500 ಕೋಟಿ ರೂ.ಹೂವು ನಷ್ಟ!
ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಸಿಎಂ ಗಮನ ಸೆಳೆಯಲಾಗಿದೆ: ಸಂಸದ
Team Udayavani, Apr 20, 2020, 5:54 PM IST
ಸಾಂದರ್ಭಿಕ ಚಿತ್ರ
ರಾಮನಗರ: ಲಾಕ್‌ಡೌನ್ ಹಿನ್ನೆಲೆ ಯಲ್ಲಿ ದೇವಾಲಯಗಳು ಮುಚ್ಚಿವೆ. ಮದುವೆ ಮತ್ತು ಶುಭ ಸಮಾರಂಭಗಳು ನಡೆಯುತ್ತಿಲ್ಲ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ
ವ್ಯಾಪ್ತಿಯಲ್ಲೇ ಸುಮಾರು 500 ಕೋಟಿ ರೂ. ನಷ್ಟವಾಗಿದೆ ಎಂಬ ಅಂದಾಜಿದೆ. ಹೂ ಬೆಳೆಗಾರರಿಗೆ ಆಗುತ್ತಿರುವ ನಷ್ಟದ ಬಗ್ಗೆ ಕಾಂಗ್ರೆಸ್ ಮುಖಂಡರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಗಮನ ಸೆಳೆದಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.
ತಾಲೂಕಿನ ಮಂಚನಾಯ್ಕನಹಳ್ಳಿ ಗ್ರಾಪಂ ವ್ಯಾಪ್ತಿಯ ಹನುಮಂತ ನಗರದಲ್ಲಿ ಆಹಾರ ಪದಾರ್ಥಗಳ ವಿತರಣೆ ಕಾರ್ಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಲಾಕ್ ಡೌನ್ ಹಿನ್ನೆಲೆಯಲ್ಲಿ ರೈತರು, ಸಾಮಾನ್ಯ ಜನತೆಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮತ್ತು ಕೆಲವೊಂದು ಸಲಹೆಗಳನ್ನು ನೀಡುವ ಸಲುವಾಗಿ ರಾಜ್ಯ ಕಾಂಗ್ರೆಸ್ ನಿಂದ ನಿಯೋಗ ಮುಖ್ಯಮಂತ್ರಿಗಳನ್ನು
ಭೇಟಿ ಮಾಡಿತ್ತು. ಈ ವೇಳೆ ಹೂ ಬೆಳೆಗಾರರ ನಷ್ಟದ ಬಗ್ಗೆಯೂ ಗಮನ ಸೆಳೆಯಲಾಗಿದೆ ಎಂದರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ಎಚ್ಚರ ವಹಿಸುವಂತೆ ತಾವು ಈಗಾಗಲೇ ಜಿಲ್ಲಾಡಳಿತಕ್ಕೆ ಮುನ್ಸೂಚನೆ ನೀಡಿರುವುದಾಗಿ ತಿಳಿಸಿದರು.
ತಮ್ಮ ಕ್ಷೇತ್ರ ವ್ಯಾಪ್ತಿಯ ಬಡವರಿಗೆ ಸುಮಾರು 2500 ಟನ್ ತರಕಾರಿಯನ್ನು ತಮ್ಮ ಟ್ರಸ್ಟ್ ಮತ್ತು ಕಾಂಗ್ರೆಸ್ ಮುಖಂಡರ ಸಹಕಾರದಲ್ಲಿ ಖರೀದಿಸಿ ವಿತರಿಸಲಾಗಿದೆ ಎಂದರು. ತಾವೇ ಸ್ವತಃ ಸುಮಾರು 300 ತೋಟಗಳಿಗೆ ಭೇಟಿ ಕೊಟ್ಟು ರೈತರಿಂದ ಖರೀದಿಸಿರುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.