ವೈಯಕ್ತಿಕ ಖಾತ್ರಿ ಕಾಮಗಾರಿಗೆ ಹೆಚ್ಚಿನ ಆದ್ಯತೆ

80ಕ್ಕೂ ಹೆಚ್ಚು ಗ್ರಾಪಂಗಳ ವ್ಯಾಪ್ತಿಯಲ್ಲಿ ಕಾಮಗಾರಿ ಕಾರ್ಮಿಕರಿಗೆ 275 ಪ್ರತಿದಿನ ಕೂಲಿ ಪಾವತಿ

Team Udayavani, Apr 23, 2020, 12:22 PM IST

23-April-07

ಯಾದಗಿರಿ: ಉದ್ಯೋಗ ಖಾತ್ರಿ ಕಾಮಗಾರಿಯನ್ನು ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಪರಿಶೀಲಿಸಿದರು.

ಯಾದಗಿರಿ: ಗಡಿ ಜಿಲ್ಲೆ ಯಾದಗಿರಿ ಕಳೆದ ಸಾಲಿನಂತೆ ಮಹತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯದ ಗಮನ ಸೆಳೆದಿದ್ದು, ಸದ್ಯದ ಸಂಕಷ್ಟದ ಸಮಯದಲ್ಲಿ ಕೂಲಿ ಕಾರ್ಮಿಕರ ಜೀವನಕ್ಕೆ ಆಸರೆ ನೀಡಬೇಕಿದೆ. ವಿಶ್ವವೇ ಕೊರೊನಾದಿಂದ ತತ್ತರಿಸಿ ಹೋಗಿದ್ದು, ಜಿಲ್ಲೆಯಿಂದ ಮಹಾನಗರಗಳಿಗೆ ದುಡಿಮೆಗೆ ತೆರಳಿದ್ದ ಸಾವಿರಾರು ಜನರು ಕೆಲಸ ಕಳೆದುಕೊಂಡು ಜಿಲ್ಲೆಗೆ ಹಿಂತಿರುಗಿದ್ದು, ಇದೀಗ ಕೈಯಲ್ಲಿ ಕೆಲಸವಿಲ್ಲದೇ ಚಿಂತಿಗೀಡಾಗಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 84, 577 ಕುಟುಂಬಗಳು 1,73, 487 ಉದ್ಯೋಗ ಚೀಟಿ ಹೊಂದಿದ್ದು, 1,27, 231 ಕಾರ್ಮಿಕರಿದ್ದಾರೆ. ಕಾಮಗಾರಿ ಈಗಷ್ಟೇ ವರ್ಷಾರಂಭವಾಗಿದ್ದು, ಕಾಮಗಾರಿಗಳು ಹಂತ ಹಂತವಾಗಿ ಆರಂಭಗೊಳ್ಳುತ್ತಿರುವ ಮಧ್ಯೆಯೇ ಕೊರೊನಾ ಕಾರ್ಮಿಕರ ಜೀವನಕ್ಕೆ ಹೊಡೆತ ಕೊಟ್ಟಿದೆ. ಜಿಲ್ಲೆಯಲ್ಲಿ 123 ಗ್ರಾಪಂಗಳಲ್ಲಿ 80ಕ್ಕೂ ಹೆಚ್ಚು ಗ್ರಾಪಂಗಳ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಕಾಮಗಾರಿ ನಡೆಯುತ್ತಿದೆ. ವೈಯಕ್ತಿಕ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸಾಮೂಹಿಕ ಕಾಮಗಾರಿ ನಿರ್ವಹಣೆ ವೇಳೆಯೂ ಅಗತ್ಯ ಎಚ್ಚರಿಕೆಗಳನ್ನು ವಹಿಸಲಾಗುತ್ತಿದೆ.

ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡುವುದು, ಕೈಶುಚಿ, ಮಾಸ್ಕ್ಗಳನ್ನು ಕೂಡ ಕಾರ್ಮಿಕರಿಗೆ ವಿತರಿಸಲಾಗುತ್ತಿದೆ. ಕಾರ್ಮಿಕರ ಆರೋಗ್ಯದತ್ತವೂ ಕಾಳಜಿವಹಿಸಿರುವ ಜಿಲ್ಲಾಡಳಿತ ಶುದ್ಧ ಕುಡಿಯುವ ನೀರು ಮತ್ತು ಪ್ರಥಮ ಚಿಕಿತ್ಸಾ ವ್ಯವಸ್ಥೆಯನ್ನೂ ಮಾಡಿದೆ. ಕಾರ್ಮಿಕರಿಗೆ ಕೂಲಿಯೂ 275 ಪ್ರತಿದಿನಕ್ಕೆ ವಿತರಿಸಲಾಗುತ್ತಿದ್ದು, ಯಾದಗಿರಿ, ಶಹಾಪುರ ಹಾಗೂ ಸುರಪುರ ಸೇರಿ 3638 ಕುಟುಂಬಗಳ 5098 ಜನರು ಮಾತ್ರ ಕೆಲಸ ನಿರ್ವಹಿಸುತ್ತಿದ್ದು, ಯಾದಗಿರಿ ತಾಲೂಕಿನ 26 ಗ್ರಾಪಂ, ಸುರಪುರ 29 ಹಾಗೂ ಶಹಾಪುರ 28 ಗ್ರಾಪಂಗಳಲ್ಲಿ 438 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಜಿಪಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಿಂದ ಮರಳಿದವರಿಗೆ ಕೂಲಿ
ಸದ್ಯ ಜಿಲ್ಲೆಯ ವಡಗೇರಾ ವ್ಯಾಪ್ತಿಯಲ್ಲಿ 27 ಕಾರ್ಮಿಕರು ಹಿಂತಿರುಗಿದ್ದು, ಎಲ್ಲರಿಗೂ ಉದ್ಯೋಗ ಕಾರ್ಡ್‌ ಮಾಡಿಸಲಾಗಿದೆ. ಕೆಲಸಕ್ಕೆ ಅರ್ಜಿ ಹಾಕಿರುವ ಜನರಿಗೆ ಕೆಲಸ ನೀಡಿ ಸಂಕಷ್ಟದ ಸಮಯಕ್ಕೆ ಖಾತ್ರಿ ನೆರವಾದಂತಾಗಿದೆ.

ಕೂಲಿ ಕೆಲಸವನ್ನೇ  ನಂಬಿದೆ ಬಾಣತಿಹಾಳ
ಜಿಲ್ಲೆಯ ಶಹಾಪುರ ತಾಲೂಕಿನ ನಾಗನಟಗಿ ಗ್ರಾಪಂ ವ್ಯಾಪ್ತಿಯ ಬಾಣತಿಹಾಳ ಗ್ರಾಮಸ್ಥರು ಉದ್ಯೋಗ ಖಾತ್ರಿಯನ್ನೇ ಅವಲಂಭಿಸಿದ್ದಾರೆ. ಗ್ರಾಮದ ಜನರಿಗೆ ಒಟ್ಟು 100 ಎಕರೆ ಮಾತ್ರ ಕೃಷಿ ಭೂಮಿಯಿದ್ದು, ಗ್ರಾಮೀಣ ಉದ್ಯೋಗ ಖಾತ್ರಿಯೇ ಇವರ ಜೀವನಕ್ಕೆ ಆಸರೆಯಾಗಿದೆ.

ಮುನ್ನೆಚ್ಚರಿಕೆ ಕ್ರಮ ಪರಿಶೀಲನೆ
ಉದ್ಯೋಗ ಖಾತ್ರಿಗೂ ಕೊರೊನಾ ಆತಂಕ ಸೃಷ್ಟಿಯಾಗಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಕಾರ್ಮಿಕರ ಜೀವನೋಪಾಯಕ್ಕೆ ತೊಂದರೆಯಾಗದಂತೆ ಕೆಲಸಗಳನ್ನು ಆರಂಭಿಸಲಾಗಿದೆ. ಕಾರ್ಮಿಕರ ಆರೋಗ್ಯದ ಕಾಳಜಿವಹಿಸಿ ನೋಡಲ್‌ ಅಧಿಕಾರಿಯಾಗಿರುವ ಜಿಪಂ ಉಪಕಾರ್ಯದರ್ಶಿ ಸ್ವತಃ ಕಾಮಗಾರಿ ಸ್ಥಳಗಳಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಕೂಲಿ ಕಾರ್ಮಿಕರಿಗೆ ಲಾಭವಾಗಲೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕಾಳಜಿ ವಹಿಸಬೇಕು. ಕೂಲಿ
ಕಾರ್ಮಿಕರು ಸಂಕಷ್ಟ ಎದುರಿಸುತ್ತಿರುವ ಪ್ರಸ್ತುತ ದಿನಗಳಲ್ಲಿ ಕನಿಷ್ಠ 2-3 ತಿಂಗಳಾದರೂ ಕೆಲಸ ನೀಡಿ ಅನುಕೂಲ ಕಲ್ಪಿಸಬೇಕು.
ಶರಣಗೌಡ ಗೋಗಲ್‌,
ರೈತ ಕೃಷಿ ಕಾರ್ಮಿಕ
ಸಂಘದ ಜಿಲ್ಲಾಧ್ಯಕ್ಷ

ಅನೀಲ ಬಸೂದೆ

ಟಾಪ್ ನ್ಯೂಸ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

3-alur

Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

Kalaburagi: 6 acres of sugarcane crop caught fire after being struck by an electric wire

Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.