ಲಾಕ್ ಡೌನ್ ಉಲ್ಲಂಘಿಸಿ ಜಾತ್ರೆ ಪ್ರಕರಣ: ರಾವೂರ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ
Team Udayavani, Apr 18, 2020, 3:25 PM IST
ಕಲಬುರಗಿ: ಲಾಕ್ ಡೌನ್ ಉಲ್ಲಂಘಿಸಿ ಜಾತ್ರೆ ನಡೆಸಿದ ಚಿತ್ತಾಪುರ ತಾಲೂಕಿನ ರಾವೂರ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನದ ಮಠಕ್ಕೆ ಶನಿವಾರ ಜಿಲ್ಲಾಧಿಕಾರಿ ಶರತ್ ಬಿ. ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮದ ವಿವಿಧ ಪ್ರದೇಶಗಳಿಗೂ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಲಾಕ್ ಡೌನ್ ಅನುಷ್ಠಾನವನ್ನು ಪರಾಮರ್ಶಿಸಿದರು.
ಕೋವಿಡ್-19 ಸೋಂಕು ಹರಡದಂತೆ ಮುನ್ನೆಚರಿಕೆಯಾಗಿ ಗ್ರಾಮದೊಳಗಿನ ರಸ್ತೆಗಳನ್ನು ಬ್ಲಾಕ್ ಮಾಡಲಾಗಿದೆ ಎಂದು ಸ್ಥಳದಲ್ಲಿದ್ದ ಚಿತ್ತಾಪುರ ತಹಶೀಲ್ದಾರ ಉಮಾಕಾಂತ ಅವರು ಡಿ.ಸಿ. ಅವರ ಗಮನಕ್ಕೆ ತಂದರು.
ರಾವೂರು ಜಾತ್ರೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ 20 ಜನ ಮತ್ತು ಸುಮಾರು 150-200 ಜನ ಗ್ರಾಮಸ್ಥರ ವಿರುದ್ಧ ವಾಡಿ ಠಾಣೆಯಲ್ಲಿ ಈಗಾಗಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ.
ವಾಡಿ ಪಟ್ಟಣಕ್ಕೂ ಭೇಟಿ: ವಾಡಿ ಪಟ್ಟಣದ ಎಸಿಸಿ ಕಂಪನಿ ಗೇಟ್ ಬಳಿ ಪಿಲ್ಕಂ ಪ್ರದೇಶದ 2 ವರ್ಷದ ಗಂಡು ಮಗುವಿಗೆ ಕಳೆದ ಏಪ್ರಿಲ್ 12 ರಂದು ಕೋವಿಡ್-19 ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಕಂಟೇನ್ ಮೆಂಟ್ ಝೋನ್ ಎಂದು ಗುರುತಿಸಿದ ವಾರ್ಡ ಸಂಖ್ಯೆ 11, 12, 13 ಹಾಗೂ 14 ಪ್ರದೇಶಕ್ಕೂ ಭೇಟಿ ನೀಡಿ ಅಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಧಿಕಾರಿ ವೀಕ್ಷಿಸಿದರು.
ಜಿಪಂ ಸಿಇಓ ಡಾ.ಪಿ.ರಾಜಾ, ಚಿತ್ತಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅನಿತಾ ಕೆ., ಚಿತಾಪುರ ಸಿಪಿಐ ಪಂಚಾಕ್ಷರಿ ಸಾಲಿಮಠ, ವಾಡಿ ಪುರಸಭೆ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.