ದಿನಂಪ್ರತಿ 5ಸಾವಿರಕ್ಕೂ ಅಧಿಕ ಕೋವಿಡ್ 19 ಪರೀಕ್ಷೆ; ದಾಖಲೆ ಬರೆದ ಆಂಧ್ರಪ್ರದೇಶ ವೈದ್ಯರು
ಕ್ಷಿಪ್ರ ಪರೀಕ್ಷಾ ಕಿಟ್ಸ್ (rapid test kits) ಅನ್ನು ಉಪಯೋಗಿಸದೇ ಸಾಮಾನ್ಯ ಪರೀಕ್ಷೆ ಮೂಲಕವೇ ವೈದ್ಯರುಗಳು ದಾಖಲೆಯ ಸಾಧನೆ
Team Udayavani, Apr 20, 2020, 10:47 AM IST
ಅಮರಾವತಿ(ಆಂಧ್ರಪ್ರದೇಶ):ಮಾರಣಾಂತಿಕ ಕೋವಿಡ್ 19 ವೈರಸ್ ಪರೀಕ್ಷೆಯಲ್ಲಿ ಆಂಧ್ರಪ್ರದೇಶ ವೈದ್ಯರು ದಾಖಲೆ ಬರೆದಿದ್ದು, ದಿನಂಪ್ರತಿ 5,508 ಮಂದಿ ಪರೀಕ್ಷೆಯ ನಡೆಸುವ ಮೂಲಕ ಅತೀ ಹೆಚ್ಚಿನ ಸಂಖ್ಯೆ ಪರೀಕ್ಷೆ ನಡೆಸಿದ ಹೆಗ್ಗಳಿಕಗೆ ಆಂಧ್ರಪ್ರದೇಶ ಪಾತ್ರವಾಗಿದೆ ಎಂದು ವರದಿ ತಿಳಿಸಿದೆ.
ಮುಖ್ಯಮಂತ್ರಿ ವೈಎಸ್ ಜಗಮೋಹನ್ ರೆಡ್ಡಿ ನೇತೃತ್ವದಲ್ಲಿ ಅಮರಾವತಿಯಲ್ಲಿ ನಡೆದ ಪುನರ್ ಪರಿಶೀಲನಾ ಸಭೆಯಲ್ಲಿ ಈ ಮಾಹಿತಿಯನ್ನು ಬಹಿರಂಗಗೊಳಿಸಿದ್ದಾರೆ. ಕೋವಿಡ್ ವೈರಸ್ ವಿಚಾರದಲ್ಲಿ ರಾಜ್ಯ ಸರ್ಕಾರ ಕೈಗೊಂಡ ಪರೀಕ್ಷೆಯ ಸಾಧನೆಯ ಬಗ್ಗೆ ಅಧಿಕಾರಿಗಳು ವಿವರಣೆ ನೀಡಿದ್ದರು.
ಕ್ಷಿಪ್ರ ಪರೀಕ್ಷಾ ಕಿಟ್ಸ್ (rapid test kits) ಅನ್ನು ಉಪಯೋಗಿಸದೇ ಸಾಮಾನ್ಯ ಪರೀಕ್ಷೆ ಮೂಲಕವೇ ವೈದ್ಯರುಗಳು ದಾಖಲೆಯ ಸಾಧನೆ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದರು.
ಈಗಾಗಲೇ 17,500 ಮಂದಿಯ ಪರೀಕ್ಷೆ ನಡೆಸಲಾಗಿದೆ. ಇದಕ್ಕೆ ಬೇಕಾದ ಅಗತ್ಯ ಅನುಕೂಲಗಳನ್ನು ಮಾಡಿಕೊಳ್ಳಲಾಗುತ್ತಿದೆ. ಕರ್ನೂಲ್, ಗುಂಟೂರು, ಕೃಷ್ಣಾ ಮತ್ತು ನೆಲ್ಲೂರು ಜಿಲ್ಲೆಗಳು ಕೋವಿಡ್ 19 ವೈರಸ್ ಹೆಚ್ಚು ಹರಡಿರುವುದಾಗಿ ತಿಳಿಸಿದ್ದಾರೆ.
ಕೋವಿಡ್ 19 ವೈರಸ್ ಅನ್ನು ಹೊಡೆದೋಡಿಸುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು, ಸಿಬ್ಬಂದಿಗಳು, ಪೊಲೀಸರು, ವೈದ್ಯರು ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಸಿಎಂ ರೆಡ್ಡಿ ಅಧಿಕಾರಿಗಳು ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.