ತರಾಸು ಜನ್ಮಶತಮಾನೋತ್ಸವ ಸರ್ಕಾರವೇ ಆಚರಿಸಲಿ
Team Udayavani, Apr 22, 2020, 4:19 PM IST
ನಾಯಕನಹಟ್ಟಿ: ತಳಕು ಸಮೀಪದ ಹೊಸಹಳ್ಳಿ ಶಾಲೆ ಆವರಣದಲ್ಲಿರುವ ತರಾಸು ಪುತ್ಥಳಿಗೆ ಗೌರವ ಸಲ್ಲಿಸಲಾಯಿತು
ನಾಯಕನಹಟ್ಟಿ: ತರಾಸುರವರ ಜನ್ಮ ಶತಮಾನೋತ್ಸವದ ವಿಶಿಷ್ಟ ಆಚರಣೆಗೆ ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಜಿಪಂ ಸದಸ್ಯ ಓಬಳೇಶ್ ಒತ್ತಾಯಿಸಿದ್ದಾರೆ.
ತಳಕು ಗ್ರಾಮದಲ್ಲಿ ಮಂಗಳವಾರ ನಡೆದ ತರಾಸುರವರ 100 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದ ಶ್ರೇಷ್ಠ ಕಾದಂಬರಿಕಾರರಲ್ಲಿ ತರಾಸು ಒಬ್ಬರಾಗಿದ್ದಾರೆ. ತ.ಸು. ಶಾಮರಾಯರು, ಟಿ.ಎಸ್. ವೆಂಕಣ್ಣಯ್ಯ ಹಾಗೂ ತರಾಸುರವರು ಚಿತ್ರದುರ್ಗ ಜಿಲ್ಲೆ ಹಾಗೂ ರಾಜ್ಯಕ್ಕೆ ಶ್ರೇಷ್ಠ ಕೊಡುಗೆ ನೀಡಿದ್ದಾರೆ. ಇವರುಗಳಿಂದ ತಳಕು ಗ್ರಾಮ ಇಡೀ ರಾಜ್ಯದಲ್ಲಿ ಹೆಸರು ಪಡೆದಿದೆ. ರಾಷ್ಟ್ರೀಯ ಹೆದ್ದಾರಿ 150 ಗ್ರಾಮವನ್ನು ಪ್ರವೇಶಿಸುವ ಪ್ರದೇಶದಲ್ಲಿ ತರಾಸು ಕಂಚಿನ ಪುತ್ಥಳಿ ನಿರ್ಮಿಸಬೇಕು. ಜನ್ಮ ಶತಮಾನೋತ್ಸವದ ಆಚರಣೆಯನ್ನು ಸರ್ಕಾರ ವಿಜೃಂಭಣೆಯಿಂದ ಆಚರಿಸಬೇಕು. ತಳಕು ಗ್ರಾಮದಲ್ಲಿ ವೆಂಕಣ್ಣಯ್ಯ ಸ್ಮಾರಕ ಗ್ರಂಥಾಲಯವನ್ನು ಮೇಲ್ದರ್ಜೆಗೇರಿಸಬೇಕು ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಈ. ರಾಮರೆಡ್ಡಿ ಮಾತನಾಡಿ, ತಳಕು ಗ್ರಾಮ ತರಾಸುರವರಿಂದ ಗುರುತಿಸಿಕೊಂಡಿದೆ. ಅವರ ಸಾಹಿತ್ಯ ಕೃತಿಗಳನ್ನು ಇಂದಿನ ವಿದ್ಯಾರ್ಥಿಗಳು ಓದುವಂತಾಗಬೇಕು. ಜಿಲ್ಲಾ ಕೇಂದ್ರದಲ್ಲಿ ತರಾಸು ಕಂಚಿನ ಪುತ್ಥಳಿಯನ್ನು ಸ್ಥಾಪಿಸಬೇಕು. ಜನ್ಮ ಶತಮಾನೋತ್ಸವ ಆಚರಣೆಗೆ ಸರ್ಕಾರ ಗಮನ ಹರಿಸಬೇಕು ಎಂದರು. ರೈತ ಮುಖಂಡ ಓಬಣ್ಣ, ಮುಖಂಡ ನಾಗರಾಜ್, ತರಾಸು ಸಹೋದರ ಸಂಬಂಧಿ ಮಧುರನಾಥ್, ಸುರೇಶ್ ಮತ್ತಿತರರು ಇದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.