ಮನೆ ಬಾಗಿಲಿಗೆ ತರಕಾರಿ, ದಿನಸಿ ಪೂರೈಕೆ
ಶೋಷಣೆ ತಡೆಗಟ್ಟಲು ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖಂಡರೊಂದಿಗೆ ಡೀಸಿ ಚರ್ಚೆ
Team Udayavani, Apr 21, 2020, 3:51 PM IST
ಸಾಂದರ್ಭಿಕ ಚಿತ್ರ
ಹಾಸನ: ಕೋವಿಡ್-19 ನಿಯಂತ್ರಣದ ಸಂಬಂಧ ಜಾರಿಯಾಗಿರುವ ಲಾಕ್‌ಡೌನ್ ಮೇ 3ರ ವರೆಗೂ ವಿಸ್ತರಣೆಯಾಗಿರುವುದರಿಂದ ಸಂಘ ಸಂಸ್ಥೆಗಳು, ಸ್ವಯಂ ಸೇವಾ ಮನೋಭಾವದಿಂದ ಮನೆ ಬಾಗಿಲಿಗೆ ತರಕಾರಿ ಹಾಗೂ ಅಗತ್ಯ ವಸ್ತುಗಳನ್ನು ತಲುಪಿಸುವ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಕೋರಿದರು.
ಸಾರ್ವಜನಿಕರಿಗೆ ಅನುಕೂಲ ಮಾಡಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಅವರು, ಲಾಕ್‌ಡೌನ್ ಅವಧಿಯಲ್ಲಿ ಮಧ್ಯವರ್ತಿಗಳು ಹೆಚ್ಚು ದರಕ್ಕೆ ದಿನಬಳಕೆ ವಸ್ತುಗಳನ್ನು ಮಾರಾಟ ಮಾಡಿ ಸಾರ್ವಜನಿಕರನ್ನು ಶೋಷಣೆ ಮಾಡುತ್ತಿದ್ದಾರೆ. ರೈತರಿಗೂ ಕೃಷಿ ಉತ್ಪನ್ನಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಹಾಗಾಗಿ ಸಂಘ ಸಂಸ್ಥೆಗಳು ಎಪಿಎಂಸಿಗಳಲ್ಲಿ ಸಗಟು ದರಕ್ಕೆ ತರಕಾರಿ, ದಿನಸಿ ಖರೀದಿಸಿ ಲಾಭಾಂಶವನ್ನು ಅಪೇಕ್ಷಿಸದೇ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಲಘು ವಾಹನಗಳ ಮೂಲಕ ಮಾರಾಟ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದರು.
ಹೆಚ್ಚಿನ ದರ ಪಡೆದರೆ ಕ್ರಮ ಕೈಗೊಳ್ಳಿ: ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಒಂದೊಂದು ವಾರ್ಡ್‌ಗಳಲ್ಲಿ ಒಂದು ಸ್ವಯಂ ಸೇವಾ ಸಂಸ್ಥೆ ತರಕಾರಿ ದಿನಸಿ ಮಾರಾಟ ಮಾಡಿದರೆ, ಸಾರ್ವಜನಿಕರಿಗೆ ಸುಲಭವಾಗಿ ನ್ಯಾಯಯುತ ದರಗಳಲ್ಲಿ ಅಗತ್ಯ ತರಕಾರಿಗಳು ದೊರೆಯುತ್ತವೆ. ದಿನಸಿ ಹಾಗೂ ತರಕಾರಿ ಮಾರಾಟಗಾರರು ಹೆಚ್ಚಿನ ದರಕ್ಕೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರೆ ಅಂತವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕಿ ಸವಿತಾ. ನಗರ ಸಭೆಯ ಆಯುಕ್ತ ಕೃಷ್ಣಮೂರ್ತಿ, ಎಪಿಎಂಸಿ ಕಾರ್ಯದರ್ಶಿ ಶ್ರೀಹರಿ, ಜಿಲ್ಲಾ ವಾರ್ತಾಧಿಕಾರಿ ವಿನೋದ್‌ಚಂದ್ರ, ತಹಶೀಲ್ದಾರ್ ಶಿವ ಶಂಕರಪ್ಪ, ರೆಡ್ ಕ್ರಾಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಪಿ. ಮೋಹನ್, ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯಸ್ಥ ಡಾ. ವೀರಭದ್ರಪ್ಪ ಹಾಗೂ ಇತರೆ ಅಧಿಕಾರಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
MUST WATCH
ಹೊಸ ಸೇರ್ಪಡೆ
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.