ಕೋವಿಡ್ ನಲ್ಲಿ ಕೈಹಿಡಿದ ನರೇಗಾ

ಜಿಲ್ಲೆಯಲ್ಲಿ 33765 ಕೃಷಿ ಕಾರ್ಮಿಕರಿಗೆ ಕೆಲಸ |ನಿಗದಿತ ಗುರಿ ತಲುಪುವಲ್ಲಿ ಹಿನ್ನಡೆ

Team Udayavani, Apr 22, 2020, 12:29 PM IST

22-April-09

ಬಳ್ಳಾರಿ; ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಕೋವಿಡ್ ಸಂಕಷ್ಟದ ನಡುವೆಯೂ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿರುವುದು.

ಬಳ್ಳಾರಿ: ಕೋವಿಡ್ ವೈರಸ್‌, ಲಾಕ್‌ಡೌನ್‌ ನಿಮಿತ್ತ ಎಲ್ಲ ಕ್ಷೇತ್ರಗಳು ಬಂದ್‌ ಆಗಿದ್ದರೂ ಗ್ರಾಮೀಣ ಭಾಗದಲ್ಲಿ ಕೃಷಿ ಕೂಲಿ ಕಾರ್ಮಿಕರನ್ನು ಉದ್ಯೋಗ ಖಾತ್ರಿ ಯೋಜನೆ ಕೈ ಹಿಡಿದಿರುವುದು ನೆಮ್ಮದಿ ಮೂಡಿಸಿದರೆ, ವೈರಸ್‌ ಹಿನ್ನೆಲೆಯಲ್ಲಿ ಸೀಮಿತ ಜನರಿಗಷ್ಟೇ ಕೆಲಸ ನೀಡಬೇಕಿರುವುದು ಬೇಸರ ಮೂಡಿಸಿದೆ.

ಕೋವಿಡ್ ವೈರಸ್‌ ನಿಯಂತ್ರಿಸುವ ಸಲುವಾಗಿ ಲಾಕ್‌ಡೌನ್‌ ಜಾರಿಗೊಳಿಸಿರುವ ಪರಿಣಾಮ ಎಲ್ಲ ಕ್ಷೇತ್ರಗಳು ಬಂದ್‌ ಆಗಿವೆ. ಆದರೆ, ಗ್ರಾಮೀಣ ಭಾಗದಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯು ಕೃಷಿ ಕೂಲಿ ಕಾರ್ಮಿಕರ ಕೈ ಹಿಡಿದಿದೆ. ಕೊರೊನಾ ಕಂಟಕದಿಂದ ಎಲ್ಲ ಕ್ಷೇತ್ರಗಳು ಬಂದ್‌ ಆಗಿರುವ ಇಂಥ ತುರ್ತು ಸಂದರ್ಭದಲ್ಲಿ ಎಲ್ಲೆಡೆ ನರೇಗಾ ಯೋಜನೆ ಚಾಲನೆಯಲ್ಲಿದ್ದು, ಕೃಷಿ ಕಾರ್ಮಿಕರ ಅಲ್ಪಪ್ರಮಾಣದ ಆರ್ಥಿಕ ಸಂಕಷ್ಟವನ್ನು ನೀಗಿಸುವಲ್ಲಿ ಯಶಸ್ವಿಯಾಗಿದೆ.

90 ಲಕ್ಷ ಮಾನವ ದಿನಗಳ ಸೃಜನೆ: ಬಳ್ಳಾರಿ ಜಿಲ್ಲಾ ಪಂಚಾಯಿತಿಯು ಪ್ರಸಕ್ತ 2020-2021ನೇ ಸಾಲಿನ ಏಪ್ರಿಲ್‌ 1ರಿಂದ ಒಟ್ಟು 90 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಿದೆ. ಏಪ್ರಿಲ್‌ ತಿಂಗಳಲ್ಲೇ 18 ಲಕ್ಷ ಮಾನವ ದಿನಗಳ ಗುರಿ ಹೊಂದಲಾಗಿತ್ತು. ಆದರೆ ಕೊರೊನಾ ವೈರಸ್‌ ಎಫೆಕ್ಟ್ ನಿಂದಾಗಿ ಕೊಂಚಮಟ್ಟಿಗೆ ಹಿನ್ನಡೆಯಾಗಿದೆ. ಈ ವರೆಗೆ ಬಳ್ಳಾರಿ ತಾಲೂಕು 8313, ಹಡಗಲಿ 3859, ಹಗರಿಬೊಮ್ಮನಹಳ್ಳಿ 3873, ಹರಪನಹಳ್ಳಿ 2180, ಹೊಸಪೇಟೆ 3329, ಕೂಡ್ಲಿಗಿ 4465, ಸಂಡೂರು 5483, ಸಿರುಗುಪ್ಪ 2233 ಸೇರಿ ಒಟ್ಟು 33,735 ಜನರು ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ. ಏಪ್ರಿಲ್‌ 1ರಿಂದ ಏ. 21ರವರೆಗೆ ಸರಾಸರಿ 15 ಲಕ್ಷ ಮಾನವ ದಿನಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿಯ ಅಂಕಿ ಅಂಶಗಳು ಸ್ಪಷ್ಟಪಡಿಸುತ್ತವೆ.

