ಸರಕಾರದ ಆದೇಶ ತಪ್ಪದೇ ಪಾಲಿಸಿ
Team Udayavani, Apr 24, 2020, 3:47 PM IST
ಚಿಂಚೋಳಿ: ಶಾಂತಿ ಸಭೆಯಲ್ಲಿ ಡಿವೈಎಸ್ಪಿ ಇ.ಎಸ್.ವೀರಭದ್ರಯ್ಯ ಮಾತನಾಡಿದರು
ಚಿಂಚೋಳಿ: ದೇಶದಲ್ಲಿ ಹಬ್ಬಿರುವ ಕೋವಿಡ್ ವೈರಸ್ ಹರಡುವಿಕೆಯನ್ನು ತಡೆಗಟ್ಟುವುದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಹೊರಡಿಸಿರುವ ಆದೇಶಗಳನ್ನು ಸಾರ್ವಜನಿಕರು ತಪ್ಪದೇ ಕಡ್ಡಾಯವಾಗಿ ಪಾಲಿಸಬೇಕು. ಬಸವ ಜಯಂತಿ ಮತ್ತು ರಂಜಾನ್ ಹಬ್ಬವನ್ನು ಸರಳವಾಗಿ ಅಚರಿಸಬೇಕು ಎಂದು ಡಿವೈಎಸ್ಪಿ ಇ.ಎಸ್.ವೀರಭದ್ರಯ್ಯ ಸೂಚನೆ ನೀಡಿದರು.
ಗಡಿಕೇಶ್ವರ, ಸುಲೇಪೇಟ ಮತ್ತು ಚಿಂಚೋಳಿ ಪಟ್ಟಣದಲ್ಲಿ ಬಸವ ಜಯಂತಿ ಮತ್ತು ರಂಜಾನ್ ಪ್ರಯುಕ್ತ ಹಣ್ಣಿನ ವ್ಯಾಪಾರಿ, ಕಿರಾಣಿ ವರ್ತಕರು ಮತ್ತು ಬೇಕರಿ, ತರಕಾರಿ ವ್ಯಾಪಾರಿಗಳಿಗೆ ಏರ್ಪಡಿಸಿದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಬಸವಾಭಿಮಾನಿಗಳು ಮನೆಯಲ್ಲೇ ಬಸವಣ್ಣನ ಫೋಟೋ ಇಟ್ಟು ಭಕ್ತಿ ಅರ್ಪಿಸಬೇಕು. ಬಸವಣ್ಣನವರ ಮೂರ್ತಿಗೆ ಕೇವಲ ನಾಲ್ವರು ಸೇರಿ ಪೂಜೆ, ಪುನಸ್ಕಾರ ಮಾಡಬೇಕು. ಹೆಚ್ಚು ಜನ ಸೇರಬಾರದು. ರಂಜಾನ್ ಹಬ್ಬದ ಉಪವಾಸ ದಿನಗಳು ಪ್ರಾರಂಭ ಆಗುವುದರಿಂದ ಯಾರು ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಾರದು. ಮನೆಗಳಲ್ಲಿಯೇ ಪ್ರಾರ್ಥಿಸಬೇಕು. ವರ್ತಕರು ಬೇಕಾಬಿಟ್ಟಿಯಾಗಿ ದರಗಳಿಂದ ಅಗತ್ಯ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಅಂತಹವರ ಪರವಾನಗಿ ರದ್ದುಪಡಿಸಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದರು.
ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ, ಸಿಪಿಐ ಎಚ್.ಎಂ. ಇಂಗಳೇಶ್ವರ, ಮುಖ್ಯಾಧಿಕಾರಿ ಅಭಯಕುಮಾರ ಕೋವಿಡ್ ವೈರಸ್ ಹರಡುವಿಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು. ಜಿಪಂ ಸದಸ್ಯ ಗೌತಮ್ ಪಾಟೀಲ, ಸುಭಾಶ ಸೀಳಿನ, ಮಹಾರುದ್ರಪ್ಪ ದೇಸಾಯಿ, ಬಸವರಾಜ ಸಜ್ಜನಶೆಟ್ಟಿ, ಅಜಿತ್ ಪಾಟಿಲ, ಸಂತೋಷ ಗಡಂತಿ,ನಿರಾಶೆ ಬ್ರದರ್ಸ್, ಮೋಮಿನ ಪಾಷಾ, ಶ್ರೀಕಾಂತ ಸುಂಕದ, ರಮೇಶ ಬೇಕರಿ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.