“ಇ-ಸಾರ್ವಜನಿಕ ಗ್ರಂಥಾಲಯ’ದೆಡೆಗೆ ಓದುಗರ ಚಿತ್ತ

15 ಸಾವಿರಕ್ಕೂ ಹೆಚ್ಚು ಮಂದಿಯಿಂದ ಆ್ಯಪ್‌ ಡೌನ್‌ಲೋಡ್‌

Team Udayavani, Apr 25, 2020, 6:39 AM IST

“ಇ-ಸಾರ್ವಜನಿಕ ಗ್ರಂಥಾಲಯ’ದೆಡೆಗೆ ಓದುಗರ ಚಿತ್ತ

ಸಾಂದರ್ಭಿಕ ಚಿತ್ರ..

ಮಂಗಳೂರು: ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಗ್ರಂಥಾಲಯ ಇಲಾಖೆ ಸಿದ್ಧಪಡಿಸಿದ ಇ-ಪುಸ್ತಕ ಒದಗಿಸುವ ಇ-ಸಾರ್ವಜನಿಕ ಗ್ರಂಥಾಲಯಕ್ಕೆ ಒಂದೂವರೆ ತಿಂಗಳಲ್ಲೇ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಲಾಕ್‌ಡೌನ್‌ ಅವಧಿಯಲ್ಲಿ 15 ಸಾವಿರಕ್ಕೂ ಅಧಿಕ ಮಂದಿ ಈ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ.

ಸ್ಮಾರ್ಟ್‌ಫೋನ್‌ನಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಂಥಾಲಯ ಇಲಾಖೆಫೆ. 26ರಂದು ಇ-ಪುಸ್ತಕ ಓದುವ ಯೋಜನೆಗೆ ಚಾಲನೆ ನೀಡಿತ್ತು. ಇದಕ್ಕಾಗಿ ಕರ್ನಾಟಕ ಸರಕಾರದ ಲೋಗೋ ಹೊಂದಿರುವ ಇ-ಸಾರ್ವಜನಿಕ ಗ್ರಂಥಾಲಯ ಎಂಬ ಆ್ಯಪ್‌ನ್ನು ಸಿದ್ಧಪಡಿಸಲಾಗಿತ್ತು. ಮೊದಲ ಒಂದೂವರೆ ತಿಂಗಳ ಅವಧಿಯಲ್ಲಿ ಒಟ್ಟು 16,500ಕ್ಕೂ ಹೆಚ್ಚು ಮಂದಿ ಈ ಆ್ಯಪ್‌ನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಅದರಲ್ಲೂ ಲಾಕ್‌ಡೌನ್‌ ಆರಂಭವಾದ ಮಾ. 22ರ ಅನಂತರ 15 ಸಾವಿರಕ್ಕೂ ಹೆಚ್ಚು ಮಂದಿ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ.

ರಜೆ ಸದುಪಯೋಗಕ್ಕೆ ಇ- ಪುಸ್ತಕ
ಲಾಕ್‌ಡೌನ್‌ ಅವಧಿಯಲ್ಲಿ ಕೆಲವರಿಗೆ ಮನೆಯಲ್ಲೇ ಕೆಲಸ ನಿರ್ವಹಿಸಲು ಅವಕಾಶ ವಿದ್ದರೆ, ಇನ್ನು ಕೆಲವರಿಗೆ ರಜೆ ನೀಡಲಾಗಿದೆ. ಇ-ಸಾರ್ವಜನಿಕ ಗ್ರಂಥಾಲಯ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಕೆಲವರು ಪುಸ್ತಕ ಗಳನ್ನು ಓದುತ್ತಿದ್ದಾರೆ. ಇ-ಸಾರ್ವಜನಿಕ ಗ್ರಂಥಾಲಯ ಆ್ಯಪ್‌ನಲ್ಲಿ ಬುದ್ಧಿ ಮತ್ತೆಯನ್ನು ಪ್ರಚೋದಿಸುವ ಎಲ್ಲ ರೀತಿಯ ಪುಸ್ತಕಗಳು ಲಭ್ಯವಿವೆ. ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳು, ಸ್ಪರ್ಧಾತ್ಕಕ ಪರೀಕ್ಷೆಗಳಿಗೆ ತಯಾರಾಗುತ್ತಿರುವವರಿಗೆ ಪಠ್ಯ, ಕನ್ನಡ, ಇಂಗ್ಲಿಷ್‌ ಸಹಿತ ಹಲವು ಭಾಷೆಗಳ ಕ್ಲಾಸಿಕ್‌ ಕಾದಂಬರಿಗಳು- ಹೀಗೆ ಎಲ್ಲ ಓದುಗರಿಗೆ ಬೇಕಾದ ಇ-ಪುಸ್ತಕಗಳು ಈ ಆ್ಯಪ್‌ನಲ್ಲಿ ಇವೆ.

ಆ್ಯಪ್‌ ಬಳಕೆ ಹೆಚ್ಚುತ್ತಿದೆ
ಇ-ಸಾರ್ವಜನಿಕ ಗ್ರಂಥಾಲಯ ಆ್ಯಪ್‌ ಪರಿಚಯಿಸಿದ ಮೇಲೆ ಒಂದೂವರೆ ತಿಂಗಳಿನಲ್ಲಿ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡವರ ಸಂಖ್ಯೆ ಹೆಚ್ಚಿದೆ. ಲಾಕ್‌ಡೌನ್‌ ಅವಧಿಯಲ್ಲಿ 15 ಸಾವಿರಕ್ಕೂ ಹೆಚ್ಚು ಮಂದಿ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಈ ಆ್ಯಪ್‌ ಬಳಕೆ ಹೆಚ್ಚುತ್ತಿರುವುದನ್ನು ನೋಡಿದಾಗ ಇದು ಕನ್ನಡ ಪುಸ್ತಕೋದ್ಯಮಕ್ಕೂ ಹೊಸದಾದ ಆಲೋಚನೆ ಮಾಡಲು ಸದವಕಾಶ ಎನ್ನುವುದು ನನ್ನ ಭಾವನೆ.
 -ಎಸ್‌. ಸುರೇಶ್‌ಕುಮಾರ್‌
ಶಿಕ್ಷಣ ಸಚಿವ

ಟಾಪ್ ನ್ಯೂಸ್

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.