ಬೆಳ್ತಂಗಡಿ: ಎಪಿಎಂಸಿ ಪ್ರಾಂಗಣದಲ್ಲಿ ವಾರದ ಸಂತೆ

Team Udayavani, Apr 21, 2020, 5:50 AM IST

ಬೆಳ್ತಂಗಡಿ: ಎಪಿಎಂಸಿ ಪ್ರಾಂಗಣದಲ್ಲಿ ವಾರದ ಸಂತೆ

ಬೆಳ್ತಂಗಡಿ: ಪ್ರತಿ ಸೋಮವಾರ ಬೆಳ್ತಂಗಡಿ ಸಂತೆ ಮಾರುಕಟ್ಟೆ ಪ್ರದೇಶದಲ್ಲಿ ನಡೆಸಲಾಗುತ್ತಿದ್ದ ವಾರದ ಸಂತೆಯನ್ನು ಕೋವಿಡ್‌ 19 ಮುನ್ನೆಚ್ಚರಿಕೆ ಕ್ರಮವಾಗಿ ಸೋಮವಾರ ವಾಣಿ ಕಾಲೇಜು ಸಮೀಪದ ಎಪಿಎಂಸಿ ಪ್ರಾಂಗಣದಲ್ಲಿ ತಾತ್ಕಾಲಿಕವಾಗಿ ನಡೆಸಲಾಯಿತು.

ಬೆಳ್ತಂಗಡಿ ವಾರದ ಸಂತೆಯು ಮೊದಲ ಬಾರಿಗೆ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರವಾದ್ದರಿಂದ ಅಲ್ಲಿನ ವ್ಯಾಪಾರ ವಹಿವಾಟುಗಳನ್ನು ಶಾಸಕ ಹರೀಶ್‌ ಪೂಂಜ ಪರಿಶೀಲಿಸಿದರು. ಸಾರ್ವಜನಿಕರಿಗೆ ಖರೀದಿ ಮಾಡುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಜಾಗೃತಿ ಮೂಡಿ ಸಲಾಯಿತು. ವ್ಯಾಪಾರದ ಬಗ್ಗೆ ಮಾಹಿತಿ ಪಡೆದುಕೊಂಡರು.

ಸೋಮವಾರ ಬೆಳಗ್ಗೆ 5.30 ರಿಂದಲೇ ಎಪಿಎಂಸಿ ಪ್ರಾಂಗಣದಲ್ಲಿ ತರಕಾರಿ, ಹಣ್ಣುಹಂಪಲು, ಒಣ ಮೀನು ವ್ಯಾಪಾರ ವಹಿವಾಟು ಆರಂಭಗೊಂಡಿದ್ದವು. ಸುಮಾರು 25 ಅಂಗಡಿಗಳಿಗೆ ಫ್ಲಾ Âಟ್‌ ಫಾರಂ ನಂಬರ್‌ ನೀಡಲಾಗಿತ್ತು. ದ್ವಿಚಕ್ರ, ತ್ರಿಚಕ್ರ ವಾಹನ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು.

ಪೊಲೀಸರಿಂದ ಬಂದೋಬಸ್ತ್
ಸಂತೆಕಟ್ಟೆ ಪ್ರದೇಶದಲ್ಲಿ ಯಾವುದೇ ವ್ಯಾಪಾರ ವಹಿವಾಟುಗಳು ನಡೆಯ ದಂತೆ, ಜನ ಜಂಗುಳಿ, ವಾಹನಗಳ ಓಡಾಟವು ಹೆಚ್ಚಾಗದಂತೆ ಪೊಲೀಸರನ್ನು ನಿಯೋಜಿಸಲಾಗಿತ್ತು. ಸಂತೆಕಟ್ಟೆ ಬಳಿ ಬ್ಯಾರಿಕೇಡ್‌ ಹಾಕಿ ಸೂಚನಾಫಲಕ ಅಳವಡಿಸಲಾಗಿತ್ತು. ರವಿವಾರ ರಾತ್ರಿಯಿಂದಲೇ ಅಂಗಡಿಗಳನ್ನು ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿತ್ತು.

ಸಾರ್ವಜನಿಕರು ತರಕಾರಿ, ಹಣ್ಣು ಹಂಪಲು ಖರೀದಿಗೆ ಸಂತೆಕಟ್ಟೆ ಬಳಿ ಬಂದವರಿಗೆ ಪೊಲೀಸರು ಸೂಚನೆ ನೀಡಿ ಎಪಿಎಂಸಿ ಪ್ರಾಂಗಣಕ್ಕೆ ಕಳುಹಿಸುತ್ತಿದ್ದರು.

ತಹಶೀಲ್ದಾರ್‌ ಗಣಪತಿ ಶಾಸ್ತ್ರಿ, ನಗರ ಪಂಚಾಯತ್‌ ಮುಖ್ಯಾಧಿಕಾರಿ ಸುಧಾಕರ್‌ ಎಂ.ಎಚ್‌., ಎ.ಪಿ.ಎಂ.ಸಿ. ಅಧ್ಯಕ್ಷ ಕೇಶವ ಗೌಡ ಬೆಳಾಲು, ಬೆಳ್ತಂಗಡಿ ಠಾಣೆ ವೃತ್ತ ನಿರೀಕ್ಷಕ ಸಂದೇಶ್‌ ಪಿ.ಜಿ., ಎಪಿಎಂಸಿ ಕಾರ್ಯದರ್ಶಿ ರವೀಂದ್ರ, ನಗರ ಪಂಚಾ ಯತ್‌ ಎಂಜಿನಿಯರ್‌ ಮಹಾವೀರ ಆರಿಗ ಮೊದಲಾದವರು ಉಪಸ್ಥಿತರಿದ್ದರು.

ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ
ಪ್ರತಿ ಸೋಮವಾರ ಸಂತೆಯಿಂದಾಗಿ ಹೆದ್ದಾರಿ ಸಂಚಾರ, ಬೇಕಾಬಿಟ್ಟಿ ವಾಹನ ಪಾರ್ಕಿಂಗ್‌ ಮಾಡುತ್ತಿದ್ದ ಪರಿಣಾಮ ನಗರದಲ್ಲಿ ಸಂಚಾರ ದಟ್ಟಣೆ ಎದುರಿಸಬೇಕಾಗಿತ್ತು. ಈ ಕುರಿತು ಹಲವು ದಶಕಗಳಿಂದ ಸಂತೆಮಾರುಕಟ್ಟೆ ಸ್ಥಳಾಂತರಕ್ಕೆ ಒತ್ತಾಸೆ ಕೇಳಿಬಂದಿತ್ತು. ಆದರೆ ರಾಜಕೀಯ ಲಾಬಿಯಿಂದ ಈಡೇರಿಲ್ಲ. ಅತ್ತ ಎಪಿಎಂಸಿ ಪ್ರಾಂಗಣದಲ್ಲಿ ಸರಕಾರ ಸಾರ್ವಜನಿಕರ ಅನುಕೂಲಕ್ಕೆ ನಿರ್ಮಿಸಿದ ಕಟ್ಟಡಗಳು ಪ್ರಯೋಜನಕ್ಕೆ ಬಾರದಂತಾಗಿತ್ತು. ಈಗಿನಂತೆ ಮುಂದೆಯೂ ವಾರದ ಸಂತೆ ಎಪಿಎಂಸಿಯಲ್ಲೇ ನಡೆಸುವಂತೆ ಜನಭಿಪ್ರಾಯ ಕೇಳಿಬಂದಿದೆ.

ಟಾಪ್ ನ್ಯೂಸ್

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.