ನಿರ್ಬಂಧ ಮುಕ್ತವಾದ ಬಳಿಕ ಸ್ವರಕ್ಷಣೆ ಅಗತ್ಯ: ಬೊಮ್ಮಾಯಿ

Team Udayavani, Apr 24, 2020, 5:27 AM IST

ನಿರ್ಬಂಧ ಮುಕ್ತವಾದ ಬಳಿಕ ಸ್ವರಕ್ಷಣೆ ಅಗತ್ಯ: ಬೊಮ್ಮಾಯಿ

ಉಡುಪಿ: ಅಖೀಲ ಭಾರತ ಮಟ್ಟದಲ್ಲಿ ನಿರ್ಬಂಧ ಮುಕ್ತಾಯವಾದ ಬಳಿಕ ಜನರು ಸ್ವರಕ್ಷಣೆ ಮಾಡಿ ಕೊಳ್ಳಬೇಕಾಗುತ್ತದೆ ಎಂದು ಉಸ್ತುವಾರಿ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಭಾರತೀಯ ವೈದ್ಯ ಮಂಡಳಿ ಸದಸ್ಯರು ಮತ್ತು ಸರಕಾರಿ ವಲಯದ ವೈದ್ಯರ ಸಭೆಯಲ್ಲಿ ಅವರು ಮಾತನಾಡಿ, ಆರೋಗ್ಯ ಕ್ಷೇತ್ರದವರು ನಡೆಸುತ್ತಿರುವ ಸೇವೆಗೆ ಮೆಚ್ಚುಗೆ ಸೂಚಿಸಿದರು. ಉಡುಪಿ ಡಾ| ಟಿಎಂಎ ಪೈ ಆಸ್ಪತ್ರೆಯನ್ನು ಕೋವಿಡ್‌ 19 ಆಸ್ಪತ್ರೆಯಾಗಿ ಸೇವೆ ಸಲ್ಲಿಸುತ್ತಿರುವುದು ರಾಜ್ಯದಲ್ಲಿಯೇ ಮಾದರಿಯಾಗಿದೆ ಎಂದು ಶ್ಲಾಘಿಸಿದರು.

ಲಾಕ್‌ಡೌನ್‌ ಮುಗಿದ ಬಳಿಕ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ಹೊರ ಜಿಲ್ಲೆಗಳಿಂದ ಜನರು ಒಮ್ಮೆಲೆ ಬರುವುದು ನಡೆಯುವ ಕಾರಣ ನಿಭಾಯಿಸುವುದು ಕಷ್ಟ ಎಂದು ವೈದ್ಯರು ಕಳವಳ ವ್ಯಕ್ತಪಡಿಸಿದರು.

ಕೋವಿಡ್‌ 19 ತರಾತುರಿಯಲ್ಲಿ ಇತರ ರೋಗಿಗಳನ್ನೂ ಗಮನಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಆಸ್ಪತ್ರೆಗಳ ವೈದ್ಯರ ಸೇವೆ ಬಹು ಅಮೂಲ್ಯವಾದುದು ಎಂದು ಸಚಿವರು ತಿಳಿಸಿದರು.

ಐಎಂಎ ಅಧ್ಯಕ್ಷ ಡಾ| ಉಮೇಶ ಪ್ರಭು, ಡಾ| ಸುದರ್ಶನ್‌ ರಾವ್‌, ಡಾ| ಪಿ.ವಿ. ಭಂಡಾರಿ, ಮಣಿಪಾಲ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ|ಅವಿನಾಶ ಶೆಟ್ಟಿ, ಡಾ| ಟಿಎಂಎ ಪೈ ಕೋವಿಡ್‌ 19 ಆಸ್ಪತ್ರೆಯ ನೋಡಲ್‌ ಅಧಿಕಾರಿ ಡಾ| ಶಶಿಕಿರಣ್‌ ಉಮಾಕಾಂತ್‌ ಮೊದಲಾದವರು ಆಸ್ಪತ್ರೆಗಳಲ್ಲಿ ಕೈಗೊಂಡ ಪ್ರತ್ಯೇಕ ಫೀವರ್‌ ಕ್ಲಿನಿಕ್‌, ಸಾಮಾಜಿಕ ಅಂತರ ಕಾಪಾಡುವಿಕೆ, ಇತರ ರೋಗಗಳಿಗೆ ಪ್ರತ್ಯೇಕ ವ್ಯವಸ್ಥೆಗಳ ಬಗ್ಗೆ ತಿಳಿಸಿದರು.

ಹೊರಜಿಲ್ಲೆಗಳಿಂದ ಬರುವ ಜನರನ್ನು ಕಡ್ಡಾಯ ಕ್ವಾರಂಟೈನ್‌ಗೆ ಒಳಪಡಿಸುವುದು, ರೋಗಿಗಳಿಗೆ ಅನು ಕೂಲವಾಗಲು ಮೊಬೈಲ್‌ ಕ್ಲಿನಿಕ್‌ಗಳನ್ನು ತೆರೆಯುವುದೇ ಮೊದಲಾದ ಸಲಹೆ ನೀಡಿದರು.

ಟಾಪ್ ನ್ಯೂಸ್

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Udupi: ಯುವತಿ ನಾಪತ್ತೆ; ದೂರು ದಾಖಲು

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.