ಗುರುಪ್ರಸಾದ್ ಕಾಮಿಡಿ- ಥ್ರಿಲ್ಲರ್ ಚಿತ್ರ
ಸಿನಿಮಾ ಟೈಟಲ್ ಆಯ್ತು ಲಾಕ್ ಡೌನ್
Team Udayavani, Apr 23, 2020, 9:54 AM IST
ಮಠ, ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್, ಎರಡನೇ ಸಲ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಗುರುಪ್ರಸಾದ್ ಸದ್ಯ ಕೋವಿಡ್ 19 ಲಾಕ್ ಡೌನ್ ಮಧ್ಯೆಯೇ ಕಾಮಿಡಿ ಕಥಾಹಂದರದ ಕಥೆಯೊಂದನ್ನು ತೆರೆಗೆ ತರುವ ಪ್ಲಾನ್ ನಲ್ಲಿದ್ದಾರೆ ಎಂಬುದು ನಿಮಗೆ ಗೊತ್ತೇ ಇದೆ. ಈಗ ಈ ಚಿತ್ರಕ್ಕೆ ಲಾಕ್ ಡೌನ್ ಎಂಬ ಟೈಟಲ್ ಇಟ್ಟಿದ್ದಾರೆ ಎಂಬ ಸುದ್ದಿ ಜೋರಾಗಿ ಕೇಳಿಬರುತ್ತಿದೆ.
ಈ ಮೂಲಕ ಲಾಕ್ ಡೌನ್ ಕೂಡಾ ಸಿನಿಮಾ ಟೈಟಲ್ ಆದಂತಾಗಿದೆ. ಸಮಾಜದಲ್ಲಿ ಹೆಚ್ಚು ಚಾಲ್ತಿಯಲ್ಲಿರುವ ವಿಷಯವನ್ನು ತಮ್ಮ ಸಿನಿಮಾ ಟೈಟಲ್ ಆಗಿ ಇಡುವುದು ಸಿನಿಮಾ ಮಂದಿಯ ವಾಡಿಕೆ. ಈಗ ಗುರುಪ್ರಸಾದ್ ಕೂಡಾ ಅದನ್ನೇ ಮಾಡಿದ್ದಾರೆನ್ನಬಹುದು.
ಸದ್ಯ ಹೊರಗಡೆ ಎಲ್ಲೂ ಹೋಗದಂತ ಪರಿಸ್ಥಿತಿ ಇರುವುದರಿಂದ, ಇಂಥ ಸಂದರ್ಭದಲ್ಲಿ ಸಂಪೂರ್ಣ ಇನ್ ಡೋರ್‌ನಲ್ಲಿಯೇ, ಸಾಮಾಜಿಕ ಅಂತರ ಕಾಪಾಡಿಕೊಂಡು ಅತಿ ಕಡಿಮೆ ಕಲಾವಿದರು, ತಂತ್ರಜ್ಞರನ್ನು ಬಳಸಿಕೊಂಡು ಚಿತ್ರೀಕರಣ ಆರಂಭಿಸುವ ಯೋಚನೆಯಲ್ಲಿದ್ದಾರಂತೆ ಗುರುಪ್ರಸಾದ್.
ಈಗಾಗಲೇ ಕಥೆಯೊಂದನ್ನು ಪೂರ್ಣಗೊಳಿಸಿದ್ದು, ಚಿತ್ರದ ಬಗ್ಗೆ ನಿರ್ಮಾಪಕರೊಂದಿಗೆ ಒಪ್ಪಂದ ಬಾಕಿಯಿದೆಯಂತೆ. ಅಂದಹಾಗೆ, ಗುರುಪ್ರಸಾದ್ ಈ ಚಿತ್ರವನ್ನು ತಮ್ಮ ಅಧಿಕೃತ ಆಪ್‌ನಲ್ಲಿ ಬಿಡುಗಡೆ ಮಾಡಲಿದ್ದು, ಈ ಇದರ ವಿನ್ಯಾಸ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ಕೊಡುತ್ತಾರೆ. ಒಟ್ಟಾರೆ ಲಾಕ್ ಡೌನ್ ಮಧ್ಯೆ ಕಾಮಿಡಿ ಚಿತ್ರವೊಂದರ ತಯಾರಿಕೆಯಲ್ಲಿ ನಿರ್ದೇಶಕ ಗುರುಪ್ರಸಾದ್ ತೊಡಗಿಸಿಕೊಂಡಿರುವುದು ಸಿನಿಪ್ರಿಯರಲ್ಲಿ ಒಂದಷ್ಟು ಕುತೂಹಲ ಮೂಡಿಸಿದ್ದು, ಚಿತ್ರ ಹೇಗಿರಲಿದೆ ಅನ್ನೊ ಕುತೂಹಲಕ್ಕೆ ಚಿತ್ರ ಬಿಡುಗಡೆಯಾದ ಮೇಲಷ್ಟೇ ಉತ್ತರ ಸಿಗಲಿದೆ.
ಈ ಬಗ್ಗೆ ಮಾತನಾಡುವ ಗುರುಪ್ರಸಾದ್, ಒಬ್ಬ ರಂಜಕನಾಗಿ ಯಾವುದೇ ಕಲಾವಿದರ ಅಗತ್ಯವಿಲ್ಲ, ನಾನೇ ಎಲ್ಲರನ್ನು ನಗಿಸುತ್ತೇನೆ. ಪ್ರತಿದಿನ ಫೇಸ್ ಬುಕ್ ಲೈವ್ ಮೂಲಕ ಜನರನ್ನು ತಲುಪುತ್ತಿದ್ದೇನೆ. ಪರಿಸ್ಥಿತಿ ಸುಧಾರಿಸಿದರೆ ನಟ ಜಗ್ಗೇಶ್ ಅವರೊಂದಿಗೆ ರಂಗನಾಯಕ ಚಿತ್ರವನ್ನು ಮುಂದುವರೆಸುತ್ತೇನೆ. ಆದರೆ ಅಲ್ಲಿಯವರೆಗೆ ಲಾಕ್ ಡೌನ್ ಅವಧಿಯಲ್ಲಿ ಒಂದು ಸಿನಿಮಾ ಮಾಡಬಹು ಅನ್ನೊದನ್ನ ಸಾಬೀತುಪಡಿಸುವ ಪ್ರಯತ್ನ ಮಾಡುತ್ತಿದ್ದೇನೆ. ಇದು ಅಪರೂಪದ ಪ್ರಯೋಗವಾಗಿದೆ ಎಂದು ಹೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.