ನರೇಗಾ ಸದ್ಬಳಕೆ ಮಾಡಿಕೊಳ್ಳಿ: ರಾಜಣ್ಣ
Team Udayavani, Apr 19, 2020, 4:38 PM IST
ಚನ್ನಪಟ್ಟಣ: ಲಾಕ್‌ಡೌನ್‌ನಲ್ಲೇ ನರೇಗಾ ಯೋಜನೆಯಡಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಾಮಗಾರಿ ಮಾಡಬಹುದಾಗಿದೆ. ಜನರು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಾಪಂ ಅಧ್ಯಕ್ಷ ಎಚ್. ರಾಜಣ್ಣ ಕರೆ ನೀಡಿದರು.
ತಾಪಂ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ನಮ್ಮ ಉದ್ಯೋಗ ನಮ್ಮ ಗ್ರಾಮದಲ್ಲೇ, ನಮ್ಮ ಗ್ರಾಮ ಅಭಿವೃದ್ಧಿ, ನಮ್ಮ ಕೈಯಲ್ಲೇ,, ಕಾರ್ಯಕ್ರಮದಡಿ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೂಲಿ ಕಾರ್ಮಿಕರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ನರೇಗಾ ಯೋಜನೆಯಡಿ ಕಾಮಗಾರಿ ನಡೆಸಲು ಅವಕಾಶ ನೀಡಲಾಗಿದೆ. ತಮ್ಮ ಗ್ರಾಮದಲ್ಲೇ ಅಂತರ ಕಾಪಾಡಿಕೊಂಡು ಕೆಲಸ ನಿರ್ವಹಿಸಬಹುದು. ನರೇಗಾ ಯೋಜನೆಯಡಿ ಕನಿಷ್ಠ 100 ದಿನಗಳ ಉದ್ಯೋಗ ಪಡೆಯಬಹುದಾಗಿದೆ ಎಂದರು.
ತಾಪಂ ಇಒ ಚಂದ್ರ ಮಾತನಾಡಿ, ವಿವಿಧ ಇಲಾಖೆಗಳ ಮೂಲಕ ನರೇಗಾ ಯೋಜನೆಯಡಿ ಕೆಲಸ ಮಾಡಬಹುದಾಗಿದೆ. ರೇಷ್ಮೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ವಸತಿ ಯೋಜನೆಯಡಿಯಲ್ಲಿ ಮನೆ ನಿರ್ಮಾಣ ಸೇರಿದಂತೆ ನರೇಗಾ ಯೋಜನೆಗೆ ಒಳಪಡುವ ಕೆಲಸ ನಿಗದಿಪಡಿಸಿರುವ ಮಂದಿ ಬಳಸಿ, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕೆಲಸ ನಿರ್ವಹಿಸಬಹುದು ಎಂದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಿದ್ಧರಾಜು ಹಾಗೂ ತಾಪಂ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.