![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 18, 2020, 4:13 PM IST
ದಾವಣಗೆರೆ: ರಾಜ್ಯದ ರೈತರಿಗೆ ಹೊಸ ಸಾಲ ನೀಡಲು ನಿರ್ಧರಿಸಲಾಗಿದ್ದು, ಇನ್ನೆರಡು ದಿನಗಳಲ್ಲಿ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಕೋವಿಡ್-19 ಭೀತಿ ಹಿನ್ನೆಲೆ ರಾಜ್ಯದ ಬಹುತೇಕ ಎಪಿಎಂಸಿಗೆ ಭೇಟಿ ನೀಡಲಾಗುತ್ತಿದೆ. ರೈತರಿಗೆ ತಮ್ಮ ಬೆಳೆ ಮಾರಾಟಕ್ಕೆ ತೊಂದರೆ ಆಗಬಾರದು.ಈಗಾಗಲೇ ರೈತರ ಸಾಲ ಮನ್ನಾ ಬಗ್ಗೆ ಸೂಕ್ತ ಕ್ರಮ ಕೈ ಗೊಳ್ಳಲಾಗಿದೆ. ರಾಜ್ಯದಲ್ಲಿ 29800 ಅರ್ಜಿಗಳಿದ್ದವು ಇದರಲ್ಲಿ 14629 ಅರ್ಜಿಗಳು ಇನ್ನು ವಿಲೇವಾರಿ ಆಗಿಲ್ಲ. ಇದರ ಬಗ್ಗೆ ಸಂಬಂಧಿಸಿದವರಿಗೆ ಸೂಚನೆ ನೀಡಲಾಗಿದೆ ಎಂದರು.
ಇನ್ನೆರಡು ದಿನಗಳಲ್ಲಿ ರೈತರಿಗೆ ಹೊಸ ಸಾಲ ನೀಡುವ ಬಗ್ಗೆ ಅದೇಶ ಹೊರಡಿಸಲಾಗುವುದು. ಇದೇ ವಿಚಾರದಲ್ಲಿ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಾಗುವುದು ಎಂದರು.
ಖಾಸಗಿ ಹಣಕಾಸು ಕಂಪನಿಗಳು ರೈತರ ಸಾಲ ವಸೂಲು ಮಾಡುವಂತಿಲ್ಲ. ವಾಹನಗಳನ್ನ ಸೀಜ್ ಮಾಡುವಂತಿಲ್ಲ. ಇಂತಹ ಕಂಪನಿಗಳಿಗೆ ಮುಖ್ಯಮಂತ್ರಿ ಗಳ ಜೊತೆ ಮಾತುಕತೆ ನಡೆಸಿ ಸುತ್ತೋಲೆ ಕಳುಹಿಸಲಾಗುವುದು. ಮೂರು ತಿಂಗಳ ಕಾಲ ಸಾಲಾ ವಸೂಲಿ ಮಾಡದಂತೆ ಖಾಸಗಿ ಕಂಪನಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಸಚಿವರು ಹೇಳಿದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.