ಕೋವಿಡ್ ವಿರುದ್ಧದ ಹೋರಾಟಕ್ಕೆ 40 ಲಕ್ಷ ಸ್ವಯಂ ಸೇವಕರ ಪಡೆ
Team Udayavani, Apr 20, 2020, 12:04 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋವಿಡ್ ಸಾಂಕ್ರಮಿಕ ಕಾಯಿಲೆ ವಿರುದ್ಧ ಸರಕಾರದ ಜೊತೆ ಸೇರಿ ಹೋರಾಡಲು ಸುಮಾರು 40 ಲಕ್ಷ ಸ್ವಯಂ ಸೇವಕರು ನೋಂದಾಯಿಸಿಕೊಂಡಿದ್ದಾರೆ.
ಇವರಲ್ಲಿ ವೈದ್ಯರು, ನಿವೃತ್ತ ಸರ್ಕಾರಿ ಮತ್ತು ಸೇನಾ ವೈದ್ಯಕೀಯ ಸೇವೆ ಅಧಿಕಾರಿಗಳು ಮತ್ತು ನ್ಯಾಷನಲ್ ಕೆಡೆಟ್ ಕಾರ್ಪ್ಸ್ ಸದಸ್ಯರು ಸೇರಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸದ್ಯ ಇವರಲ್ಲಿ ವೈದ್ಯರು ಮತ್ತು ಇತರ ಕಾರ್ಯಕರ್ತರ ಸಂಪೂರ್ಣ ಮಾಹಿತಿಗಳನ್ನು ಪ್ರತ್ಯೇಕವಾಗಿ ಪಟ್ಟಿ ಮಾಡುವ ಕೆಲಸ ನಡೆಯುತ್ತಿದೆ. ಇದರಿಂದ ಜಿಲ್ಲಾ ಆಡಳಿತಕ್ಕೆ ಸ್ವಯಂ ಕಾರ್ಯಕರ್ತರ ಮಾಹಿತಿ ತ್ವರಿತವಾಗಿ ದೊರಕುತ್ತದೆ. ಸ್ವಯಂ ಕಾರ್ಯಕರ್ತರ ಅರ್ಹತೆ ಆಧಾರದ ಮೇಲೆ ಅವರಿಗೆ ಕೆಲಸ ಹಂಚಲಾಗುತ್ತಿದೆ.
ಭಾರತಕ್ಕೆ ವಿಶ್ವಸಂಸ್ಥೆ ಅಭಿನಂದನೆ
ಜಾಗತಿಕ ಪಿಡುಗು ಕೋವಿಡ್ 19 ವೈರಸ್ ನಿಂದಸಂಕಷ್ಟ ಎದುರಿಸುತ್ತಿರುವ ದೇಶಗಳಿಗೆ ಔಷಧ ಪೂರೈಸಿರುವ ಭಾರತಕ್ಕೆ ವಿಶ್ವ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರೆಸ್ ಅಭಿನಂದನೆ ಸಲ್ಲಿಸಿದ್ದಾರೆ.
ವೈರಸ್ ವಿರುದ್ಧ ಹೋರಾಡುತ್ತಿರುವ ದೇಶಗಳಿಗೆ ಜಾಗತಿಕವಾಗಿ ಒಗ್ಗಟ್ಟು ಪ್ರದರ್ಶಿಸಬೇಕು. ಇಂತಹ ಪರಿಸ್ಥಿತಿಯಲ್ಲಿ ಪ್ರತಿ ದೇಶವೂ ಇತರೆ ರಾಷ್ಟ್ರಗಳಿಗೆ ಸಹಾಯಹಸ್ತ ಚಾಚಬೇಕು. ಹೀಗೆ ನೆರವು ನೀಡುವ ದೇಶಗಳನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಸೋಂಕಿನಿಂದ ಆಪತ್ತಿಗೆ ಸಿಲುಕಿರುವ ದೇಶಗಳಿಗೆ ಭಾರತವು ಔಷಧ ಮತ್ತಿತರ ಸೇವೆಗಳನ್ನು ಸರಬರಾಜು ಮಾಡಲು ಶ್ರಮಿಸುತ್ತಿದೆ ಎಂದು ಆ್ಯಂಟೊನಿಯೊ ಗುಟೆರೆಸ್ ವಕ್ತಾರ ಶ್ಲಾಘಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.