ವೆಬ್ ಸೈಟ್ ನೋಡಿ ಆಲ್ಕೋಹಾಲ್ ತಯಾರಿಸಿದರು.ಇನ್ನೇನು ಕುಡಿಯಬೇಕೆನ್ನುವಷ್ಟರಲ್ಲಿಆದದ್ದೆ ಬೇರೆ!
Team Udayavani, Apr 19, 2020, 8:44 AM IST
ತಮಿಳುನಾಡು: ಲಾಕ್ ಡೌನ್ ಕಾರಣದಿಂದ ಎಲ್ಲೆಡೆ ಮದ್ಯದಂಗಡಿಗಳು ಸ್ಥಗಿತಗೊಂಡಿರುವುದರಿಂದ ಬೆಸೆತ್ತ ಇಬ್ಬರು ವ್ಯಕ್ತಿಗಳು ಮನೆಯಲ್ಲಿಯೇ ಶರಾಬು ತಯಾರಿಸಲು ಮುಂದಾಗಿ ಪೊಲೀಸರ ಅತಿಥಿಯಾದ ಘಟನೆ ನಮಕ್ಕಲ್ ಗ್ರಾಮದಲ್ಲಿ ನಡೆದಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
ಜನಪ್ರಿಯ ವಿಡಿಯೋ ವೆಬ್ ಸೈಟ್ ಒಂದರಲ್ಲಿ ಮದ್ಯ ತಯಾರಿಸುವ ವಿಧಾನವನ್ನು ಕಂಡುಕೊಂಡು ಅಗತ್ಯ ವಸ್ತುಗಳನ್ನು ತರಿಸಿಕೊಂಡಿದ್ದರು. ಮಾತ್ರವಲ್ಲದೆ ಅದರಲ್ಲಿ ಯಶಸ್ವಿಯೂ ಆಗಿದ್ದರು. ಆದರೇ ಇನ್ನೇನು ಕುಡಿಯಬೇಕು ಎನ್ನುವಷ್ಟರಲ್ಲಿ ಪೊಲೀಸರು ಬಂದು ಶುಕ್ರವಾರ ಈ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.
ಮಾತ್ರವಲ್ಲದೆ ಲಿಕ್ಕರ್ ತಯಾರಿಸಲು ಇರಿಸಿದ್ದ ವಸ್ತುಗಳನ್ನು ಮತ್ತು ಸ್ಥಳದಲ್ಲಿದ್ದ ಕಂಟೇನರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಅಕ್ರಮ ಮದ್ಯ ತಯಾರಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ತಿಳಿದುಬಂದಿದ್ದು. ಅದ್ದರಿಂದ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೆ ವ್ಯಕ್ತಿಯೊಬ್ಬ ಆಲ್ಕೋಹಾಲ್ ತಯಾರಿಸಿ ಅದರ ಬ್ಯಾರಲ್ ಗಳನ್ನು ಸ್ನಾನಗೃಹದ ನೆಲದಡಿಯಲ್ಲಿ ಹುದುಗಿಸಿಟ್ಟಿದ್ದ. ಕೆಲವು ದಿನಗಳ ನಂತರ ಕುಡಿದರೆ ಉತ್ತಮವಾಗಿರುತ್ತದೆ ಎಂಬ ಯೋಜನೆ ಆತನದಾಗಿತ್ತು. ಆದರೆ ಮಾಹಿತಿ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿ ಆತನನನ್ನು ಬಂಧಿಸಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇದೇ ವೇಳೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.