ನಿಷೇಧಾಜ್ಞೆ ಕಡ್ಡಾಯ ಪಾಲಿಸಿ


Team Udayavani, Apr 18, 2020, 5:41 PM IST

ನಿಷೇಧಾಜ್ಞೆ ಕಡ್ಡಾಯ ಪಾಲಿಸಿ

ಕೊಪ್ಪಳ: ಎಲ್ಲ ಚುನಾಯಿತ ಪ್ರತಿನಿಧಿ ಗಳು, ಅಧಿಕಾರಿಗಳು ಹಾಗೂ ಜನತೆ ಕೋವಿಡ್‌-19 ವೈರಾಣು ಹರಡುವಿಕೆ ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಡಿಸಿ ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ಕೋವಿಡ್‌-19  ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಸೂಕ್ತ ಕ್ರಮ ತೆಗೆದುಕೊಂಡಿದ್ದರೂ ಜಿಲ್ಲೆಯಲ್ಲಿ ಕೆಲವು ಕಡೆ ಸೂಕ್ತ ಕ್ರಮ ಅನುಸರಿಸುತ್ತಿಲ್ಲ. ಜನ ಪ್ರತಿನಿಧಿಗಳು, ಅಧಿಕಾರಿಗಳ ಸಭೆ ಆಯೋಜಿಸುತ್ತಿರುವುದು, ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಗಮನಕ್ಕೆ ಬಂದಿದೆ. ಜನತೆ ರಸ್ತೆಗಳಲ್ಲಿ, ಬೀದಿಗಳಲ್ಲಿ ಗುಂಪುಗೂಡುತ್ತಿರುವುದು, ಜನ ಪ್ರತಿನಿಧಿಗಳು, ವಿವಿಧ ಪಕ್ಷಗಳ ಮುಖಂಡರು ಸಮುದಾಯದಲ್ಲಿ ಅಗತ್ಯ ವಸ್ತು, ಮಾಸ್ಕ್, ಸ್ಯಾನಿಟೈಸರ್‌,ಆಹಾರ, ಆಹಾರ ಸಾಮಗ್ರಿ ವಿತರಿಸುವ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಮತ್ತು ನಿಷೇಧಾಜ್ಞೆಯ ನಿಯಮಾವಳಿ ಉಲ್ಲಂಘಿಸುತ್ತಿರುವುದು ಕಂಡು ಬಂದಿದೆ.

ಇನ್ನು ಮುಂದೆ ಅಧಿಕಾರಿಗಳು ಮೇಲಾಧಿಕಾರಿಗಳ ಪೂರ್ವಾನುಮತಿಯಿಲ್ಲದೇ ಸಭೆ ನಡೆಸುವಂತಿಲ್ಲ.ಸಮುದಾಯದಲ್ಲಿ ಮಾಸ್ಕ್, ಸ್ಯಾನಿಟೈಸರ್‌, ಆಹಾರ ಮತ್ತು ಆಹಾರ ಸಾಮಗ್ರಿ ವಿತರಿಸುವ ವೇಳೆ ಕಡ್ಡಾಯವಾಗಿ ರಕ್ಷಣಾ ಪರಿಕರ ಧರಿಸತಕ್ಕದ್ದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಈ ಎಲ್ಲಾ ಕ್ರಮಗಳನ್ನು ಚುನಾಯಿತಜನಪ್ರತಿನಿಧಿ ಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ಡಿಸಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ಸಿಡಿಆರ್‌ ಮಾಹಿತಿ ನೀಡಿ: ಲಾಕ್‌ಡೌನ್‌ ವೇಳೆ ಸೋಂಕಿತ ಪಿ-194 ನ ಪ್ರಾಥಮಿಕ ಸಂಪರ್ಕದಲ್ಲಿದ್ದ ಶಿಖಾ ಶೇಖ್‌ಅವರನ್ನು ಮುಂಬೈಗೆ ಹೋಗಲು ಪಾಸ್‌ ಕೊಡಿಸುವುದಾಗಿ ಹೇಳಿ, ಅನುಮತಿ ಇಲ್ಲದೆ ಕೊಪ್ಪಳಕ್ಕೆ ಕರೆತಂದ ಅಪರಾಧದಹಿನ್ನೆಲೆಯಲ್ಲಿ ನಗರದ ಗುರುಬಸವ ಹೊಳಗುಂದಿ ಹಾಗೂ ಇತರರ ಮೇಲೆ ಎಫ್‌.ಐ.ಆರ್‌ ದಾಖಲಿಸಲಾಗಿದ್ದು, ಇದಕ್ಕೆಸಂಬಂಧಿಸಿದಂತೆ ಕಾಲ್‌ ಡಿಟೇಲ್ಸ್‌ ರಿಜಿಸ್ಟರ್‌ ಕುರಿತ ಮಾಹಿತಿ ನೀಡುವಂತೆ ಎಸ್ಪಿಗೆ ಡಿಸಿ ಸುನೀಲ್‌ ಕುಮಾರ್‌ ಸೂಚಿಸಿದ್ದಾರೆ.

