ಕಾರ್ಯದಲ್ಲಿ ಸಮನ್ವಯತೆ ಸಾಧಿಸಿ
Team Udayavani, Apr 21, 2020, 2:53 PM IST
ಬೈಲಹೊಂಗಲ: ಸೋಂಕು ತಡೆಗಟ್ಟಲು ಹಾಗೂ ನಿಯಂತ್ರಿಸಲು ಎಲ್ಲಾ ಟಾಸ್ಕ್ಪೋರ್ಸ್ ಸಮಿತಿಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು.
ಪಟ್ಟಣದ ತಾಪಂ ಸಭಾಭವನದಲ್ಲಿ ಸೋಮವಾರ ನಡೆದ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊವೀಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ. ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳಬೇಕಾಗಿದೆ. ಅದಕ್ಕಾಗಿ ಗ್ರಾಮ,ತಾಲೂಕು, ಜಿಲ್ಲಾಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್ ಪೋರ್ಸ್ ಸಮಿತಿಗಳ ಅಧಿಕಾರಿಗಳು ಸೋಂಕಿನ ಕುರಿತು ಜಾಗೃತಿ ಮೂಡಿಸುವ ಮೂಲಕ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ತಾಲೂಕಿನ ಜನತೆಯಲ್ಲಿ ಸೋಂಕಿನ ಕುರಿತು ಜಾಗೃತಿ ಮೂಡಿಸಲು ಹಾಗೂ ಸೋಂಕಿನ ಲಕ್ಷಣಗಳು ಕಂಡು ಬಂದಾಗ ಆಶಾ ಕಾರ್ಯಕರ್ತೆಯರು, ಆರೋಗ್ಯಾಧಿಕಾರಿ ಸಿಬ್ಬಂದಿಗಳ ಸಹಕಾರದೊಂದಿಗೆ ಮನೆ-ಮನೆಗೆ ತೆರಳಿ ದಿನದ ಮಾಹಿತಿ ಕಲೆಹಾಕುವಂತೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ಮಹಾಂತೇಶ ದೊಡಗೌಡ್ರ ಹಾಗೂ ಮಹಾಂತೇಶ ಕೌಜಲಗಿ ಅವರು ಕೊವೀಡ್-19 ಟಾಸ್ಕ್ಪೋರ್ಸ್ ಸಮಿತಿಗೆ ಅಭಿನಂದನಾ ಪತ್ರ ನೀಡಿದರು. ಶಾಸಕರಾದ ಮಹಾಂತೇಶ ಕೌಜಲಗಿ, ಮಹಾಂತೇಶ ದೊಡಗೌಡ್ರ, ಡಿವೈಎಸ್‌ಪಿ ಕರುಣಾಕರ ಶೆಟ್ಟಿ, ಸಿಪಿಐ ಮಂಜುನಾಥ್ ಕುಸುಗಲ್, ಉಪವಿಭಾಗಾ ಧಿಕಾರಿ ಶಿವಾನಂದ ಭಜಂತ್ರಿ, ತಹಶೀಲ್ದಾರ್ ದೊಡ್ಡಪ್ಪ ಹೂಗಾರ, ತಾಪಂ ಅಧಿಕಾರಿ ಸಮೀರ ಮುಲ್ಲಾ, ಪಿಎಸ್‌ಐ ಎಂ.ಎಸ್. ಹೂಗಾರ, ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು, ನೇಸರಗಿ, ದೊಡವಾಡ ಪಿಎಸ್‌ಐ ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.