ಮಾರುಕಟ್ಟೆಗೆ ಬೆಳೆ ತರಲು ನಿರ್ಬಂಧ ಇಲ್ಲ
ಎಪಿಎಂಸಿಗೆ ಬರುವ ರೈತರು-ಹಮಾಲರಿಗೆ ಊಟೋಪಹಾರ ವ್ಯವಸ್ಥೆ: ಸಚಿವ ಸೋಮಶೇಖರ್ ಸೂಚನೆ
Team Udayavani, Apr 19, 2020, 11:17 AM IST
ಚಿತ್ರದುರ್ಗ: ರೈತರು ಬೆಳೆಯನ್ನು ಮಾರುಕಟ್ಟೆಗೆ ತರಲು ಚೆಕ್‌ಪೋಸ್ಟ್ ಹಾಗೂ ಪೊಲೀಸರಿಂದ ಅಡೆತಡೆಗಳಿಲ್ಲ. ರೈತರು ತಮ್ಮ ಬೆಳೆಯನ್ನು ಎಪಿಎಂಸಿ, ಇನ್ನಿತರೆ ಮಾರುಕಟ್ಟೆಗೆ ತೆಗೆದುಕೊಂಡು ಹೋಗಬಹುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಶನಿವಾರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹತ್ತಿ ಮಾರುಕಟ್ಟೆ, ಕಡಲೆ ಖರೀದಿ ಕೇಂದ್ರ ಹಾಗೂ ಚಿತ್ರದುರ್ಗ ಜಿಲ್ಲಾ ಸಹಕಾರಿ ಬ್ಯಾಂಕ್‌ಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಯಾವುದೇ ಬೆಳೆ ಬೆಳೆಯಲಿ, ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಸಮಸ್ಯೆಯಾಗಬಾರದು. ಮಾರುಕಟ್ಟೆಗೆ ಆಗಮಿಸುವ ಸಿಬ್ಬಂದಿ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಪ್ರತಿಯೊಬ್ಬರು ಕೂಡ ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯವಹಾರ ನಡೆಸಬೇಕು ಎಂದರು. ಎಪಿಎಂಸಿಗೆ ಬರುವ ರೈತರು ಹಾಗೂ ಹಮಾಲರಿಗೆ ಊಟೋಪಹಾರದ ವ್ಯವಸ್ಥೆ ಮಾಡಬೇಕು. ಕ್ಯಾಂಟಿನ್ ತೆರೆದು ಇಲ್ಲಿ ಪಾರ್ಸಲ್ ವ್ಯವಸ್ಥೆ ಮಾಡಿ. ಕ್ಯಾಂಟೀನ್ ತೆರೆಯದಿದ್ದಲ್ಲಿ ಸಮಿತಿಯಿಂದ ಪಾರ್ಸಲ್ ವ್ಯವಸ್ಥೆ ಮಾಡಲು ಸೂಚಿಸಿದರು.
ಜಿಲ್ಲೆಗೆ ಮೂರು ಕೋಲ್ಡ್ ಸ್ಟೋರೇಜ್: ಚಿತ್ರದುರ್ಗ ಎಪಿಎಂಸಿ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಜಿಲ್ಲೆಗೆ ಅಗತ್ಯವಾಗಿ ಬೇಕಾಗಿರುವ ಕೋಲ್ಡ್ ಸ್ಟೋರೇಜ್ ಸಿಸ್ಟಂ ಅಳವಡಿಕೆಗೆ ಪ್ರಸ್ತಾವನೆ ಕಳುಹಿಸುವಂತೆ ಅ ಧಿಕಾರಿಗಳಿಗೆ ಸೂಚನೆ ನೀಡಿದರು. ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಚಿತ್ರದುರ್ಗ ಎಪಿಎಂಸಿಗೆ 2 ಕೋಲ್ಡ್ ಸ್ಟೋರೇಜ್ ಹಾಗೂ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಚಳ್ಳಕೆರೆಗೆ 1 ಕೋಲ್ಡ್ ಸ್ಟೋರೇಜ್ ಅಳವಡಿಕೆ ಮಾಡುವಂತೆ ಮನವಿ ಮಾಡಿದ್ದಾರೆ. ಅಗತ್ಯವಿರುವ ಕಡೆ ಕೋಲ್ಡ್ ಸ್ಟೋರೇಜ್ ಅಳವಡಿಕೆಗೆ ಪ್ರಸ್ತಾವನೆ ಕಳಿಸುವಂತೆ ಸಚಿವರು ಅ ಧಿಕಾರಿಗಳಿಗೆ ಸೂಚಿಸಿದರು.
ಕೋಲ್ಡ್ ಸ್ಟೋರೇಜ್ ಅಳವಡಿಕೆಯಿಂದ ತರಕಾರಿ ಶೇಖರಿಸಿ ಮಾರಾಟ ಮಾಡಲು ಅನುಕೂಲವಾಗಲಿದ್ದು, ತರಕಾರಿ ಕೊಳೆಯುವುದನ್ನು ತಪ್ಪಿಸಬಹುದಾಗಿದೆ ಎಂದರು. ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಟಿ. ರಘುಮೂರ್ತಿ, ತಾಪಂ ಅಧ್ಯಕ್ಷ ಲಿಂಗರಾಜು, ಸಹಕಾರ ಸಂಘದ ನಿರ್ದೇಶಕ ಎಸ್.ಆರ್. ಗಿರೀಶ್, ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಟಿ.ಎ. ಮಹೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.