ಎಲ್ಲೆಡೆ ಬಿಗಿ ಬಂದೋಬಸ್ತ್: ಸಂಚಾರಕ್ಕೆ ನಿಷೇಧ
Team Udayavani, Apr 18, 2020, 12:55 PM IST
ದೇವದುರ್ಗ: ನಗರಗುಂಡ ಕ್ರಾಸ್ ಹತ್ತಿರ ಬಿದಿರು ಕಟ್ಟಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ದೇವದುರ್ಗ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಪಟ್ಟಣದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಆಸ್ಪತ್ರೆ, ಮೆಡಿಕಲ್, ತರಕಾರಿ ಹೊರತುಪಡಿಸಿ ವಿನಾಕಾರಣ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ನಗರಗುಂಡ ಕ್ರಾಸ್, ಬಸವಣ್ಣ ವೃತ್ತ, ಸಾರ್ವಜನಿಕ ಕ್ಲಬ್, ಬಸ್ ನಿಲ್ದಾಣ, ಡಾ|ಬಿ.ಆರ್. ಅಂಬೇಡ್ಕರ್ ವೃತ್ತ ಸೇರಿ ಎಲ್ಲೆಡೆ ಬಂಬೂ ಕಟ್ಟಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ವಿನಾಕಾರಣ ರಸ್ತೆಯಲ್ಲಿ ಸಂಚರಿಸುತ್ತಿದ್ದ 10ಕ್ಕೂ ಹೆಚ್ಚು ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ಬೆಳಗ್ಗೆಯಿಂದಲೇ ಪಿಎಸ್‌ಐ ಎಲ್.ಬಿ. ಅಗ್ನಿ ನೇತೃತ್ವದಲ್ಲಿ ಎಲ್ಲೆಡೆ ಬಂಬೂ ಕಟ್ಟಿ ಸಂಚಾರಕ್ಕೆ ತಡೆಹಿಡಿಯಲಾಗಿದೆ.
ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಕೆಲ ವಾರ್ಡ್‌ನ ಸದಸ್ಯರು ರಸ್ತೆಯಲ್ಲಿ ಸಂಚರಿಸಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದರು. ಮನೆಯಿಂದ ಹೊರಗಡೆ ಬರದಂತೆ ಎಚ್ಚರ ವಹಿಸಬೇಕು ಎಂದು ಮೈಕ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು. ತಹಶೀಲ್ದಾರ್ ಮಧುರಾಜ್ ಯಾಳಗಿ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆ ವೈದ್ಯರ ಸಭೆ ನಡೆಯಿತು. ಕೆಮ್ಮು, ಜ್ವರ, ನಗಡಿ, ಉಸಿರಾಟ ತೊಂದರೆ ಎಂದು ಚಿಕಿತ್ಸೆಗೆ ಆಸ್ಪತ್ರೆಗೆ ಬರುವ ಪ್ರತಿಯೊಬ್ಬ ರೋಗಿಗಳ ಹೆಸರು, ಮೊಬೈಲ್ ನಂಬರ್, ಸಂಪೂರ್ಣ ಮಾಹಿತಿ ನೋಂದಣಿ ಪುಸ್ತಕದಲ್ಲಿ ನಮೂದಿಸಬೇಕು ಎಂದು ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.