ಹಾಸ್ಟೆಲ್ ತೆರೆದು ಅವಶ್ಯಕತೆಯಿದ್ದವರಿಗೆ ಊಟ- ವಸತಿ ವ್ಯವಸ್ಥೆ ಕಲ್ಪಿಸಿ: ಡಿಸಿಎಂ ಕಾರಜೋಳ

Team Udayavani, Apr 23, 2020, 3:29 PM IST

ಹಾಸ್ಟೆಲ್ ತೆರೆದು ನಿರ್ಗತಿಕರಿಗೆ ಊಟ- ವಸತಿ ವ್ಯವಸ್ಥೆ ಕಲ್ಪಿಸಿ: ಡಿಸಿಎಂ ಕಾರಜೋಳ

ಕಲಬುರಗಿ: ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವವರು ಊಟ, ವಸತಿ ಇಲ್ಲದೇ ಬಳಲುವುದನ್ನು ತಪ್ಪಿಸಲು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳನ್ನು ತೆರೆಯಬೇಕೆಂದು ಜಿಲ್ಲಾ ಉಸ್ತುವಾರಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ‌ಕಚೇರಿ ಸಭಾಂಗಣದಲ್ಲಿ ಗುರುವಾರ ಕೋವಿಡ್-19 ಸೋಂಕು ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ‌ಮಾತನಾಡಿದ ಅವರು, ಯಾರೂ ಊಟ ಇಲ್ಲದೇ ಹಸಿವಿನಿಂದ ಬಳಲಬಾರದು. ಯಾರೇ ಬಂದರೂ ಇಂದಿನಿಂದಲೇ ವಸತಿ ನಿಲಯಗಳಲ್ಲಿ ಊಟದ ವ್ಯವಸ್ಥೆ ಮಾಡಿ ಎಂದು ನಿರ್ದೇಶಕ ನೀಡಿದರು.

ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ 14,800 ಕ್ವಿಂಟಾಲ್ ಅಕ್ಕಿ, ಉಪ್ಪಿಟ್ಟು ರವೆ, ಇಡ್ಲಿ ರವೆ, ಎಣ್ಣೆ ಅಗತ್ಯ ದಿನಸಿ ಇದೆ. ತರಕಾರಿ ಮಾತ್ರ ಖರೀದಿಸಬೇಕಾಗುತ್ತದೆ. ತಕ್ಷಣವೇ ತರಕಾರಿ ಖರೀದಿಸಿ ಎಲ್ಲಿ ಅವಶ್ಯ ಇದೆಯೋ ಅಲ್ಲಿ ವಸತಿ ನಿಲಯಗಳನ್ನು ಆರಂಭಿಸಿ ಅವಶ್ಯಕತೆ ಇರುವವರಿಗೆ ವ್ಯವಸ್ಥೆ ಕಲ್ಪಿಸಬೇಕೆಂದರು.

ಅಲ್ಲದೇ, ವಸತಿ ನಿಲಯಗಳಲ್ಲಿ ಉಳಿದುಕೊಳ್ಳುವವರಿಗೆ ಬೆಡ್ ಶೀಟ್, ಟವೆಲ್, ಸಾಬೂನು ಖರೀದಿಸಿ ಕೊಡಿ. ಅವರು ಊಟ ಮಾಡಿ ಮತ್ತೆ ಹೊರಗಡೆ ಓಡಾಡುವಂತಿಲ್ಲ. ವಸತಿ ನಿಲಯದಲ್ಲೇ ಇರುವಂತೆ ‌ನೋಡಿಕೊಳ್ಳಬೇಕು. ಅವರಿಗೆ ನೀಡಲಾದ ಬೆಡ್ ಶೀಟ್, ಟವೆಲ್ ವಾಪಸ್ ‌ಪಡೆಯಬೇಡಿ ಎಂದು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

1,200 ರೂ. ಕಿಟ್:  ಲಾಕ್ ಡೌನ್ ನಿಂದ ಹಡಪದ ಸಮಾಜದವರು ಸಾಕಷ್ಟು ಸಮಸ್ಯೆಗೆ ಸಿಲುಕಿದ್ದಾರೆ. ಕ್ಷೌರಿಕ ಅಂಗಡಿಗಳು ಬಂದ್ ಆಗಿರುವುದರಿಂದ ಅವರು ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಅವರಿಗೆ ಅಡುಗೆ ದಿನಸಿಯ 1,200 ರೂ. ಮೊತ್ತದ ಕಿಟ್ ನೀಡುವಂತೆ ಜಿಲ್ಲಾಧಿಕಾರಿಗೆ ಡಿಸಿಂ ಕಾರಜೋಳ ಸೂಚಿಸಿದರು.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.