ಚಳ್ಳಕೆರೆಗೆ ವೇದಾವತಿ ನೀರು: ಶಾಸಕರ ಸಂತಸ
Team Udayavani, Apr 24, 2020, 4:21 PM IST
ಚಳ್ಳಕೆರೆ: ನಗರದ ನೆಹರೂ ವೃತ್ತದಲ್ಲಿ ಶಾಸಕ ಟಿ. ರಘುಮೂರ್ತಿ ಅವರನ್ನು ರೈತ ಸಂಘದ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿದರು.
ಚಳ್ಳಕೆರೆ: ಈ ಭಾಗದ ಸಾರ್ವಜನಿಕರು ಹಾಗೂ ರೈತರಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ನಡೆಸಿದ ಹೋರಾಟಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿತ್ತು. ರೈತ ಸಂಘಟನೆಗಳ ಸಹಕಾರ ಹಾಗೂ ವಿವಿಧ ಪಕ್ಷಗಳ ಮುಖಂಡರ ನೆರವಿನಿಂದ ಈ ಕ್ಷೇತ್ರಕ್ಕೆ ವೇದಾವತಿ ನದಿ ನೀರು ಹರಿದು ಬರುವಂತಾಗಿದೆ ಎಂದು ಶಾಸಕ ಟಿ. ರಘುಮೂರ್ತಿ ಸಂತಸ ವ್ಯಕ್ತಪಡಿಸಿದರು.
ಹಿರಿಯೂರು ತಾಲೂಕಿನ ವಿವಿ ಸಾಗರದಲ್ಲಿ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಚಳ್ಳಕೆರೆಗೆ ಮರಳಿದ ಶಾಸಕರನ್ನು ನೆಹರೂ ವೃತ್ತದಲ್ಲಿ ರೈತ ಸಂಘದ ಧುರೀಣರಾದ ಸೋಮಗುದ್ದು ರಂಗಸ್ವಾಮಿ, ಕೆ.ಪಿ. ಭೂತಯ್ಯ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ವಿವಿ ಸಾಗರದಿಂದ ನೀರು ತರುವ ಕಾರ್ಯಕ್ಕೆ ಆರಂಭದ ಹಂತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಂದಿನ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್, ಜಿಲ್ಲಾ ಉಸ್ತುವಾರಿ ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಸಹಕಾರ ನೀಡಿದ್ದರು. ಈಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೀರು ಹರಿಸುವ ಕಾರ್ಯಕ್ಕೆ ಆದೇಶ ನೀಡಿದರು. ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಈ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ನೀಡಿದ್ದಾರೆ ಎಂದರು. ಅಖಂಡ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಸೋಮಗುದ್ದು ರಂಗಸ್ವಾಮಿ, ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.