ಹಾಸ್ಟೆಲ್‌ ತೆರೆದು ನಿರ್ಗತಿಕರಿಗೆ ವ್ಯವಸ್ಥೆ


Team Udayavani, Apr 24, 2020, 12:50 PM IST

24-April-13

ಕಲಬುರಗಿ: ರಾಜಾಪುರ ಬಡಾವಣೆಯಲ್ಲಿ ಲಿಂ.ಚಂದ್ರಶೇಖರ ಪಾಟೀಲ್‌ ರೇವೂರ ಅಭಿಮಾನಿಗಳ ಬಳಗದಿಂದ ಬಡ ಕೂಲಿ ಕಾರ್ಮಿಕರಿಗೆ ಡಿಸಿಎಂ ಗೋವಿಂದ ಕಾರಜೋಳ ಆಹಾರ ಸಾಮಗ್ರಿಗಳ ಕಿಟ್‌ ವಿತರಿಸಿದರು.

ಕಲಬುರಗಿ: ಲಾಕ್‌ ಡೌನ್‌ ಸಂದರ್ಭದಲ್ಲಿ ನಿರ್ಗತಿಕರು ಊಟ, ವಸತಿ ಇಲ್ಲದೇ ಬಳಲುವುದನ್ನು ತಪ್ಪಿಸಲು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳನ್ನು ತೆರೆಯಬೇಕೆಂದು ಡಿಸಿಎಂ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕೊವಿಡ್‌ -19 ಸೋಂಕು ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಿರ್ಗತಿಕರು ಊಟ ಇಲ್ಲದೇ ಹಸಿವಿನಿಂದ ಬಳಲು ಬಾರದು. ಯಾರೇ ಬಂದರೂ ಇಂದಿನಿಂದಲೇ ವಸತಿ ನಿಲಯಗಳಲ್ಲಿ ಊಟದ ವ್ಯವಸ್ಥೆ ಮಾಡಿ ಎಂದು ನಿರ್ದೇಶಕ ನೀಡಿದರು.

ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ 14,800 ಕ್ವಿಂಟಲ್‌ ಅಕ್ಕಿ, ಉಪ್ಪಿಟ್ಟು ರವೆ, ಇಡ್ಲಿ ರವೆ, ಎಣ್ಣೆ ಅಗತ್ಯ ದಿನಸಿ ಇದೆ. ತರಕಾರಿ ಮಾತ್ರ ಖರೀದಿಸಬೇಕಾಗುತ್ತದೆ. ತಕ್ಷಣವೇ ತರಕಾರಿ ಖರೀದಿಸಿ ಎಲ್ಲಿ ಅವಶ್ಯ ಇದೆಯೋ ಅಲ್ಲಿ ವಸತಿ ನಿಲಯಗಳನ್ನು ಆರಂಭಿಸಿ ನಿರ್ಗತಿಕರಿಗೆ ವ್ಯವಸ್ಥೆ ಕಲ್ಪಿಸಬೇಕೆಂದರು.

1,200 ರೂ. ಕಿಟ್‌: ಲಾಕ್‌ ಡೌನ್‌ ನಿಂದ ಹಡಪದ ಸಮಾಜದವರು ಸಾಕಷ್ಟು ಸಮಸ್ಯೆಗೆ ಸಿಲುಕಿದ್ದಾರೆ. ಕ್ಷೌರಿಕ ಅಂಗಡಿಗಳು ಬಂದ್‌ ಆಗಿರುವುದರಿಂದ ಅವರು ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಅವರಿಗೆ ಅಡುಗೆ ದಿನಸಿಯ 1,200 ರೂ. ಮೊತ್ತದ ಕಿಟ್‌ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ಮಹಾರಾಷ್ಟ್ರದಲ್ಲಿ ಅಫ‌ಜಲಪುರ ಕ್ಷೇತ್ರದ ಹೇರೂರ ಗ್ರಾಮದವರು ಸಿಲುಕಿದ್ದಾರೆ. ಅವರನ್ನು ಕರೆ ತರಲು ವ್ಯವಸ್ಥೆ ಮಾಡಿ ಎಂದು ಶಾಸಕ ಎಂ.ವೈ.ಪಾಟೀಲ್‌ ಅವರು ಡಿಸಿಎಂ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ಬೇರೆ ರಾಜ್ಯಗಳಿಂದ ಜನರನ್ನು ಕರೆ ತರಲು ಆಗಲ್ಲ. ಬದಲಿಗೆ ಅವರಿರುವ ಸ್ಥಳದಲ್ಲೇ ಸೌಲಭ್ಯ ಕಲ್ಪಿಸಲಾಗುವುದು. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.