ಮಾ.20ರಂದು ನೀವು ಈಬಸ್ಸಿನಲ್ಲಿ ಪ್ರಯಾಣಿಸಿದ್ದೀರಾ ಹಾಗಾದ್ರೆ ತಕ್ಷಣವೇ ಟೆಸ್ಟ್ ಮಾಡಿಸಿಕೊಳ್ಳಿ
ಬಸ್ ಸಂಖ್ಯೆ KA 51, AD 5832ರ ಪ್ರಯಾಣಿಕರಿಗೆ ದ.ಕ. ಜಿಲ್ಲಾಧಿಕಾರಿ ಸೂಚನೆ
Team Udayavani, Apr 19, 2020, 8:24 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಗಳೂರು: ಕಳೆದ ತಿಂಗಳು 20ನೇ ತಾರೀಖಿನಂದು ನೀವು ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸಿದ್ದಲ್ಲಿ ಈ ಸುದ್ದಿಯನ್ನೊಮ್ಮೆ ಓದಿ. ಇದನ್ನು ಮಂಗಳೂರು ಜಿಲ್ಲಾಧಿಕಾರಿಯವರು ಪತ್ರಿಕಾ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.
ಮಾರ್ಚ್ 20ನೇ ತಾರೀಖಿನಂದು ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಮಂಗಳೂರಿಗೆ ಹೊರಟಿದ್ದ ಭಾರತೀ ಟ್ರಾವೆಲ್ಸ್ ನ ಬಸ್ ಸಂಖ್ಯೆ KA 51, AD 5832ರಲ್ಲಿ ಪ್ರಯಾಣಿಸಿದ್ದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ 19 ವೈರಸ್ ಪರೀಕ್ಷೆಯಲ್ಲಿ ಇಂದು ಪಾಸಿಟಿವ್ ಸಾಬೀತಾಗಿದೆ.
ಹಾಗಾಗಿ ಈ ದಿನಾಂಕದಂದು ಈ ಬಸ್ಸಿನಲ್ಲಿ ಪ್ರಯಾಣಿಸಿರುವವರೆಲ್ಲರೂ ತಮ್ಮ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ತಾಲೂಕು ಆರೋಗ್ಯ ಕೇಂದ್ರಕ್ಕೆ ತೆರಳಿ ವೈದ್ಯಕೀಯ ತಪಾಸಣೆ ಮಾಡಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ವಿನಂತಿಸಿಕೊಂಡಿದ್ದಾರೆ.
ಆ ದಿನ ಈ ಬಸ್ಸಿನಲ್ಲಿ 32 ಜನ ಪ್ರಯಾಣಿಸಿದ್ದು ಅವರೆಲ್ಲರೂ ತಕ್ಷಣವೇ ಸೋಂಕು ಪತ್ತೆ ಪರೀಕ್ಷೆಗೆ ಒಳಗಾಗುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM Siddaramaiah: ಕರಾವಳಿಗೆ ಎರಡು ಸರಕಾರಿ ಮೆಡಿಕಲ್ ಕಾಲೇಜು
CM Siddaramaiah: ಜಾತಿಗಣತಿ ವರದಿ ಮುಂದಿನ ಸಂಪುಟ ಸಭೆಯಲ್ಲಿ ಮಂಡನೆ
Mangaluru: ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಳುಗಳಿಗೆ ಕೃಪಾಂಕ ನೀಡಲು ತೀರ್ಮಾನ : ಸಿಎಂ
Fraud: ಆನ್‌ಲೈನ್ ಟ್ರೇಡಿಂಗ್: ಮಹಿಳೆಗೆ 15.27 ಲಕ್ಷ ರೂ. ವಂಚನೆ
Mangaluru: ಆರೋಪಿಗೆ 20 ವರ್ಷ ಕಠಿನ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.