ಆನ್‌ಲೈನ್‌ನಲ್ಲಿ ಬೋಧಿಸಿ; ಶುಲ್ಕ ಪಡೆಯುವಂತಿಲ್ಲ
Team Udayavani, Apr 19, 2020, 5:18 AM IST
ಬೆಂಗಳೂರು : ಖಾಸಗಿ ಶಾಲೆಗಳು ಆನ್‌ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಬೋಧನೆ, ಪಾಠ ಪ್ರವಚನ ನಡೆಸಲು ಸರಕಾರದ ಯಾವುದೇ ಅಭ್ಯಂತರವಿಲ್ಲ. ಆದರೆ, ಇದೇ ನೆಪವೊಡ್ಡಿ ಶುಲ್ಕ ವಸೂಲಿ ಮಾಡುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.
ಖಾಸಗಿ ಶಾಲೆಗಳು ಆನ್‌ಲೈನ್ ತರಗತಿ ನಡೆಸುವುದಕ್ಕೆ ಸರಕಾರದಿಂದ ಯಾವುದೇ ಆಕ್ಷೇಪ ಇಲ್ಲ. ಆದರೆ, ಇದೇ ನೆಪದಲ್ಲಿ ವಿದ್ಯಾರ್ಥಿಗಳಿಂದ ಅಥವಾ ಪಾಲಕ, ಪೋಷಕರಿಂದ ಶುಲ್ಕ ವನ್ನು ಪಡೆಯದಂತೆ ನಿರ್ದೇಶಿಸಿದೆ.
ಆನ್‌ಲೈನ್ ಬೋಧನಾ ಶುಲ್ಕ ಸೇರಿದಂತೆ ದಾಖಲಾತಿ ಶುಲ್ಕ, ಶಾಲಾ ಶುಲ್ಕ ಮತ್ತು ಬೇರೆ ಯಾವುದೇ ಶುಲ್ಕವನ್ನು ಸರಕಾರದ ಮುಂದಿನ ಆದೇಶದವರೆಗೂ ಪಡೆಯುವಂತಿಲ್ಲ ಹಾಗೂ ಪಾಲಕ, ಪೋಷಕರ ಮೇಲೂ ಈ ಕುರಿತು ಒತ್ತಡ ಹೇರುವಂತಿಲ್ಲ ಎಂದು ಎಲ್ಲ ಖಾಸಗಿ ಆಡಳಿತ ಮಂಡಳಿಗಳಿಗೆ ಸೂಚಿಸಿದೆ.
ಶಾಲಾಡಳಿತ ಮಂಡಳಿ ಮೇಲ್ಕಂಡ ಸೂಚನೆಗಳನ್ನು ಪಾಲಿಸದೆ ಕಾನೂನು ಉಲ್ಲಂಘಿಸಿರುವುದು ಕಂಡು ಬಂದಲ್ಲಿ, ಸಾಂಕ್ರಾಮಿಕ ರೋಗಗಳ ಅಧಿನಿಯಮ 1890ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ಅಧಿ ಕಾರಿಗಳಿಗೆ ನಿರ್ದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.