25 ಹೊಸ ಪ್ರಕರಣ, ಒಂದು ಸಾವು, 104 ಮಂದಿ ಗುಣಮುಖ


Team Udayavani, Apr 19, 2020, 5:45 AM IST

25 ಹೊಸ ಪ್ರಕರಣ, ಒಂದು ಸಾವು, 104 ಮಂದಿ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌-19 ಸೋಂಕಿತರ ಸಂಖ್ಯೆ ದಿನೇದಿನೇ ಏರುತ್ತೂದ್ದು, ಶನಿವಾರ ಒಂದೇ ದಿನ 25 ಹೊಸ ಪ್ರಕರಣಗಳು ದಾಖಲಾಗಿವೆ. ಒಂದು ಸಾವು ಕೂಡ ಸಂಭವಿಸಿದೆ.

ಕಳೆದ ನಾಲ್ಕು ದಿನದಲ್ಲಿ ರಾಜ್ಯದಲ್ಲಿ ಸೋಂಕು ಪತ್ತೆಯಾಗಿರುವವರ ಸಂಖ್ಯೆ 130ಕ್ಕೂ ಅಧಿಕವಾಗಿದೆ. ಒಟ್ಟಾರೆ 384 ಕೋವಿಡ್‌-19 ಪ್ರಕರಣಗಳು ಈವರೆಗೂ ವರದಿಯಾಗಿದ್ದು, ಅದರಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. 104 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಹೋಗಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಎಲ್ಲರನ್ನು ನಿಗದಿತ ದಿನಾಂಕದವರೆಗೂ ಕ್ವಾರಂಟೈನ್‌ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಕೋವಿಡ್‌-19 ಕುರಿತು ಸುದ್ದಿಗೋಷ್ಠಿಯಲ್ಲಿ ಸಚಿವ ಸುರೇಶ್‌ ಕುಮಾರ್‌ ಮಾಹಿತಿ ನೀಡಿ, ರಾಜ್ಯದಲ್ಲಿ ಈವರೆಗೂ 384 ಕೋವಿಡ್‌-19 ಪ್ರಕರಣಗಳು ವರದಿಯಾಗಿವೆ. ಎ.17ರ 5ಗಂಟೆಯಿಂದ ಎ.18ರ ಸಂಜೆ 5 ಗಂಟೆ ಅವಧಿಯಲ್ಲಿ ಹೊಸದಾಗಿ 25 ಪ್ರಕರಣ ದಾಖಲಾಗಿವೆ. 263 ಜನರನ್ನು ಆಸ್ಪತ್ರೆಗಳಲ್ಲಿ ಪ್ರತ್ಯೇಕಿಸಲಾಗಿದೆ ಮತ್ತು ಮೂವರನ್ನು ಸಂಬಂಧಪಟ್ಟ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಗಳಲ್ಲಿರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹೊಸ 25 ಪ್ರಕರಣಗಳಲ್ಲಿ, ಬೆಂಗಳೂರಿನಿಂದ 3, ಮೈಸೂರು ಹಾಗೂ ಬಾಗಲಕೋಟೆಯಿಂದ ತಲಾ 7, ಕಲಬುರಗಿ ಹಾಗೂ ವಿಜಯಪುರದಿಂದ ತಲಾ 2, ಹುಬ್ಬಳ್ಳಿ ಧಾರವಾಡ, ಗದಗ, ಬೆಳಗಾವಿ ಹಾಗೂ ಮಂಡ್ಯದಿಂದ ತಲಾ 1 ಪ್ರಕರಣ ವರದಿಯಾಗಿವೆ. ರಾಜ್ಯಾದ್ಯಂತ 12,413 ವ್ಯಕ್ತಿಗಳನ್ನು ನಿಗಾವಣೆಯಲ್ಲಿಡಲಾಗಿದೆ. ರಾಜ್ಯದಲ್ಲಿ ಪರೀಕ್ಷಿಸಲಾಗಿರುವ 19,186 ಮಾದರಿಗಳ ಪೈಕಿ 384 ಮಾದರಿಗಳು ಖಚಿತಗೊಂಡಿವೆ. ಇದರಲ್ಲಿ 104 ಮಂದಿ ಗುಣಮುಖರಾಗಿ ದ್ದಾರೆ. ಜಿಲ್ಲಾಡಳಿತಗಳು ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಿ ನಿಯಂತ್ರಣ ಕ್ರಮಗಳನ್ನು ಅನುಸರಿಸುತ್ತಿವೆ ಎಂದು ಹೇಳಿದರು.

14ಕ್ಕೆ ಏರಿದ ಸಾವಿನ ಸಂಖ್ಯೆ
ರಾಜ್ಯದಲ್ಲಿ ಕೋವಿಡ್‌-19 ಸೋಂಕಿತರ ಸಂಖ್ಯೆ 384ಕ್ಕೆ ಏರಿದರೆ ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಶನಿವಾರ ಕೋವಿಡ್‌-19 ಸೋಂಕಿತ 374ನೇ ರೋಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ. ವಿಜಯಪುರದ 374ನೇ ರೋಗಿ, ರೋಗಿ ಸಂಖ್ಯೆ 306 ಮತ್ತು 308ರ ಸಂಪರ್ಕದಲ್ಲಿದ್ದರು ಮತ್ತು ಬೆಂಗಳೂರಿಗೆ ಪ್ರಯಾಣ ಬೆಳೆಸಿರುವ ಹಿನ್ನೆಲೆಯೂ ಇದೆ. ಎ.16 ರಂದು ಹೃದಯಾಘಾತದಿಂದ ಮರಣ ಹೊಂದಿದ್ದರು. ಇವರ ಗಂಟಲ ದ್ರವ ಪರೀಕ್ಷೆಯು ಎ.18ರಂದು ಪಾಸಿಟಿವ್‌ ಬಂದಿರುವುದರಿಂದ ಕೋವಿಡ್‌-19 ಸೋಂಕಿರುವುದು ದೃಢಪಟ್ಟಿದೆ ಎಂದು ವಿವರ ನೀಡಿದರು.

