ಸಂಕಷ್ಟದ ನಡುವೆ ಬೆಲೆ ಏರಿಕೆ ಬಿಸಿ
Team Udayavani, Apr 19, 2020, 2:05 PM IST
ಸಾಂದರ್ಭಿಕ ಚಿತ್ರ
ಚಿಕ್ಕಬಳ್ಳಾಪುರ: ಕೋವಿಡ್ 19 ಸಂಕಷ್ಟದಲ್ಲಿ ಸಿಲುಕಿ ಒಪ್ಪೊತ್ತಿನ ಊಟಕ್ಕಾಗಿ ಪರದಾಡುತ್ತಿರುವ ಬಡವರಿಗೆ, ನಿರ್ಗತಿಕರಿಗೆ ಸಾಕಷ್ಟು ಮಂದಿ ದಾನಿಗಳು ಮುಂದೆ ಬಂದು ಉದಾರತೆ ಯಿಂದ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಒಂದೆಡೆ, ಮತ್ತೂಂದೆಡೆ ಕೋವಿಡ್ 19 ಲಾಕ್‌ಡೌನ್ ಬಂಡವಾಳ ಮಾಡಿಕೊಂಡು ಕೆಲವರು ಗ್ರಾಹಕರಿಗೆ ಅಗತ್ಯ ವಸ್ತುಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿರುವ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.
ಶೇ.20ರಿಂದ 30 ರಷ್ಟು ಹೆಚ್ಚಳ: ಕೋವಿಡ್ 19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ತಿಂಗಳಿಂದ ಮನೆಯಲ್ಲಿ ಲಾಕ್ ಡೌನ್ ಆಗಿರುವ ನಾಗರಿಕರು ತಮಗೆ ಅವಶ್ಯಕ ವಾದ ದಿನಸಿ ಪದಾರ್ಥಗಳ ಖರೀದಿಗೆ ಬಂದಾಗ ಬೆಲೆ ಏರಿಕೆ ಕೈ ಕಚ್ಚುತ್ತಿದೆ. ಅವಶ್ಯಕವಾದ ಅಕ್ಕಿ, ಸಕ್ಕರೆ, ಟೀ., ಗೋಧಿ, ಕಾಫಿ ಪುಡಿ, ಮೊಟ್ಟೆ, ಉಪ್ಪು, ಬೇಳೆಕಾಳುಗಳು ಮತ್ತಿತರ ವಸ್ತುಗಳು ನಿಗದಿತ ಬೆಲೆಗಿಂತ ಶೇ.20 ರಿಂದ 30 ರಷ್ಟು ಬೆಲೆ ಹೆಚ್ಚಿಸಿ ಮಾರಾಟ ಮಾಡುತ್ತಿರುವುದು ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಅನಿವಾರ್ಯವಾಗಿ ಕೇಳಿದ ಬೆಲೆಗೆ ಖರೀದಿ ಮಾಡುವಂತಾಗಿದೆ.
ವಿಶೇಷವಾಗಿ ಮಾರುಕಟ್ಟೆಯಲ್ಲಿ ಅಕ್ಕಿ,ಸಕ್ಕರೆ, ನುಚ್ಚು ಮತ್ತಿತರ ಅವಶ್ಯಕ ಬೆಲೆಗಳ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಗಮನ ಸೆಳೆದರೂ ಪ್ರಯೋಜನವಿಲ್ಲ ಎಂಬ ಆರೋಪ ಜನರದ್ದಾಗಿದೆ. ಇನ್ನೂ ಲಾಕ್‌ಡೌನ್ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಬೇಡಿಕೆಯಂತೆ ಸರಬರಾಜು ಆಗುತ್ತಿಲ್ಲ.ಸಗಟು ಮಳಿಗೆಗಳಲ್ಲಿ ನಮಗೆ ಬೆಲೆ ಜಾಸ್ತಿಯಾಗಿದೆ. 5 ಸಾವಿರ ರೂ.ಗೆ ಖರೀದಿ ಮಾಡಿಕೊಂಡು ಬರುತ್ತಿದ್ದ ವಸ್ತುಗಳು ಈಗ ಏಳು, ಎಂಟು ಸಾವಿರ ಕೊಡಬೇಕೆಂದು ನಗರದ ಎಪಿಎಂಸಿ ಬಳಿ ದಿನಸಿ ಅಂಗಡಿ ನಡೆಸುತ್ತಿರುವ ಹೆಸರು ಹೇಳಲು ಇಚ್ಛಿಸದ ಮಾಲೀಕ ಉದಯವಾಣಿಗೆ ತಿಳಿಸಿದರು.
ಹಳ್ಳಿ ಜನರ ಪಾಡು ಕೇಳ್ಳೋರಿಲ್ಲ: ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಗಳಿಗೆ ಲಾಕ್ ಡೌನ್ ಅನುಷ್ಠಾನದ ವಿಚಾರದಲ್ಲಿ ದಿನ ಬೆಳಗಾ ದರೆ ನಗರದ ಜನತೆಯನ್ನು ನಿಯಂತ್ರಿಸುವುದರ ಜೊತೆಗೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಸುಧಾರಿಸಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಆದರೆ ಗ್ರಾಮೀಣ ಭಾಗದಲ್ಲಿ ಜನರ ಪರಿಸ್ಥಿತಿ ಲಾಕ್‌ಡೌನ್ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟದಲ್ಲಿದ್ದರೂ ಯಾರು ಗಮನ ಕೊಡುವವರಿಲ್ಲ. ನಗರಕ್ಕಿಂತ ಗ್ರಾಮೀಣ ಭಾಗದ ಕಿರಾಣಿ ಅಂಗಡಿಗಳಲ್ಲಿ ಅಗತ ವಸ್ತುಗಳ ಬೆಲೆ ದುಪ್ಪಟ್ಟುಗೊಂಡಿವೆ.
ಜಿಲ್ಲೆಯಲ್ಲಿ ಗೌರಿಬಿದನೂರು, ಚಿಂತಾಮಣಿ ನಗರಗಳಲ್ಲಿ ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಸಾರ್ವಜನಿಕರಿಂದ ಇಲಾಖೆಗೆ ಬಂದಿದೆ. ಈ ಬಗ್ಗೆ ನಾವು ಕೂಡ ಪರಿಶೀಲನೆ ನಡೆಸಿ ಸಂಬಂಧಪಟ್ಟವರಿಗೆ ಸೂಕ್ತ ಮಾರ್ಗದರ್ಶನ ನೀಡಿದ್ದೇವೆ. ಯಾರೇ ಅಂಗಡಿ ಮಾಲೀಕರು ಜನರ ಅಗತ್ಯ ವಸ್ತುಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡಿದರೆ ಸೂಕ್ತ ಕ್ರಮ ವಹಿಸುತ್ತೇವೆ. – ಸೋಮಶೇಖರಪ್ಪ, ಉಪ ನಿರ್ದೇಶಕರು, ಆಹಾರ ಇಲಾಖೆ
-ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.