ದೇಶದಲ್ಲಿ ಕೋವಿಡ್ 19 ವೈರಸ್ ಪ್ರಕರಣ 19 ಸಾವಿರಕ್ಕೆ ಏರಿಕೆ , ಸಾವಿನ ಸಂಖ್ಯೆ 600: ಕೇಂದ್ರ
ದೇಶದಲ್ಲಿ ಈವರೆಗೆ 3,251 ಮಂದಿ ಕೋವಿಡ್ 19 ಸೋಂಕಿತರು ಗುಣಮುಖರಾಗಿದ್ದರು ಎಂದು ಸಚಿವಾಲಯ ತಿಳಿಸಿದೆ.
Team Udayavani, Apr 21, 2020, 6:28 PM IST
ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ 18,985ಕ್ಕೆ ತಲುಪಿದ್ದು, ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 603ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ 24ಗಂಟೆಯಲ್ಲಿ 945 ಹೊಸ ಕೋವಿಡ್ 19 ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 18,601ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.
ದೇಶದಲ್ಲಿ ಈವರೆಗೆ 3,251 ಮಂದಿ ಕೋವಿಡ್ 19 ಸೋಂಕಿತರು ಗುಣಮುಖರಾಗಿದ್ದರು ಎಂದು ಸಚಿವಾಲಯ ತಿಳಿಸಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು (4,666) ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, ದಿಲ್ಲಿಯಲ್ಲಿ 2,801, ಗುಜರಾತ್ ನಲ್ಲಿ 1939, ಮಧ್ಯಪ್ರದೇಶದಲ್ಲಿ 1,485 ಹಾಗೂ ತಮಿಳುನಾಡಿನಲ್ಲಿ 1,520 ಮಂದಿಗೆ ಸೋಂಕು ದೃಢಪಟ್ಟಿದೆ.
ಕರ್ನಾಟಕದಲ್ಲಿ ಹತ್ತು ಕೋವಿಡ್ 19 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು 418 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, 17 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ 129 ಮಂದಿ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.