ವಾರ್ಡ್‌ಗಳಿಗೆ ತೆರಳಿ ಮಾರಾಟ ಮಾಡಿ: ಗಂಗಾವತಿ ನಗರದ ಮಾರುಕಟ್ಟೆಯಲ್ಲಿ ಇರುವ ತರಕಾರಿ ವರ್ತಕರು ತಮ್ಮ ಅಂಗಡಿಯನ್ನು ಎಪಿಎಂಸಿ ಯಾರ್ಡ್‌ನಲ್ಲಿ ಸ್ಥಳಾಂತರಿಸಬೇಕು. ತಮ್ಮಲ್ಲಿರುವ ತರಕಾರಿಯನ್ನು ಈಗಾಗಲೇ ಗುರುತಿಸಿರುವ 17 ನೋಂದಾಯಿತ ಸಗಟು ಮಾರಾಟಗಾರರಿಗೆ ಹಾಗೂ ತಾಲೂಕು ಕ್ರೀಡಾಂಗಣದಲ್ಲಿ ನೋಂದಾಯಿಸಿದ 9 ಜನ ಸೊಪ್ಪು, ಕರಿಬೇವು, ಕೊತ್ತಂಬರಿ ಸಗಟು ಮಾರಾಟಗಾರರಿಗೆ ಮಾರಾಟ ಮಾಡಬೇಕು. ಸಗಟು ಮಾರಾಟಗಾರರು ತಮಗೆ ನಿಗದಿಪಡಿಸಿದ ದರದಲ್ಲಿಯೇ ಕಡ್ಡಾಯವಾಗಿ ತಮಗೆ ಹಂಚಿಕೆ ಮಾಡಿರುವ ವಾರ್ಡ್‌ಗಳಿಗೆ ಹೋಗಿ ಮಾರಾಟ ಮಾಡಬೇಕು ಎಂದು ಡಿಸಿ ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ರೇಷನ್‌ ಕಿಟ್‌ ಒದಗಿಸುವ ಮಾಹಿತಿ: ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆ ಅಡಿಯಲ್ಲಿ ಸೂಕ್ತ ಪಡಿತರ ಧಾನ್ಯ ಹಾಗೂ ರೇಷನ್‌ ಕಿಟ್‌ಗಳನ್ನು ವಿತರಿಸಲಾಗುತ್ತಿದ್ದು, ಈಗಾಗಲೇ ಏಪ್ರಿಲ್‌, ಮೇ ತಿಂಗಳ ಪಡಿತರ ಧಾನ್ಯವನ್ನು ಮುಂಗಡವಾಗಿ ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

raghav

Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನಿಂದ ಸುಳ್ಳು ಆರೋಪ: ರಾಘವೇಂದ್ರ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.