳು ಹೈಡ್ರೋಕ್ಸಿಕ್ಲೋರೋಕ್ವಿನ್ ಮಾತ್ರೆಗಾಗಿ ಬೇಡಿಕೆ ಇಟ್ಟಿದ್ದವು.
Team Udayavani, Apr 18, 2020, 12:28 PM IST
Representative Image
ನವದೆಹಲಿ:ಇಡೀ ಜಗತ್ತು ಮಾರಣಾಂತಿಕ ಕೋವಿಡ್ 19 ವೈರಸ್ ವಿರುದ್ಧ ಹೋರಾಡುತ್ತಿದೆ. ಇಂತಹ ಸಂದರ್ಭದಲ್ಲಿ ಭಾರತ ಐದು ಲಕ್ಷದಷ್ಟು ಹೈಡ್ರೋಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಕಳುಹಿಸಿಕೊಟ್ಟಿದ್ದು, ಇದಕ್ಕಾಗಿ ಅಭಿನಂದನೆ ಸಲ್ಲಿಸುವುದಾಗಿ ಅಫ್ಘಾನಿಸ್ತಾನದ ರಾಯಭಾರಿ ತಾಹೀರ್ ಖಾದ್ರಿ ಟ್ವೀಟ್ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.
ಭಾರತಕ್ಕೆ ನಿರಂತರವಾಗಿ ಬೇಡಿಕೆ ಇಟ್ಟಿದ್ದು, “ಈ ನಿಟ್ಟಿನಲ್ಲಿ ಭಾರತ ಮಹತ್ವದ ಔಷಧವಾಗಿರುವ ಒಂದು ಲಕ್ಷ ಪ್ಯಾರಾಸಿಟಮೋಲ್ ಮಾತ್ರೆ ಹಾಗೂ 5 ಲಕ್ಷದಷ್ಟು ಹೈಡ್ರೋಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಅರಿಯಾನಾ ಏರ್ ಲೈನ್ಸ್ ಮೂಲಕ ಅಫ್ಘಾನಿಸ್ತಾನಕ್ಕೆ ಕಳುಹಿಸಿಕೊಟ್ಟಿದೆ. ಇದಕ್ಕೂ ಮುನ್ನ ಭಾರತ ಆಹಾರ ಭದ್ರತೆಗಾಗಿ ಗೋಧಿಯನ್ನು ಹಡಗಿನ ಮೂಲಕ ಕಳುಹಿಸಿತ್ತು. ಭಾರತಕ್ಕೆ ಹೃದಯಪೂರ್ವಕ ಅಭಿನಂದನೆಗಳು” ಎಂದು ತಿಳಿಸಿದ್ದಾರೆ.
ಕೋವಿಡ್ 19 ವೈರಸ್ ವಿರುದ್ಧ ಹೋರಾಡುವ ವೈದ್ಯ ಸಿಬ್ಬಂದಿಗಳಿಗೆ ಹೈಡ್ರೋಕ್ಸಿಕ್ಲೋರೋಕ್ವಿನ್ ತುಂಬಾ ಉಪಯುಕ್ತ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಪ್ರಾಯವ್ಯಕ್ತಪಡಿಸಿದ ಮೇಲೆ ಹಲವು ದೇಶಗಳು ಈ ಮಾತ್ರೆಗಾಗಿ ಬೇಡಿಕೆ ಇಟ್ಟಿದ್ದವು. ಇಡೀ ಜಗತ್ತಿನಲ್ಲಿ ಹೈಡ್ರೋಕ್ಸಿಕ್ಲೋರೋಕ್ವಿನ್ ಮಾತ್ರೆ ಉತ್ಪಾದನೆಯಲ್ಲಿ ಭಾರತ ನಂ 1 ಆಗಿತ್ತು. ಅಲ್ಲದೇ ಅಫ್ಘಾನಿಸ್ತಾನ ಸೇರಿದಂತೆ ವಿಶ್ವದ 55 ದೇಶಗಳು ಹೈಡ್ರೋಕ್ಸಿಕ್ಲೋರೋಕ್ವಿನ್ ಮಾತ್ರೆಗಾಗಿ ಬೇಡಿಕೆ ಇಟ್ಟಿದ್ದವು.
ಕೋವಿಡ್ 19 ವೈರಸ್ ಗೆ ಈಗಾಗಲೇ ಅಫ್ಘಾನಿಸ್ತಾನದಲ್ಲಿ 30 ಮಂದಿ ಸಾವನ್ನಪ್ಪಿದ್ದು, 906 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ವರದಿ ತಿಳಿಸಿದೆ. ಮತ್ತೊಂದೆಡೆ ಭಾರತ ಹೈಡ್ರೋಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಬಹರೈನ್, ಯುಎಇ ಮತ್ತು ಒಮಾನ್ ದೇಶಕ್ಕೆ ಕಳುಹಿಸಲು ಸಿದ್ದತೆ ನಡೆಸಿದೆ. ಪ್ಯಾರಾಸಿಟಮೋಲ್ ಮಾತ್ರೆಯನ್ನು ಕುವೈಟ್ ಗೆ ಕಳುಹಿಸಿದೆ. ಕೇಂದ್ರ ಸರ್ಕಾರ ಕುವೈಟ್ ಗೆ ವಿಶೇಷ ತಂಡವನ್ನು ಕಳುಹಿಸಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.