ವಾಹನ ಚಾಲಕರಿಗೆ ಕ್ವಾರಂಟೈನ್
Team Udayavani, Apr 24, 2020, 4:15 PM IST
ಅಜ್ಜಂಪುರ: ಜಾಮಿಯಾ ಮಸೀದಿ ಮುಂಭಾಗ ಲಾರಿ ಮಾಲೀಕರ ಮತ್ತು ಚಾಲಕರ ಸಭೆ ನಡೆಯಿತು
ಅಜ್ಜಂಪುರ: ಹೊರ ಜಿಲ್ಲೆ ಅಥವಾ ರಾಜ್ಯಕ್ಕೆ ಹೋಗಿ ಹಿಂತಿರುಗಿದ ಸರಕು ವಾಹನ ಚಾಲಕರು ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಗಾಗಬೇಕು ಎಂದು ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ ತಿಳಿಸಿದರು.
ಅಜ್ಜಂಪುರದ ಜಾಮೀಯಾ ಮಸೀದಿ ಮುಂಭಾಗ ಗುರುವಾರ ನಡೆದ ಲಾರಿ ಮಾಲೀಕರ ಮತ್ತು ಚಾಲಕರ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್-19 ರೋಗ ಪ್ರಕರಣಗಳು ಕೆಲವು ಜಿಲ್ಲೆ ಮತ್ತು ರಾಜ್ಯಗಳಲ್ಲಿ ಸಕ್ರಿಯವಾಗಿವೆ. ಇಂತಹ ಕಡೆಗೆ ಹೋಗಿ ಹಿಂತಿರುಗುವ ವಾಹನ ಚಾಲಕರಿಗೆ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಯೇ ಇದ್ದು, ಮುಂದಿನ ಚಾಲನೆಗೆ ತೆರಳಬೇಕು ಎಂದರು.
ಪಿಎಸ್‌ಐ ಬಸವರಾಜು ಮಾತನಾಡಿ, ಸರಕು ವಾಹನಗಳಿಗೆ ಮಾತ್ರ ಲಾಕ್ ಡೌನ್ ಸಡಿಲತೆ ಇದೆ. ಆದರೆ ಸರಕು ವಾಹನಗಳಲ್ಲಿ ಪ್ರಯಾಣಿಕರ ಸಂಚಾರಕ್ಕೆ ಅವಕಾಶವಿಲ್ಲ. ಇದನ್ನು ಉಲ್ಲಂಘಿಸಿದರೆ ವಾಹನ ವಶಕ್ಕೆ ಪಡೆದು, ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ತಾಲೂಕು ಮುಸ್ಲಿಂ ಸಮಾಜದ ಅಧ್ಯಕ್ಷ ಮಸೂದ್ ಅಹಮದ್ ಮಾತನಾಡಿ, ಕೋವಿಡ್-19 ಹರಡುವ ಭೀತಿ ಹಿನ್ನೆಲೆಯಲ್ಲಿ ಅನ್ಯ ಜಿಲ್ಲೆ, ರಾಜ್ಯಗಳಿಗೆ ಸರಕು ವಾಹನಗಳ ಸಂಚಾರ ರದ್ದುಗೊಳಿಸಿ ಎಂದು ತಹಶೀಲ್ದಾರರಿಗೆ ಮನವಿ ಮಾಡಿದರು. ಪಂಚಾಯತ್ ಸದಸ್ಯ ಮುಜೀಬ್ ಉರ್ ರೆಹಮಾನ್, ರಾಘವೇಂದ್ರ, ಲಾರಿ ಮಾಲೀಕ ರಾಜು ಮತ್ತು ಚಾಲಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.