ಕೋವಿಡ್‌-19 ಮುಕ್ತ ಜಿಲ್ಲೆಗಳು
ಚಾಮರಾಜ ನಗರ, ಚಿಕ್ಕಮಗಳೂರು, ಹಾಸನ, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ ಹಾಗೂ ಯಾದಗಿಯರಲ್ಲಿ ಯಾವುದೇ ಪ್ರಕರಣ ಈವರೆಗೂ ದಾಖಲಾಗಿಲ್ಲ. ಚಿತ್ರದುರ್ಗದಲ್ಲಿ ಪತ್ತೆಯಾದ ಒಂದು ಪ್ರಕರಣದಲ್ಲಿ ರೋಗಿ ಗುಣಮುಖರಾಗಿದ್ದಾರೆ. ದಾವಣಗೆರೆಯಲ್ಲಿ ಪತ್ತೆಯಾದ ಎರಡೂ ಪ್ರಕರಣದಲ್ಲಿ ರೋಗಿಗಳು ಗುಣ ಮುಖರಾಗಿದ್ದಾರೆ. ಉಡುಪಿಯಲ್ಲಿ ದಾಖಲಾದ ಮೂರು ಪ್ರಕರಣಗಳಲ್ಲೂ ರೋಗಿಗಳು ಗುಣಮುಖರಾಗಿದ್ದಾರೆ. ತುಮಕೂರಿನ 2 ಪ್ರಕರಣಗಳಲ್ಲಿ ಒಬ್ಬರು ಗುಣಮುಖರಾಗಿದ್ದು,ಮತ್ತೂಬ್ಬರು ಮೃತಪಟ್ಟಿದ್ದಾರೆ.

ಜಿಲ್ಲಾವಾರು ಅಂಕಿಅಂಶ
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಪತ್ತೆಯಾಗಿರುವ ಹೊಸ 3 ಪ್ರಕರಣ ಸಹಿತವಾಗಿ 89 ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 42 ಮಂದಿ ಗುಣಮುಖರಾಗಿದ್ದು, 44 ಮಂದಿಗೆ ಚಿಕಿತ್ಸೆ ನಡೆಯುತ್ತಿದೆ ಮತ್ತು ಮೂವರು ಸಾವನ್ನಪ್ಪಿದ್ದಾರೆ. ಮೈಸೂರಿನ 80 ಸೋಂಕಿತರಲ್ಲಿ 22 ಮಂದಿ ಗುಣಮುಖರಾಗಿದ್ದು, 58 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬಾಗಲಕೋಟೆಯಲ್ಲಿ 21 ಸೋಂಕಿತರಿದ್ದು, ಅದರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಬಳ್ಳಾರಿಯಲ್ಲಿ 13 ಸೋಂಕಿತರು, ಬೆಳಗಾವಿಯಲ್ಲಿ 42 ಸೋಂಕಿತರಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು ಗ್ರಾಮಾಂತರದಲ್ಲಿ 12 ಸೋಂಕಿತರಿದ್ದು, ಅದರಲ್ಲಿ ಒಬ್ಬರು ಗುಣಮುಖರಾಗಿದ್ದಾರೆ. ಬೀದರ್‌ನಲ್ಲಿ 14 ಸೋಂಕಿತರು, ಚಿಕ್ಕಬಳ್ಳಾಪುರದ 16 ಸೋಂಕಿತರಲ್ಲಿ 8 ಮಂದಿ ಗುಣಮುಖರಾಗಿದ್ದು, 2 ಸಾವಾಗಿದೆ. ದಕ್ಷಿಣ ಕನ್ನಡದಲ್ಲಿ 12 ಸೋಂಕಿತರಲ್ಲಿ 11 ಮಂದಿ ಗುಣಮುಖರಾಗಿದ್ದಾರೆ. ಧಾರವಾಡದ 7 ಸೋಂಕಿತರಲ್ಲಿ ಒಬ್ಬರು ಗುಣಮುಖರಾಗಿದ್ದಾರೆ. ಗದಗದ 3 ಸೋಂಕಿತರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿಯ 22 ಪ್ರಕರಣದಲ್ಲಿ ಮೂವರು ಗುಣಮುಖರಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಮಂಡ್ಯದಲ್ಲಿ 12 ಸೋಂಕಿತರು, ಉತ್ತರ ಕನ್ನಡದ 11 ಸೋಂಕಿತರಲ್ಲಿ 9 ಮಂದಿ ಗುಣಮುಖರಾಗಿದ್ದು, ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯಪುರದ 21 ಸೋಂಕಿತರಲ್ಲಿ 19 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಈವರೆಗಿನ 384 ಸೋಂಕಿತರಲ್ಲಿ 104 ಗುಣಮುಖರಾಗಿದ್ದು, 266 ಮಂದಿ ಚಿಕಿತ್ಸೆ ಪಡೆಯುತಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.