ಕೋವಿಡ್-19 ಮುಕ್ತಿಯತ್ತ ಉಡುಪಿ: ಇಂದು ಜಿಲ್ಲೆಗೆ ಬೊಮ್ಮಾಯಿ

Team Udayavani, Apr 23, 2020, 6:23 AM IST

ಕೋವಿಡ್-19 ಮುಕ್ತಿಯತ್ತ ಉಡುಪಿ: ಇಂದು ಜಿಲ್ಲೆಗೆ ಬೊಮ್ಮಾಯಿ

ಉಡುಪಿ: ಉಡುಪಿ ಜಿಲ್ಲೆ ಸದ್ಯ ಕೋವಿಡ್-19 ಮುಕ್ತವಾಗಿದ್ದರೂ ಅಧಿಕೃತವಾಗಿ ಪ್ರಕಟವಾಗುವುದು ಪಾಸಿಟಿವ್‌ ಪ್ರಕರಣಗಳು ದಾಖಲಾಗದೆ 28 ದಿನಗಳಾದ ಬಳಿಕ. ಮಾ. 29ರಂದು ಜಿಲ್ಲೆಯಲ್ಲಿ ಮೂರನೇ ಪ್ರಕರಣ ದಾಖಲಾಗಿತ್ತು. ಅನಂತರ ಯಾವುದೇ ಪ್ರಕರಣ ದಾಖಲಾಗಿಲ್ಲ ಮತ್ತು ಸೋಂಕಿತ ಮೂವರೂ ಗುಣಮುಖ ರಾಗಿ ಬಿಡುಗಡೆಗೊಂಡಿದ್ದಾರೆ.

ಪಾಸಿಟಿವ್‌ ಪ್ರಕರಣ ದಾಖಲಾಗದೆ ಇದುವರೆಗೆ 24 ದಿನಗಳು ಆಗಿವೆ. ಇನ್ನೂ ನಾಲ್ಕು ದಿನ ಪ್ರಕರಣ ಕಂಡು ಬಾರದೆ ಇದ್ದರೆ ಉಡುಪಿ ಜಿಲ್ಲೆ ಕೋವಿಡ್-19 ಮುಕ್ತವಾಗಲಿದೆ.

ಉಡುಪಿಯ ಡಾ| ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಟ್ಕಳದ ಗರ್ಭಿಣಿಯ ಗಂಟಲ ದ್ರವ ಮಾದರಿಯ ವರದಿ ಬುಧವಾರವೂ ಕೈ ಸೇರಿಲ್ಲ. ಜಿಲ್ಲೆಯಲ್ಲಿ ಬುಧವಾರ 13 ಜನರ ಮಾದರಿಗಳನ್ನು ಸಂಗ್ರಹಿಸಲಾಗಿದ್ದು ಬಂದ ಒಂದು ವರದಿ ನೆಗೆಟಿವ್‌ ಆಗಿದೆ. ಇದುವರೆಗೆ 993 ಜನರ ಮಾದರಿಗಳನ್ನು ಸಂಗ್ರಹಿಸಲಾಗಿದೆ. 110 ಮಾದರಿಗಳ ವರದಿ ಬರಬೇಕಾಗಿದೆ.

ಬುಧವಾರ 78 ಮಂದಿ ಹೆಸರು ನೋಂದಣಿ ಮಾಡಿಸಿದ್ದಾರೆ. 29 ಮಂದಿ 28 ದಿನಗಳ, 65 ಮಂದಿ 14 ದಿನಗಳ ನಿಗಾವಣೆ ಮುಗಿಸಿದ್ದು 697 ಮಂದಿ ನಿಗಾ ದಲ್ಲಿದ್ದಾರೆ. ಒಬ್ಬರು ಆಸ್ಪತ್ರೆ ಕ್ವಾರಂಟೈನ್‌ಗೆ ಸೇರಿದ್ದು ಒಬ್ಬರು ಬಿಡುಗಡೆಗೊಂಡಿದ್ದಾರೆ. 26 ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ. 11 ಮಂದಿ ಆಸ್ಪತ್ರೆ ಐಸೊಲೇಶನ್‌ ವಾರ್ಡ್‌ಗೆ ಸೇರಿದ್ದು ನಾಲ್ವರು ಬಿಡುಗಡೆಗೊಂಡಿದ್ದಾರೆ. 52 ಮಂದಿ ವಾರ್ಡ್‌ನಲ್ಲಿದ್ದಾರೆ.

ಕೋವಿಡ್-19 ಸೋಂಕಿನ ಭೀತಿ ಆವರಿಸಿದ ಬಳಿಕ ಇದೇ ಮೊದಲ ಬಾರಿ ಜಿಲ್ಲಾ ಉಸ್ತುವಾರಿ ಸಚಿವ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಎ. 23ರಂದು ನಗರಕ್ಕೆ ಆಗಮಿಸಲಿದ್ದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸುವರು. ಜಿಲ್ಲೆ ಸೋಂಕುಮುಕ್ತವಾಗುತ್ತಿರುವ ಈ ಸಂದರ್ಭದಲ್ಲಿ ಹೆಚ್ಚು ಸೋಂಕು ಪೀಡಿತ ಪ್ರದೇಶವಾದ ಬೆಂಗಳೂರಿನಿಂದ ಸಚಿವರು ಆಗಮಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-karkala

Karkala: ನಕ್ಸಲ್ ನಾಯಕ ವಿಕ್ರಂ ಗೌಡ ಹೆಬ್ರಿಯ‌ ಕಾಡಿನಲ್ಲಿ ಎನ್ ಕೌಂಟರ್ ಗೆ ಬಲಿ

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

Udupi: ಗೀತಾರ್ಥ ಚಿಂತನೆ-98: ಮೋಹ ಸಹಜ, ಬಿಡದಿರುವುದು ಮಾತ್ರ ತಪ್ಪು

Udupi: ಗೀತಾರ್ಥ ಚಿಂತನೆ-98: ಮೋಹ ಸಹಜ, ಬಿಡದಿರುವುದು ಮಾತ್ರ ತಪ್ಪು

1

Brahmavara: ಉದ್ಯೋಗ ಭರವಸೆ ನೀಡಿ ಹಣ ವಂಚನೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.