ನೆರೆ ರಾಜ್ಯದವರು ಕಾಲಿಡದಂತೆ ಜಾಗ್ರತೆ ವಹಿಸಿ
Team Udayavani, Apr 20, 2020, 12:32 PM IST
ಚಳ್ಳಕೆರೆ: ದೊಡ್ಡಓಬಯ್ಯನಹಟ್ಟಿಗೆ ಶಾಸಕ ಟಿ. ರಘುಮೂರ್ತಿ ಭೇಟಿ ನೀಡಿ ಪರಿಶೀಲಿಸಿದರು.
ಚಳ್ಳಕೆರೆ: ತಾಲೂಕಿನ ಗಡಿ ಗ್ರಾಮದ ವ್ಯಕ್ತಿಯೊಬ್ಬರು ಆಂಧ್ರಪ್ರದೇಶದ ಕೋವಿಡ್ ಪೀಡಿತರನ್ನು ಭೇಟಿ ಮಾಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಯಾರೂ ಸಹ ಆಂಧ್ರದಿಂದ ಕರ್ನಾಟಕದ ಕಡೆಗೆ ಹೆಜ್ಜೆ ಇಡದಂತೆ ಎಚ್ಚರಿಕೆ ವಹಿಸಬೇಕೆಂದು ಶಾಸಕ ಟಿ. ರಘುಮೂರ್ತಿ ಸೂಚಿಸಿದರು.
ಜಾಜೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ದೊಡ್ಡಓಬಯ್ಯನಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು. ತಾಲೂಕಿನ ಗಡಿಭಾಗದಲ್ಲಿರುವ ಈ ಗ್ರಾಮದಲ್ಲಿ ಬಹುತೇಕ ಬಡ ಮತ್ತು ಅನಕ್ಷರಸ್ಥ ಕುಟುಂಬಗಳಿವೆ. ಕೋವಿಡ್ ವೈರಾಣು ಯಾವುದೇ ಸಂದರ್ಭದಲ್ಲೂ ನಮ್ಮ ಪ್ರದೇಶಕ್ಕೆ ಕಾಲಿಡಬಹುದಾಗಿದೆ. ಆದ್ದರಿಂದ ಆರೋಗ್ಯ ಮತ್ತು ಆರಕ್ಷಕ ಇಲಾಖೆ ಅಧಿಕಾರಿಗಳು ಈ ಭಾಗದಲ್ಲಿರುವ ಎಲ್ಲಾ ಗ್ರಾಮಗಳ ಮೇಲೆ ನಿಗಾ ವಹಿಸಬೇಕೆಂದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಎನ್.ಪ್ರೇಮಸುಧಾ ಮಾತನಾಡಿ, ಆಂಧ್ರಪ್ರದೇಶದ ಗಂಟೆಓಬಯ್ಯನಹಟ್ಟಿ ಗ್ರಾಮದ ಯುವತಿಯೋರ್ವಳು ಜಾಜೂರಿನ ಓಬಳೇಶ್ ಎಂಬುವವರನ್ನು ವಿವಾಹವಾಗಿದ್ದಾಳೆ. ಗಂಟೆಓಬಯ್ಯನಹಟ್ಟಿಯ ಓರ್ವ ವ್ಯಕ್ತಿ ಅನಂತಪುರದಲ್ಲಿ ಕೊರೊನಾ ಪಾಸಿಟಿವ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಟೆಓಬಯ್ಯನಹಟ್ಟಿ ಸಂಪರ್ಕ ಪಡೆದ ಎಲ್ಲರನ್ನೂ ಪರೀಕ್ಷೆಗೆ ಒಳಡಿಸಲಾಗಿದ್ದು, ಯಾವುದೇ ರೀತಿಯ ಅಪಾಯವಿಲ್ಲ ಎಂದು ತಿಳಿಸಿದರು.
ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ, ಕಂದಾಯಾಧಿಕಾರಿಗಳಾದ ರಫೀ, ಹಿರಿಯಪ್ಪ, ತಿಪ್ಪೇಸ್ವಾಮಿ, ಪಿಎಸ್‌ಐ ಮಹೇಶ್, ಆರೋಗ್ಯ ಇಲಾಖೆಯ ಎನ್. ಪ್ರೇಮಕುಮಾರ್, ಜಾಜೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ| ಶ್ರೀನಿವಾಸ್, ಹನುಮಕ್ಕ, ನಗರಸಭಾ ಸದಸ್ಯ ಬಿ.ಟಿ. ರಮೇಶ್ ಗೌಡ, ಗ್ರಾಪಂ ಅಧ್ಯಕ್ಷರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.