2053 ಕಾಮಗಾರಿಗಳು: ಉದ್ಯೋಗ ಖಾತ್ರಿ ಯೋಜನೆಯಡಿ ಹೊಲಗಳಲ್ಲಿನ ಬದು ನಿರ್ಮಾಣ, ಖಾಸಗಿ ತೋಟಗಳಲ್ಲಿನ ಬೋರ್‌ವೆಲ್‌ ರೀಚಾರ್ಜ್‌ಫೀಟ್‌ ನಿರ್ಮಾಣ ಕಾಮಗಾರಿ, ವೈಯಕ್ತಿಕ ಇಂಗುಗುಂಡಿ ನಿರ್ಮಾಣ, ಸಾಮಾಜಿಕ ಅರಣ್ಯ ಇಲಾಖೆಯವರು ಗಿಡಗಳನ್ನು ನೆಡಲು ಸೂಚಿಸಿರುವ ಸರ್ಕಾರಿ ಜಾಗದಲ್ಲಿ ಗುಂಡಿಗಳನ್ನು ತೋಡುವುದು, ಅರಣ್ಯ ಪ್ರದೇಶದಲ್ಲಿ ಮಣ್ಣು ಮತ್ತು ನೀರು ಸಂರಕ್ಷಣೆಯ ಕಾಮಗಾರಿಗಳು, ಕೆರೆ ಹೂಳೆತ್ತುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ ಬಳ್ಳಾರಿ ತಾಲೂಕು 366, ಹಡಗಲಿ 324, ಹಗರಿಬೊಮ್ಮನಹಳ್ಳಿ 277, ಹರಪನಹಳ್ಳಿ, 230, ಹೊಸಪೇಟೆ 310, ಕೂಡ್ಲಿಗಿ 305, ಸಂಡೂರು 134, ಸಿರುಗುಪ್ಪ 107 ಕಾಮಗಾರಿಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 2053 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು ಚಾಲನೆಯಲ್ಲಿವೆ.

ನರೇಗಾಕ್ಕೂ ಕೋವಿಡ್ ಕಂಟಕ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಎಲ್ಲ ಕ್ಷೇತ್ರಗಳು ಬಂದ್‌ ಆಗಿರುವುದರ ನಡುವೆಯೂ ನರೇಗಾ ಕಾಮಗಾರಿ ಚಾಲನೆ ಪಡೆದುಕೊಂಡಿರುವುದು ಕೃಷಿ ಕಾರ್ಮಿಕರಲ್ಲಿ ಒಂದಷ್ಟು ನೆಮ್ಮದಿ ಮೂಡಿಸಿದರೆ, ವೈರಸ್‌ ಎಫೆಕ್ಟ್ನಿಂದಾಗಿ ನಿಗದಿತ ಗುರಿಯಂತೆ ಒಂದೇ ಕಡೆ ನಿರೀಕ್ಷಿತ ಕೃಷಿ ಕಾರ್ಮಿಕರಿಗೆ ಕೆಲಸ ನೀಡದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಕಡೆ ಕೇವಲ 10ರಿಂದ 15 ಜನರಿಗೆ ಮಾತ್ರ ಕೆಲಸ ನೀಡಬೇಕು. ಮಾಸ್ಕ್ ಧರಿಸಿರಬೇಕು. ಸ್ಯಾನಿಟೈಜರ್‌ ನೀಡಬೇಕು. ಜತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಾಗಿದೆ. ಇಂಥ ತುರ್ತು ಪರಿಸ್ಥಿತಿ ಸಂದರ್ಭದಲ್ಲೂ ಕೃಷಿ ಕಾರ್ಮಿಕರಿಗೆ ನರೇಗಾ ಅಡಿ ಕೆಲಸ ದೊರೆಯುತ್ತಿರುವುದು ರೈತರಲ್ಲಿ ನೆಮ್ಮದಿ ಮೂಡಿಸಿದರೂ, ನಿಗದಿತ ಗುರಿ ತಲುಪುವಲ್ಲಿ ಬಳ್ಳಾರಿ ಜಿಪಂಗೆ ಹಿನ್ನಡೆಯಾದಂತಾಗಿದೆ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.