ಮಾಸ್ಕ್ ತಯಾರಿಕೆಯಲ್ಲಿ ತೊಡಗಿಕೊಂಡ ‘ದೇಶದ ಪ್ರಥಮ ಮಹಿಳೆ’ ಸವಿತಾ ಕೋವಿಂದ್
Team Udayavani, Apr 23, 2020, 8:30 AM IST
ನವದೆಹಲಿ: ಜಗತ್ತಿನಾದ್ಯಂತ ಕೋವಿಡ್-19 ಭೀತಿ ದಿನೇ ದಿನೇ ಹೆಚ್ಚಾಗುತ್ತಿದ್ದು ಹಲವು ಗಣ್ಯರು ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಭಾರತದಲ್ಲೂ ಸಿನಿಮಾ ನಟ-ನಟಿಯರು, ರಾಜಕಾರಣಿಗಳು, ಕ್ರೀಡಾಪಟುಗಳು ಮುಂತಾದವರು ಸಾಮಾನ್ಯ ಜನರ ನೆರವಿಗೆ ಧಾವಿಸಿರುವುದನ್ನು ಕಾಣಬಹುದು.
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಪತ್ನಿ ದೇಶದ ಪ್ರಥಮ ಮಹಿಳೆ ಸವಿತಾ ಕೋವಿಂದ್ ಕೂಡ ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದು ರಾಷ್ಟ್ರಪತಿ ಭವನದ ಶಕ್ತಿ ಹಾಥ್ ನಲ್ಲಿ ಫೇಸ್ ಮಾಸ್ಕ್ ಗಳ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಸ್ವತಃ ಮಾಸ್ಕ್ ಧರಿಸಿಕೊಂಡು ಹೊಲಿಗೆ ಯಂತ್ರದ ಮೂಲಕ ಹಲವು ಫೇಸ್ ಮಾಸ್ಕ್ ಗಳನ್ನು ತಯಾರಿಸಿದ್ದಾರೆಂದು ವರದಿ ತಿಳಿಸಿದೆ.
ಈ ಮಾಸ್ಕ್ ಗಳನ್ನು ದೆಹಲಿ ನಗರದ ವಿವಿಧ ಆಶ್ರಯ ಮನೆಗೆ ವಿತರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.
ಈ ಮೂಲಕ ದೇಶದ ಪ್ರಥಮ ಮಹಿಳೆ, ಪ್ರತಿಯೊಬ್ಬರೂ ಕೂಡ ಈ ಸಾಂಕ್ರಮಿಕ ರೋಗದ ವಿರುದ್ಧ ಹೋರಾಡಲು ಕೈಜೋಡಿಬೇಕೆಂದು ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.