ಬೇಕರಿ ವ್ಯಾಪಾರಕ್ಕೆಅನುಮತಿ ಕೊಡಿ
Team Udayavani, Apr 20, 2020, 5:01 PM IST
ಸಾಗರ: ಬೇಕರಿ ವ್ಯಾಪಾರಕ್ಕೆ ಅನುಮತಿ ಕೋರಿ ಪ್ರಾಂತ ಹೋಟೆಲ್ ಮಾಲೀಕರ ಸಂಘದಿಂದ ಎಸಿಗೆ ಮನವಿ ಸಲ್ಲಿಸಲಾಯಿತು.
ಸಾಗರ: ಕೊರೊನಾ ಹಿನ್ನೆಲೆಯಲ್ಲಿ ನಗರದ ಬೇಕರಿಗಳಲ್ಲಿ ವ್ಯಾಪಾರ ನಡೆಸಲು ಅವಕಾಶ ನೀಡುವಂತೆ ಒತ್ತಾಯಿಸಿ ಭಾನುವಾರ ಪ್ರಾಂತ ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳು ಉಪವಿಭಾಗಾ ಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರದ ನಿರ್ದೇಶನದಂತೆ ಬೇಕರಿಗಳು ವ್ಯಾಪಾರ ನಡೆಸಿಕೊಂಡು ಬರುತ್ತಿವೆ. ಸಾಮಾಜಿಕ ಅಂತರ ಕಾಯ್ದುಕೊಂಡು ಅಗತ್ಯ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ. ಕಳೆದ ಮೂರು ದಿನಗಳಿಂದ ತಾಲೂಕು ಆಡಳಿತ ಬೇಕರಿಗಳನ್ನು ಮುಚ್ಚುವಂತೆ ಆದೇಶ ನೀಡಿದ್ದು, ನಷ್ಟಕ್ಕೆ ಜಾರಲು ಕಾರಣವಾಗಿದೆ. ದಾಸ್ತಾನು ಹಾಳಾಗುತ್ತಿದೆ. ಗ್ರಾಹಕರು ಅಗತ್ಯ ವಸ್ತುಗಳಿಗೆ ಬೇಡಿಕೆ ಇಡುತ್ತಿದ್ದರೂ ಕೊಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ, ಹಿಂದಿನಂತೆ ಬೆಳಿಗ್ಗೆ 8ರಿಂದ ಮಧ್ಯಾಹ್ನ 12ರ ವರೆಗೆ ಬೇಕರಿ ವ್ಯವಹಾರ ಮುಂದುವರೆಸಲು ಅನುಮತಿ ನೀಡಬೇಕೆಂದರು.
ಎಸಿ ಭರವಸೆ: ಮನವಿ ಸ್ವೀಕರಿಸಿದ ಎಸಿ ಡಾ| ಎಲ್.ನಾಗರಾಜ್ ಮಾತನಾಡಿ, ಬೇಕರಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವ ಸಂಬಂಧ ಸದ್ಯದಲ್ಲಿಯೇ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
Anandapura: ಚಾಲಕನ ನಿಯಂತ್ರಣ ತಪ್ಪಿದ ಬಸ್; ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.