ಕೋವಿಡ್ ತಡೆಗೆ ಸಮರೋಪಾದಿ ಶ್ರಮಿಸಿ

ಜಿಲ್ಲಾಡಳಿತಕ್ಕೆ ಸಚಿವ ಭೈರತಿ ಬಸವರಾಜ್‌ ಸೂಚನೆ ಪಾಸಿಟಿವ್‌ ಪ್ರಕರಣವಿಲ್ಲವೆಂದು ಮೈಮರೆಯುವುದು ಬೇಡ

Team Udayavani, Apr 22, 2020, 11:12 AM IST

22-April-03

ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ದಾವಣಗೆರೆ: ಮಹಾಮಾರಿ ಕೋವಿಡ್ ವೈರಸ್‌ ತಡೆಯುವ ನಿಟ್ಟಿನಲ್ಲಿ ಎಂಥದ್ದೇ ಪರಿಸ್ಥಿತಿ ನಿರ್ಮಾಣವಾದರೂ ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸಮರೋಪಾದಿ ಸರ್ವ ಸಿದ್ಧತೆ ಮಾಡಿಕೊಂಡಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮೂವರು ಕೋವಿಡ್‌ ಸೋಂಕಿತರು ಗುಣಮುಖರಾದ ನಂತರ ಯಾವುದೇ ಪ್ರಕರಣ ಪತ್ತೆ ಆಗದೇ ಇರುವುದು ಸಂತೋಷದ ವಿಚಾರ. ಯಾವುದೇ ಪ್ರಕರಣ ಪತ್ತೆ ಆಗುವುದೂ ಬೇಡ. ಆದರೆ ಯಾವುದೂ ಇಲ್ಲ ಎಂದು ಮೈ ಮರೆಯುವಂತೆಯೇ ಇಲ್ಲ. ಎಂತದ್ದೇ ಪರಿಸ್ಥಿತಿ ನಿರ್ಮಾಣವಾದರೂ ಸಮರ್ಥವಾಗಿ ಎದುರಿಸಲು ಅಗತ್ಯ ಔಷಧಿ, ಪ್ರಯೋಗಾಲಯ, ಸಲಕರಣೆ ಒಳಗೊಂಡಂತೆ ಪ್ರತಿಯೊಂದನ್ನೂ ಸಿದ್ಧ ಮಾಡಿಕೊಂಡಿರಬೇಕು ಎಂದರು.

ಈವರೆಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಗಲು ಇರಳು ಎನ್ನದೆ ಶ್ರಮಿಸುತ್ತಿರುವ ಫಲವಾಗಿ ಜಿಲ್ಲೆ ಹಳದಿ ಪಟ್ಟಿಯಲ್ಲಿದೆ. ಯಾವುದೇ ಹೊಸ ಪ್ರಕರಣ ಪತ್ತೆ ಆಗಿಲ್ಲ. ಕೊಂಚ ಎಡವಟ್ಟಾದರೂ ಪರಿಸ್ಥಿತಿ ಗಂಭೀರವಾಗಬಹುದು. ನಾನು ಮುಖ್ಯಮಂತ್ರಿಗಳ ಮುಂದೆ ತಲೆತಗ್ಗಿಸುವಂತೆ ಆಗಬಾರದು. ಅಯ್ಯೋ, ಆಗಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬಹುದಿತ್ತಲ್ಲ ಎಂದು ಅಂದುಕೊಳ್ಳುವುದಕ್ಕಿಂತಲೂ ಈಗಲೇ ಎಲ್ಲಾ ರೀತಿಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಂಡಿರಬೇಕು ಎಂದು ಸೂಚಿಸಿದರು.

