ಮನೆಗಳಿಗೆ ಹಾನಿ: ಕಂದಾಯ ನಿರೀಕ್ಷಕರಿಂದ ಸಮೀಕ್ಷೆ
Team Udayavani, Apr 20, 2020, 3:41 PM IST
ಚಿಂಚೋಳಿ: ಕಂದಾಯ ನಿರೀಕ್ಷಕ ಕೇಶವ ಕುಲಕರ್ಣಿ ಮಳೆ-ಗಾಳಿಯಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ನಡೆಸಿದರು.
ಚಿಂಚೋಳಿ: ಪಟ್ಟಣದ ಹೊಸ ಭವಾನಿ ನಗರದಲ್ಲಿ ಗುಡುಗು ಮಿಂಚು ಮತ್ತು ಸಿಡಿಲಿನ ಆರ್ಭಟ ಹಾಗೂ ಬಿರುಗಾಳಿ ಸಮೇತ ಮಳೆ ಸುರಿದ ಪರಿಣಾಮ ಬಡವರ ಉಪಜೀವನಕ್ಕೆ ತೀವ್ರ ತೊಂದರೆ ಉಂಟಾಗಿದೆ.
ಅಕಾಲಿಕ ಮಳೆ ಹಾಗೂ ಬಿರುಗಾಳಿ ಬೀಸಿದ ಪರಿಣಾಮ ಏಳು ಮನೆಗಳ ಮೇಲ್ಛಾವಣೆ ಸಂಪೂರ್ಣ ಗಾಳಿಗೆ ಹಾರಿ ಹೋಗಿವೆ. ಇದರಿಂದಾಗಿ ಮನೆಯಲ್ಲಿ ಸಂಗ್ರಹಿಸಿದ್ದ ಆಹಾರ ಧಾನ್ಯ, ದಿನ ನಿತ್ಯದ ಬದುಕಿಗೆ ಬೇಕಾಗುವ ಸಾಮಗ್ರಿಗಳು ಮಳೆ ನೀರಿನಿಂದ ಹಾನಿಯಾಗಿವೆ. ಜೋಳ,ಬ್ಯಾಳಿ, ಅಕ್ಕಿ, ಹಿಟ್ಟು ಇನ್ನಿತರ ಆಹಾರ ಸಾಮಗ್ರಿ ಮಳೆಯಲ್ಲಿ ನೆನೆದಿವೆ. ಅಡುಗೆ ಸಾಮಗ್ರಿಗಳ ಮೇಲೆ ಕಲ್ಲುಗಳು ಬಿದ್ದು ಒಡೆದಿವೆ. ಬಟ್ಟೆಗಳು ಹಾಳಾಗಿವೆ.
ಇನ್ನು ಕೆಲವರ ಬೆನ್ನು, ಕೈ-ಕಾಲುಗಳ ಮೇಲೆ ಕಲ್ಲುಗಳು ಬಿದ್ದಿದ್ದು ತೀವ್ರ ಗಾಯಗಳಾಗಿದ್ದು, ನಮಗೆ ಮತ್ತೆ ಮನೆ ಕಟ್ಟಿಕೊಳ್ಳಲು ಸರ್ಕಾರ ಸಹಾಯ ಒದಗಿಸಬೇಕು ಎಂದು ಇಸ್ಮಾಯಿಲ್‌ಶಾ, ಸಂತೋಷ ಮನವಿ ಮಾಡಿದ್ದಾರೆ. ಕಂದಾಯ ನಿರೀಕ್ಷಕ ಕೇಶವ ಕುಲಕರ್ಣಿ, ಪುರಸಭೆ ಸಿಬ್ಬಂದಿ ಶರಣಪ್ಪ ಮಾಳಾಪುರ, ಮಶಾಖ ಮಳೆಯಿಂದಾದ ಹಾನಿ ಸಮೀಕ್ಷೆ ನಡೆಸಿದರು.
ಹೊಸ ಭವಾನಿ ನಗರದಲ್ಲಿ ಅನೇಕ ಜನರ ಮನೆಗಳಿಗೆ ಮಳೆ-ಗಾಳಿಯಿಂದ ಹಾನಿಯುಂಟಾಗಿದೆ. ಸರ್ಕಾರ ಇವರಿಗೆ ಪರಿಹಾರ ಒದಗಿಸಬೇಕು ಎಂದು ಕಾಂಗ್ರೆಸ್ ಮುಖಂಡರಾದ ಕೆ.ಎಂ. ಬಾರಿ, ಮಂಜಲೆ ಸಾಬ್ ತಹಶೀಲ್ದಾರ್‌ಗೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ
Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ
Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ
BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.