ಸಂಕಷ್ಟದಲ್ಲಿರುವವರಿಗೆ ಸಿಗುತ್ತಿಲ್ಲ ಪರಿಹಾರ
Team Udayavani, Apr 20, 2020, 12:02 PM IST
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಭಾನುವಾರ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿತು.
ಬೆಂಗಳೂರು: ಮಹಾಮಾರಿ ಕೋವಿಡ್ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಲಾಕ್‌ಡೌನ್ ಪಾಲನೆ ಹಾಗೂ ಸಂಕಷ್ಟದಲ್ಲಿರುವವರಿಗೆ ಸೂಕ್ತ ಪರಿಹಾರ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗ ಭಾನುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಲಾಕ್‌ಡೌನ್ ಅವಧಿಯಲ್ಲಿ ಸರ್ಕಾರ ಕೈಗೊಳ್ಳಬೇಕಾದ 15 ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರ ಕೇವಲ ಆದೇಶಗಳನ್ನು ಮಾಡುತ್ತಿದ್ದು ಯಾವುದೂ ಕಾರ್ಯರೂಪಕ್ಕೆ ಬರುತ್ತಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ತಪಾಸಣೆ ನಡೆಸುತ್ತಿಲ್ಲ. ರೈತರು ಬೆಳೆದ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಸೂಕ್ತ ವ್ಯವಸ್ಥೆ ಕಲ್ಪಿಸದೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ವಲಸೆ ಕಾರ್ಮಿಕರಿಗೆ ಸರ್ಕಾರ ನೀಡುತ್ತಿರುವ ಪರಿಹಾರ ತಲುಪುತ್ತಿಲ್ಲ ಎಂದು ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ತುರ್ತಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಲಹೆ ರೂಪದ ಮನವಿ ಸಲ್ಲಿಸಿದ್ದಾರೆ.
ಪ್ರಮುಖ ಅಂಶಗಳು
? ಕೋವಿಡ್ ರಾಷ್ಟ್ರವ್ಯಾಪ್ತಿ ಹರಡಿರುವುದರಿಂದ ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಬೇಕು. ಲಾಕ್‌ಡೌನ್ ಅವಧಿಯಲ್ಲಿ ಜನರ ಸಂಕಷ್ಟಕ್ಕೆ ಎಲ್ಲಾ ರೀತಿಯ ಆರ್ಥಿಕ ಹಾಗೂ ಇನ್ನಿತರ ಸಹಾಯ ನೀಡಲು ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಬೇಕು.
? ಕೋವಿಡ್ ಹರಡುವಿಕೆ ತಡೆಯಲು ಪ್ರತಿ ಜಿಲ್ಲೆಯಲ್ಲಿ ಸುಸಜ್ಜಿತ ಲ್ಯಾಬ್ ತೆರೆಯಬೇಕು.
? ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರು ಮುಂತಾದ ಸಿಬ್ಬಂದಿ ಸಂಬಳವನ್ನು ಕೂಡಲೇ ಪಾವತಿಸಿ, ಅವರಿಗೆ ವಿಶೇಷ ಭತ್ಯೆ (ಕನಿಷ್ಠ ಸಂಬಳದ
ಎರಡು ಪಟ್ಟು) ನೀಡುವುದು.
? ರೆಡ್‌ಝೋನ್ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಸೀಲ್‌ಡೌನ್ ಮಾಡುವುದು
? ಕಾರ್ಮಿಕರು, ಕುಶಲಕರ್ಮಿಗಳಿಗೆ ಪ್ರತಿ ತಿಂಗಳು ಕನಿಷ್ಠ 10 ಕೆ.ಜಿ. ಅಕ್ಕಿ, ಹಾಲು, 2 ಲೀಟರ್ ಅಡುಗೆ ಎಣ್ಣೆ, ತರಕಾರಿ ಮುಂತಾದ ಪದಾರ್ಥಗಳನ್ನು ಪ್ರತಿ ತಿಂಗಳ ಮೊದಲ ವಾರ ಒದಗಿಸಬೇಕು. ಇಂದಿರಾ ಕ್ಯಾಂಟಿನ್ ಮೂಲಕ ಪ್ರತಿನಿತ್ಯ ಉಚಿತ ಆಹಾರ ಪೂರೈಸಬೇಕು.
