ಬೆಳಗಾವಿಯ ನೂತನ ಕೋವಿಡ್-19 ಪ್ರಯೋಗಾಲಯಕ್ಕೆ ಚಾಲನೆ
Team Udayavani, Apr 23, 2020, 1:10 PM IST
ಬೆಳಗಾವಿ : ಜಿಲ್ಲೆಗೆ ಹೊಸದಾಗಿ ಮಂಜೂರಾಗಿರುವ ಕೋವಿಡ್-19 ಗೆ ಸಂಬಂಧಿಸಿದ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ ಗುರುವಾರ ಚಾಲನೆ ನೀಡಿದರು.
ಇಲ್ಲಿನ ನೆಹರೂ ನಗರದಲ್ಲಿರುವ ಭಾರತ ಸರ್ಕಾರದ ಆರೋಗ್ಯ ಸಂಶೋಧನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ”ಯ ಆವರಣದಲ್ಲಿ ಕೋವಿಡ್-19 ಪರೀಕ್ಷಾ ಪ್ರಯೋಗಾಲಯ ಆರಂಭಿಸಲಾಗಿದ
ಸದ್ಯಕ್ಕೆ ಪ್ರತಿದಿನ 90 ಮಾದರಿಗಳನ್ನು ಪರೀಕ್ಷಿಸುವ ಸಾಮರ್ಥ್ಯವನ್ನು ಪ್ರಯೋಗಾಲಯ ಹೊಂದಿರುತ್ತದೆ.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ವಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಚಿಕ್ಕೋಡಿ ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಸತೀಶ್ ಜಾರಕಿಹೊಳಿ, ದುರ್ಯೋಧನ ಐಹೊಳೆ, ಮಹಾದೇವಪ್ಪ ಯಾದವಾಡ, ಅನಿಲ್ ಬೆನಕೆ, ಅಭಯ್ ಪಾಟೀಲ, ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಕೋವಿಡ್-19 ನಿಯಂತ್ರಣಾ ಕ್ರಮಗಳ ಉಸ್ತುವಾರಿ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ದೇವಪ್ರಸಾದ ಚಟ್ಟೋಪಾಧ್ಯಾಯ,ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
Belgavi; ಕರಾಳ ದಿನಾಚರಣೆ ನಡೆಸಿದ ಎಂಇಎಸ್ ನವರ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.