ಕೋವಿಡ್ ನಿಯಂತ್ರಣಕ್ಕೆ ಕೈಜೋಡಿಸಿ: ರಾಮಚಂದ್ರಪ್ಪ
Team Udayavani, Apr 23, 2020, 5:20 PM IST
ಹರಪನಹಳ್ಳಿ: ಪುಣಬಗಟ್ಟ ಗ್ರಾಮದಲ್ಲಿ ಶಾಸಕ ಎಸ್.ವಿ. ರಾಮಚಂದ್ರಪ್ಪ ಬಡವರಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು
ಹರಪನಹಳ್ಳಿ: ಕೊರೊನಾ ನಿಯಂತ್ರಣ ಮಾಡಲು ಸರ್ಕಾರ ರೂಪಿಸುವ ನೀತಿ-ನಿಯಮಗಳನ್ನು ಪಾಲಿಸುವ ಮೂಲಕ ಸೋಂಕು ನಿವಾರಣೆಗೆ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಶಾಸಕ ಎಸ್.ವಿ. ರಾಮಚಂದ್ರಪ್ಪ ಮನವಿ ಮಾಡಿದರು.
ಜಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ತಾಲೂಕಿನ 7 ಗ್ರಾಮ ಪಂಚಾಯಿತಿಗಳಾದ ಅರಸೀಕೆರೆ, ತೌಡೂರು, ಪುಣಬಗಟ್ಟ, ಹೊಸಕೋಟೆ, ಉಚ್ಚಂಗಿದುರ್ಗ, ಚಟ್ನಳ್ಳಿ, ಅಣಜಿಗೆರೆ ಗ್ರಾಮ ಪಂಚಾಯಿತಿಗಳಲ್ಲಿ ಬಡವರ ಆಹಾರ ಧಾನ್ಯ ಕಿಟ್ ಹಾಗೂ ಆರೋಗ್ಯ ಇಲಾಖೆ ಸೇರಿದಂತೆ ಟಾಸ್ಕ್ಫೋರ್ಸ್ ಸಮಿತಿ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿ ಅವರು ಮಾತನಾಡಿದರು.
ಶಾಸಕರ ಅನುದಾನದಲ್ಲಿ ಗ್ರಾಮ ಪಂಚಾಯಿತಿ, ಪೊಲೀಸ್ ಇಲಾಖೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಂಸದ ಜಿ.ಎಂ.ಸಿದ್ದೇಶ್ವರ ಹಾಗೂ ಶಾಸಕ ಎಸ್.ವಿ ರಾಮಚಂದ್ರ ಅವರ ವೈಯಕ್ತಿಕ ಹಣದಲ್ಲಿ ಉಚ್ಚಂಗಿದುರ್ಗ, ಚಟ್ನಿಹಳ್ಳಿ, ಅಣಜಿಗೆರೆ, ಅರಸೀಕೆರೆ, ಹೊಸಕೋಟೆ, ತವಡೂರು, ಪುಣಬಗಟ್ಟ ಪಂಚಾಯತಿ ವ್ಯಾಪ್ತಿಯ ಬಡ ಕುಟುಂಬದ ಅರ್ಹ ಫಲಾನುಭವಿಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಾಪಂ ಇಓ ಅನಂತರಾಜು, ಉಪ ತಹಶೀಲ್ದಾರ್ ಫಾತಿಮಾ, ಕಂದಾಯ ನಿರೀಕ್ಷಕ ಶ್ರೀಧರ್, ಜಗಳೂರು ತಹಶೀಲ್ದಾರ್ ಹುಲ್ಲುಮನೆ ತಿಮ್ಮಣ್ಣ, ಜಗಳೂರು ಬಿಜೆಪಿ ಅಧ್ಯಕ್ಷ ಪಲ್ಲಗಟ್ಟೆ ಮಹೇಶ್, ಮುಖಂಡರಾದ ಚಟ್ನಿಹಳ್ಳಿ ರಾಜಪ್ಪ, ಯರಬಳ್ಳಿ ಸಿದ್ದಪ್ಪ, ವೈ.ಡಿ.ಅಣ್ಣಪ್ಪ, ಫಣಿಯಾಪುರ ಲಿಂಗರಾಜ್, ಬಾಲೇನಹಳ್ಳಿ ಕೆಂಚನಗೌಡ, ಪರಶುರಾಮಪ್ಪ, ಪಿ.ಎಂ.ಬಾಲಚಂದ್ರಯ್ಯ, ಗ್ರಾಪಂ ಅಧ್ಯಕ್ಷೆ ವಿಜಯಲಕ್ಷ್ಮೀ, ಕೆ. ಸಿದ್ದಪ್ಪ, ಆಶಾ ಕಾರ್ಯಕರ್ತರು, ಅಂಗನವಾಡಿ, ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.