ರಾಮನಗರ ರಸ್ತೆ ಅಪಘಾತದಲ್ಲಿ ಪತ್ರಕರ್ತ ಸಾವು: 5 ಲಕ್ಷ ವೈಯಕ್ತಿಕ ನೆರವು ಘೋಷಿಸಿದ ಎಚ್ ಡಿಕೆ
Team Udayavani, Apr 21, 2020, 2:50 PM IST
ರಾಮನಗರ: ಇಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಖಾಸಗಿ ಸುದ್ದಿವಾಹಿನಿಯ ಜಿಲ್ಲಾ ವರದಿಗಾರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಪಬ್ಲಿಕ್ ಟಿವಿ ವಾಹಿನಿಯ ರಾಮನಗರ ವರದಿಗಾರ ಹನುಮಂತು ಎಂದು ಗುರುತಿಸಲಾಗಿದೆ. ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ರಾಮನಗರದ ಶಂಕರ್ ನಾಟಿಕೋಳಿ ಡಾಬಾ ಬಳಿ ಘಟನೆ ನಡೆದಿದೆ.
ಖಾಸಗಿ ವಾಹನ ಢಿಕ್ಕಿಯಾಗಿದ್ದು, ಪರಿಣಾಮ ಹನುಮಂತು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆರವು ಘೋಷಿಸಿದ ಕುಮಾರಸ್ವಾಮಿ
ಪತ್ರಕರ್ತ ಹನುಮಂತು ಸಾವಿನ ಸುದ್ದಿ ಕೇಳಿ ಮಾಜ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದು, ಹನುಮಂತು ಕುಟುಂಬಕ್ಕೆ 5 ಲಕ್ಷ ರೂ ವೈಯಕ್ತಿಕ ನೆರವು ಘೋಷಿಸಿದ್ದಾರೆ.
ಅಪಘಾತದಿಂದ ದುರ್ಮರಣಕ್ಕೀಡಾದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಅಕಾಲ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಹನುಮಂತು ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ವೈಯಕ್ತಿಕ ನೆರವು ನೀಡುತ್ತೇನೆ.
ನನಗೆ ಆತ್ಮೀಯರಾಗಿದ್ದ ಹನುಮಂತು ಸಾಮಾಜಿಕ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದ ದಿಟ್ಟ ಪತ್ರಕರ್ತರಾಗಿದ್ದರು. ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದು ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದರು. ಅವರ ಕುಟುಂಬದ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ. ಕರ್ತವ್ಯ ನಿರ್ವಹಣೆ ವೇಳೆ ಪ್ರಾಣತೆತ್ತ ಹನುಮಂತು ಅವರ ಆತ್ಮಕ್ಕೆ ಶಾಂತಿ ದಕ್ಕಲಿ ಎಂದು ಎಚ್ ಡಿ ಕೆ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.