ಹಣ್ಣು-ತರಕಾರಿ ಮಾರಾಟ ನೀತಿ ಮರುಪರಿಶೀಲಿಸಿ
ಉಪವಿಭಾಗಾಧಿಕಾರಿಗಳಿಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮನವಿ
Team Udayavani, Apr 20, 2020, 4:36 PM IST
ಸಾಗರ: ಹಣ್ಣು-ತರಕಾರಿ ಮಾರಾಟಕ್ಕೆ ಸಂಬಂಧಿಸಿದ ಆದೇಶ ಮರುಪರಿಶೀಲನೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಎಸಿಗೆ ಮನವಿ ಸಲ್ಲಿಸಿತು.
ಸಾಗರ: ಹಣ್ಣು-ತರಕಾರಿ ಮಾರಾಟಕ್ಕೆ ಸಂಬಂಧಿಸಿ ತಾಲೂಕು ಆಡಳಿತ ಜಾರಿಗೊಳಿಸಿರುವ ನೀತಿ ರೈತರಿಗೆ ಮಾರಕವಾಗಿದ್ದು, ತಕ್ಷಣ ಇದನ್ನು ಸರಿಪಡಿಸುವಂತೆ ಒತ್ತಾಯಿಸಿ ಭಾನುವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹಣ್ಣು ಮತ್ತು ತರಕಾರಿಗಳನ್ನು ಬಡಾವಣೆಗಳಿಗೆ ಹೋಗಿ ಮಾರಾಟ ಮಾಡುವಂತೆ ಆಡಳಿತ ಸೂಚನೆ ನೀಡಿದೆ. ನಗರದ 31 ವಾರ್ಡ್‌ಗಳಿಗೆ ತರಕಾರಿ-ಹಣ್ಣು ತೆಗೆದುಕೊಂಡು ಹೋಗಲು ಬೇಕಾದಷ್ಟು ತಳ್ಳುಗಾಡಿಗಳು ನಮ್ಮಲ್ಲಿ ಇಲ್ಲ. ಇಷ್ಟು ದಿನ ನಿಗದಿಪಡಿಸಿದ ಸಮಯದಲ್ಲಿ ಒಂದು ಕಡೆ ಸಿಗುತ್ತಿದ್ದ ತರಕಾರಿ, ಹಣ್ಣುಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಈಗ ಅದನ್ನು ಹಿಂಪಡೆದಿರುವುದರಿಂದ ಜನರು ತರಕಾರಿ, ಹಣ್ಣು ಕೊಳ್ಳಲು ಸಾಧ್ಯವಾಗದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿ ತಿಳಿಸಲಾಗಿದೆ. ಭಾನುವಾರ ತರಕಾರಿ ಮಾರಾಟ ಮಾಡುತ್ತಿದ್ದ ರೈತರನ್ನು ಓಡಿಸಿರುವುದು ಖಂಡನೀಯ. ಹಣ್ಣಿನ ಅಂಗಡಿ ಬಾಗಿಲು ತೆಗೆಯಲು ಅವಕಾಶ ಕೊಡದೆ ಇರುವುದರಿಂದ ಹಣ್ಣುಗಳು ಕೊಳೆಯುತ್ತಿವೆ. ಇದರಿಂದ, ವ್ಯಾಪಾರಸ್ಥರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಎಂದರು. ಈ ಹಿನ್ನೆಲೆಯಲ್ಲಿ ಉಪವಿಭಾಗಾ ಧಿಕಾರಿಗಳು ಹೊರಡಿಸಿರುವ ಆದೇಶ ರಾಜ್ಯ ಸರ್ಕಾರದ ಆದೇಶದ ಉಲ್ಲಂಘನೆಯೂ ಆಗಿದೆ. ತಕ್ಷಣ ತರಕಾರಿ ಮತ್ತು ಹಣ್ಣು ಮಾರಾಟಕ್ಕೆ ಹಿಂದಿನಂತೆ ಅವಕಾಶ ಕಲ್ಪಿಸಬೇಕು. ಇಲ್ಲವೇ ಸೂಕ್ತ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್, ಯುವ ಕಾಂಗ್ರೆಸ್ ಅಧ್ಯಕ್ಷ ಸುಧಾಕರ ಕುಗ್ವೆ, ಪ್ರಮುಖರಾದ ಎಚ್.ಬಿ.ರಾಘವೇಂದ್ರ, ಮನೋಜ್ ಕುಗ್ವೆ, ಎಚ್.ಎಲ್.ರಾಘವೇಂದ್ರ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.