ಅಗತ್ಯ ವಸ್ತು ಪೂರೈಕೆ: ಪರಿಶೀಲನಾ ಸಭೆ
Team Udayavani, Apr 20, 2020, 3:36 PM IST
ಬೀದರ: ಸಹಾಯಕ ಆಯುಕ್ತ ಅಕ್ಷಯ ಶ್ರೀಧರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು
ಬೀದರ: ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಸಾರ್ವಜನಿಕರಿಗೆ ಕಿರಾಣಿ, ತರಕಾರಿ, ಹಾಲು ಮತ್ತು ಹಣ್ಣು ಸೇರಿದಂತೆ ಅಗತ್ಯ ವಸ್ತುಗಳನ್ನು ಸಮರ್ಪಕ ಪೂರೈಕೆ ಮಾಡುವುದರ ಕುರಿತು ರಚಿಸಿರುವ ತಂಡಗಳ ಕಾರ್ಯವೈಖರಿ ಬಗ್ಗೆ ಪರಿಶೀಲಿಸಲು ಸಹಾಯಕ ಆಯುಕ್ತ ಅಕ್ಷಯ ಶ್ರೀಧರ ಅಧ್ಯಕ್ಷತೆಯಲ್ಲಿ ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಆಯುಕ್ತರು, ಒಂದರಿಂದ 15, 25 ಮತ್ತು 32 ಸೇರಿದಂತೆ ಒಟ್ಟು 17 ವಾರ್ಡ್ಗಳಲ್ಲಿ ಸಾರ್ವಜನಿಕರಿಗೆ ಯಾವುದೇ ಅಗತ್ಯ ವಸ್ತುಗಳ ಸರಬರಾಜಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳ ತಂಡಕ್ಕೆ ಸಹಾಯಕ ಆಯುಕ್ತರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಕೆಲವು ವಾರ್ಡ್ಗಳಲ್ಲಿ ಹಾಲು, ಕಿರಾಣಿ, ತರಕಾರಿ ಸರಬರಾಜಿನಲ್ಲಿ ತೊಂದರೆಯಾಗುತ್ತಿದೆ ಎನ್ನುವ ದೂರುಗಳು ಕೇಳಿಬರುತ್ತಿವೆ. ಇದು ಕೊನೆಯಾಗಬೇಕು. ತಂಡದಲ್ಲಿರುವ ಎಲ್ಲರೂ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ಜನರಿಗೆ ಇರುವ ಜೀವನಾವಶ್ಯಕ ಸಾಮಗ್ರಿಗಳನ್ನು ಅವರ ಮನೆಮನೆಗೆ ತಲುಪಿಸುವ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಮಾಡಬೇಕು ಎಂದು ನಗರಸಭೆ ಪೌರಾಯುಕ್ತ ಬಸಪ್ಪ ಅವರು ತಂಡದಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಿದರು.
ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಜನರ ಬೇಡಿಕೆಯಂತೆ ಕೇಬಲ್ ಟಿವಿ ದುರಸ್ತಿ ಮತ್ತು ಸಂಪರ್ಕ ನೀಡುವವರಿಗೆ ಕೂಡ ಪಾಸುಗಳನ್ನು ನೀಡಿದಲ್ಲಿ ಜನರಿಗೆ ಅನುಕೂಲವಾಗಲಿದೆ ಎಂದು ಇದೇ ವೇಳೆ ಕೆಲವರು ಸಹಾಯಕ ಆಯುಕ್ತರಲ್ಲಿ ಕೋರಿದರು. ನಾಡ ತಹಶೀಲ್ದಾರ್, ಕಂದಾಯ ನಿರೀಕ್ಷಕರು, ತಾಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ವೃತ್ತ ನಿರೀಕ್ಷಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.