ಕೋವಿಡ್‌-19 ಪರೀಕ್ಷೆಗೆ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳಿಸಿಕೊಡಬೇಕು. ವರದಿ ಬರುವುದಕ್ಕೆ 2-3 ದಿನ ಬೇಕಾಗುತ್ತದೆ. ದಾವಣಗೆರೆಯಲ್ಲೇ ವಿಆರ್‌ಡಿಎಲ್‌ ಪ್ರಾರಂಭಿಸುವುದು ಸೂಕ್ತ. ಕೋವಿಡ್‌ ಸಂದರ್ಭದಲ್ಲೇ ಜಿಲ್ಲಾ ಆಸ್ಪತ್ರೆಗೆ ಅಗತ್ಯ ಪರಿಕರ ಪಡೆದುಕೊಳ್ಳಬೇಕು ಎಂದು ವಿಧಾನ ಪರಿಷತ್‌ ಸದಸ್ಯ ವೈ.ಎ. ನಾರಾಯಣಸ್ವಾಮಿ ಸಲಹೆ ನೀಡಿದರು. ಕೋವಿಡ್ ವೈರಸ್‌ ಹರಡುವುದನ್ನ ತಡೆಗಟ್ಟುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ ಪಾಲನೆ ಅತೀ ಮುಖ್ಯ. ದಾವಣಗೆರೆಯಲ್ಲಿ ಲಾಕ್‌ಡೌನ್‌ ಹೇಗೆ ಪಾಲನೆಯಾಗುತ್ತಿದೆ ಎಂದು ನಾರಾಯಣಸ್ವಾಮಿ ಪ್ರಶ್ನಿಸಿದರು. ಆಜಾದ್‌ನಗರ, ಶಾಂತಿ ಟಾಕೀಸ್‌ ರಸ್ತೆ ಇತರೆ ಭಾಗದಲ್ಲಿ ಲಾಕ್‌ಡೌನ್‌ ಸರಿಯಾಗಿ ಪಾಲನೆ ಆಗುತ್ತಿಲ್ಲ ಎಂದು ಶಾಸಕ ಎಸ್‌.ವಿ. ರಾಮಚಂದ್ರ ಅಸಮಾಧಾನ ವ್ಯಕ್ತಪಡಿಸಿದರು.

ಕೋವಿಡ್ ವೈರಸ್‌ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳವುದು ಸಹ ಮುಖ್ಯ. ನಗರಾಭಿವೃದ್ಧಿ ಇಲಾಖೆ ಸಚಿವನಾಗಿ ಆದನ್ನು ಪಾಲಿಸಬೇಕಾಗುತ್ತದೆ. ಹಾಗಾಗಿ ದಾವಣಗೆರೆಯ ಎಲ್ಲಾ ಕಡೆ ಸ್ವತ್ಛ ವಾತಾವರಣ ನಿರ್ಮಾಣ ಮಾಡಿರಬೇಕು. ಪರಿಶೀಲನಾ ಸಂದರ್ಭದಲ್ಲಿ ಏನಾದರೂ ಕೊರತೆ, ಸಮಸ್ಯೆ ಕಂಡು ಬಂದಲ್ಲಿ ನಿಮ್ಮನ್ನೇ ಹೊಣೆ ಮಾಡಲಾಗುವುದು ಎಂದು ನಗರಪಾಲಿಕೆ ಆಯುಕ್ತ ವಿಶ್ವನಾಥ್‌ ಮುದಜ್ಜಿಗೆ ಸಚಿವರು ತಾಕೀತು ಮಾಡಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಇಬ್ರಾಹಿಂ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಭೈರತಿ ಬಸವರಾಜ್‌, ವಲಸೆ ಕಾರ್ಮಿಕರು ಒಳಗೊಂಡಂತೆ ಎಲ್ಲಾ ಕಾರ್ಮಿಕರಿಗೆ ಅಗತ್ಯ ವಸ್ತುಗಳನ್ನು ಸಮರ್ಪಕವಾಗಿ ಪೂರೈಕೆ ಮಾಡುವಂತೆ ತಿಳಿಸಿದರು. ಶಾಸಕ ಎಸ್‌.ಎ. ರವೀಂದ್ರನಾಥ್‌, ವಿಧಾನ ಪರಿಷತ್‌ ಸದಸ್ಯ ಕೆ. ಅಬ್ದುಲ್‌ ಜಬ್ಟಾರ್‌, ಜಿಪಂ ಅಧ್ಯಕ್ಷೆ ಯಶೋದಮ್ಮ, ಮೇಯರ್‌ ಬಿ.ಜಿ. ಅಜಯ್‌ಕುಮಾರ್‌, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.