? ಕಾರ್ಮಿಕರಿಗೆ ಕೋವಿಡ್ ವೈದ್ಯಕೀಯ ತಪಾಸಣೆ ಮಾಡಿ, ಊರುಗಳಿಗೆ ಹೋಗಲು ಸಾರಿಗೆ ವ್ಯವಸ್ಥೆ ಕಲ್ಪಿಸುವುದು.
? ಹೂವು, ಹಣ್ಣು, ತರಕಾರಿ ಹಾಗೂ ಬೆಳೆಗಳ ಕಟಾವಿಗೆ ಅವಕಾಶ ಕಲ್ಪಿಸಿ, ಮಾರಾಟ ಮಾಡಲು ಸಾರಿಗೆ ವ್ಯವಸ್ಥೆ, ಮಾರುಕಟ್ಟೆ ಒದಗಿಸುವುದು.
? ಕೋವಿಡ್ ವಿಚಾರವಾಗಿ ನಿರ್ದಿಷ್ಟ ಜಾತಿ, ಧರ್ಮ, ವರ್ಗಗಳನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಶಾಸಕರು, ಸಂಸದರು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟವರ ವಿರುದ್ದ ಕಾನೂನು ಕ್ರಮ ಜರುಗಿಸುವುದು.
? ಲಾಕ್‌ಡೌನ್ ಅವಧಿಯಲ್ಲಿ ನರೇಗಾ ಯೋಜನೆಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಡಲು ಕ್ರಮ ಜರುಗಿಸುವುದು.
? ಕುಶಲಕರ್ಮಿ ಸಮುದಾಯಗಳಿಗೆ ವಿಶೇಷ ಪ್ಯಾಕೇಜ್ ರೂಪಿಸಿ, ಪ್ರತಿಯೊಬ್ಬರಿಗೆ ಪ್ರತಿ ತಿಂಗಳೂ ಕನಿಷ್ಠ 10,000 ರೂ.ನೀಡತಕ್ಕದ್ದು.
? ಬಡವರಿಗೆ ಹಂಚಿಕೆ ಮಾಡುತ್ತಿರುವ ಆಹಾರ ಪದಾರ್ಥಗಳ ಕಿಟ್‌ಗಳ ಮೇಲೆ ಆಡಳಿತ ಪಕ್ಷದ ಶಾಸಕರು ಪಕ್ಷದ ಚಿನ್ಹೆ ಹೊಂದಿರುವ ಲೇಬಲ್‌ಗಳನ್ನು ಅಂಟಿಸುತ್ತಿರುವುದನ್ನು ತಡೆದು ಅವರ ವಿರುದಟಛಿ ಕಾನೂನು ಕ್ರಮ ತೆಗೆದುಕೊಳ್ಳುವುದು.
? ಹದಗೆಟ್ಟಿರುವ ರಾಜ್ಯ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಆರ್ಥಿಕ ತಜ್ಞರು, ಉದ್ಯಮಿಗಳು, ಕಾರ್ಮಿಕರ ನ್ನೊಳಗೊಂಡ ಕಾರ್ಯಪಡೆ ರಚಿಸುವುದು
? ಕೋವಿಡ್ ಗೊಂದಲದಿಂದ ಪರೀಕ್ಷೆ ನಡೆಯುವ ಬಗ್ಗೆ ವಿದ್ಯಾರ್ಥಿಗಳಿಗಿರುವ ಗೊಂದಲ ನಿವಾರಿಸಲು ಕ್ರಮ ವಹಿಸುವುದು.
? ರಿಸರ್ವ್ ಬ್ಯಾಂಕ್ ನೀಡಿರುವ ಎಲ್ಲ ಪ್ಯಾಕೇಜ್‌ಗಳು ಎಲ್ಲ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.