ಎಪಿಎಂಸಿ ವಾಸ್ತವ ಅರಿಯಲು ಜಿಲ್ಲಾ ಪ್ರವಾಸ

ಕೃಷಿ ಉತ್ಪನ್ನವನ್ನು ಮಾರುಕಟ್ಟೆಗೆ ತರುವಾಗ ತೊಂದರೆ ನೀಡದಂತೆ ಸೂಚನೆ: ಸಚಿವ ಸೋಮಶೇಖರ್‌

Team Udayavani, Apr 19, 2020, 11:11 AM IST

19-April-03

ದಾವಣಗೆರೆ: ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಶನಿವಾರ ದಾವಣಗೆರೆ ಎಪಿಎಂಸಿ ಪ್ರಾಂಗಣದಲ್ಲಿ ಖರೀದಿ ಅಂಗಡಿಯೊಂದಕ್ಕೆ ಭೇಟಿ ನೀಡಿ ಆವಕವಾಗಿದ್ದ ಶೇಂಗಾ ವೀಕ್ಷಿಸಿದ ಸಂದರ್ಭ.

ದಾವಣಗೆರೆ: ಕೊರೊನಾದಿಂದಾಗಿ ಲಾಕ್‌ಡೌನ್‌ ಇರುವ ಹಿನ್ನೆಲೆಯಲ್ಲಿ ಎಪಿಎಂಸಿಗಳಲ್ಲಿನ ಪರಿಸ್ಥಿತಿ ಅರಿಯಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪ್ರವಾಸ ಕೈಗೊಂಡಿರುವುದಾಗಿ ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದರು.

ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಕೃಷಿ ಉತ್ಪನ್ನವನ್ನು ಮಾರಾಟಕ್ಕೆ ಕೊಂಡೊಯ್ಯಲು ಯಾವುದೇ ಅಡ್ಡಿ ಆಗದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಯಾವುದೇ ಕೃಷಿ ಉತ್ಪನ್ನವನ್ನು ರೈತರು ನೇರವಾಗಿ ಎಲ್ಲಿ ಬೇಕಾದರೂ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಗ್ರೀನ್‌ ಪಾಸ್‌ ಇದ್ದರೂ ಕೆಲವು ಚೆಕ್‌ಪೋಸ್ಟ್‌ಗಳಲ್ಲಿ ಹಾಗೂ ಪೊಲೀಸರಿಂದ ತೊಂದರೆ ಉಂಟಾಗುತ್ತಿದೆ ಎಂಬ ದೂರಿನ ಮೇರೆಗೆ ರೈತರಿಗೆ ಯಾವುದೇ ರೀತಿ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ರೈತರು ತಾವು ಬೆಳೆದ ಬೆಳೆಯನ್ನು ಎಪಿಎಂಸಿಗೆ ಮಾರಾಟಕ್ಕೆ ತರುವಲ್ಲಿ ಯಾವುದೇ ರೀತಿಯ ಅಡಚಣೆಯಾಗಬಾರದು. ಈ ನಿಟ್ಟಿನಲ್ಲಿ ಪೊಲೀಸರು ಸೂಕ್ತ ಕ್ರಮ ಜರುಗಿಸಬೇಕು. ಚೆಕ್‌ಪೋಸ್ಟ್‌ಗಳಲ್ಲಿ ರೈತರ ವಾಹನಗಳಿಗೆ ಯಾವುದೇ ರೀತಿಯ ನಿರ್ಬಂಧ ಹಾಕಬಾರದು. ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ಬರುವಂತಹ ವಾಹನಗಳನ್ನು ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಸಿ, ವಾಹನ ಸೇರಿದಂತೆ ಚಾಲಕರು ಹಾಗೂ ಕ್ಲೀನರ್‌ಗಳಿಗೆ ಸ್ಪ್ರೇ ಮಾಡಬೇಕು. ಮೇಲಾಗಿ ಏ. 20ರ ನಂತರ ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಸಡಿಲಗೊಳಿಸುವ ಸಾಧ್ಯತೆ ಇರುವುದರಿಂದ ಪರಿಸ್ಥಿತಿ ಸುಧಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಸದ ಜಿ.ಎಂ. ಸಿದ್ದೇಶ್ವರ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ಎಸ್‌.ವಿ. ರಾಮಚಂದ್ರ, ಎಸ್‌.ಎ. ರವೀಂದ್ರನಾಥ್‌, ಮೇಯರ್‌ ಬಿ.ಜಿ. ಅಜಯ್‌ ಕುಮಾರ್‌, ಎಪಿಎಂಸಿ ಅಧ್ಯಕ್ಷ ಶಾಂತರಾಜ, ಮಾಜಿ ಅಧ್ಯಕ್ಷ ಮುದೇಗೌಡ್ರ ಗಿರೀಶ್‌, ಉಪಾಧ್ಯಕ್ಷ ಎಸ್‌.ಕೆ. ಚಂದ್ರಶೇಖರ್‌, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಉಪವಿಭಾಗಾ ಧಿಕಾರಿ ಮಮತಾ ಹೊಸಗೌಡರ್‌, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ರಾಜೀವ್‌, ತಹಶೀಲ್ದಾರ್‌ ಬಿ.ಎನ್‌. ಗಿರೀಶ್‌, ಎಪಿಎಂಸಿ ಕಾರ್ಯದರ್ಶಿ ಪ್ರಭು, ಎಪಿಎಂಸಿ ಸಹಾಯಕ ನಿರ್ದೇಶಕ ಸೋಮಶೇಖರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.