ದ.ಕ.: ಶುಕ್ರವಾರ ಹೊಸ ಪ್ರಕರಣ ಇಲ್ಲ

10 ಮಂದಿ ತೀವ್ರ ಉಸಿರಾಟ ಸಮಸ್ಯೆಯಿಂದ ವೆನ್ಲಾಕ್‌ಗೆ ದಾಖಲು

Team Udayavani, Apr 25, 2020, 7:07 AM IST

ದ.ಕ.: ಶುಕ್ರವಾರ ಹೊಸ ಪ್ರಕರಣ ಇಲ್ಲ

ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ ಪ್ರಕರಣ ದಾಖಲಾಗಿಲ್ಲ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ 16 ಪ್ರಕರಣ ವರದಿಯಾಗಿದ್ದು, ಆ ಪೈಕಿ 10 ರೋಗಿಗಳನ್ನು ವೆನ್ಲಾಕ್ ಕೋವಿಡ್‌-19 ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಸ್ವೀಕರಿಸಿದ 117 ಮಂದಿಯ ಗಂಟಲು ದ್ರವ ಮಾದರಿಯ ಪೈಕಿ ಎಲ್ಲವೂ ನೆಗೆಟಿವ್‌ ಆಗಿವೆ. 204 ಮಂದಿಯ ಗಂಟಲು ದ್ರವ ಮಾದರಿಯನ್ನು ಹೊಸದಾಗಿ ಪರೀಕ್ಷೆಗೆ ಕಳುಹಿಸಲಾಗಿದ್ದು, 463 ವರದಿ ಸ್ವೀಕರಿಸಲು ಬಾಕಿ ಇದೆ. 31 ಮಂದಿಯನ್ನು ಮತ್ತೆ ತಪಾಸಣೆಗೊಳಪಡಿಸಲಾಗಿದೆ. 50 ಮಂದಿ ಎನ್‌ಐಟಿಕೆಯಲ್ಲಿ, 10 ಮಂದಿ ಇಎಸ್‌ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ. ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಕೋವಿಡ್‌-19 ‌ನಲ್ಲಿ ದಾಖಲಾಗಿರುವ ಬಂಟ್ವಾಳದ ಕಸಬಾ ನಿವಾಸಿ 67 ವರ್ಷದ ವೃದ್ಧೆಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರಿಗೆ ವೆಂಟಿಲೇಟರ್‌ ಅಳವಡಿಸಲಾಗಿದ್ದು, ಆರೋಗ್ಯ ಯಥಾಸ್ಥಿತಿಯಲ್ಲಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾಡಳಿತದ ಪರದಾಟ
ಕೋವಿಡ್‌-19‌ ಆಸ್ಪತ್ರೆಯಲ್ಲಿ ಕೊರೊನಾದಿಂದ ಗುರುವಾರ ಮೃತಪಟ್ಟ ಬಂಟ್ವಾಳ ಕಸಬಾದ 75 ವರ್ಷದ ವೃದ್ಧೆಯ ಶವ ಸಂಸ್ಕಾರಕ್ಕೆ ಸಂಬಂಧಿಸಿದಂತೆ ನಗರದ ಸುಮಾರು ನಾಲ್ಕೈದು ರುದ್ರಭೂಮಿಗಳ ಆಸುಪಾಸಿನ ಜನ ವಿರೋಧ ವ್ಯಕ್ತಪಡಿಸಿದ್ದರಿಂದ ಜಿಲ್ಲಾಡ ಳಿತ ಅಂತ್ಯಕ್ರಿಯೆಗೆ ಪರದಾಡಬೇಕಾಯಿತು.ಮಂಗಳೂರು ಹೊರ ವಲಯದ ಪಚ್ಚ ನಾಡಿ, ಮೂಡು ಶೆಡ್ಡೆ, ನಂದಿ ಗುಡ್ಡೆ, ಬೋಳೂರು ರುದ್ರಭೂಮಿ ಗಳಲ್ಲಿ ವೃದ್ಧೆಯ ಮೃತದೇಹವನ್ನು ಶವ ಸಂಸ್ಕಾರಕ್ಕೆ ತರಲಾಗು ತ್ತಿದೆ ಎಂಬ ಮಾಹಿತಿಯರಿತು ಸ್ಥಳೀಯರು ರುದ್ರಭೂಮಿ ಬಳಿ ಜಮಾಯಿಸಿ ಅಧಿಕಾರಿ ಗಳಿಗೆ ವಿರೋಧ ವ್ಯಕ್ತ ಪಡಿಸಿದ್ದರು.

ಕೈಕುಂಜೆಗೆ ಶಾಸಕರ ಭೇಟಿ
ಕೈಕುಂಜೆಯ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಸಿರುವ ವಿಚಾರಕ್ಕೆ ಸಂಬಂಧಿಸಿ ಸಾಕಷ್ಟು ಊಹಾಪೋಹಗಳು ಸೃಷ್ಟಿ ಯಾಗಿರುವ ಜತೆಗೆ ಸ್ಥಳೀಯರಿಂದ ದೂರು ಗಳು ಕೇಳಿಬಂದ ಹಿನ್ನೆಲೆಯಲ್ಲಿ ಶುಕ್ರವಾರ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿ ಗುತ್ತು ಅವರು ಅಧಿಕಾರಿಗಳ ಜತೆ ರುದ್ರಭೂಮಿಯ ಪರಿಸರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶುಕ್ರವಾರ ಸ್ಥಳಕ್ಕೆ ಬಂಟ್ವಾಳ ಪುರಸಭೆ ಅಧಿಕಾರಿಗಳು ಪೌರ ಕಾರ್ಮಿಕರ ಜತೆ ತೆರಳಿ ಸ್ಯಾನಿಟೈಸರ್‌ ಸಿಂಪಡಿಸಿದ್ದು, ಮಧ್ಯಾಹ್ನದ ವೇಳೆಗೆ ಪರಿಸರದಲ್ಲಿ ಕ್ರಿಮಿನಾಶಕ ದ್ರಾವಣ ಸಿಂಪಡಿಸಲಾಯಿತು. ತಹಶೀಲ್ದಾರ್‌ ರಶ್ಮಿ ಎಸ್‌.ಆರ್‌., ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಾ ಪ್ರಭು, ಕಂದಾಯ ನಿರೀಕ್ಷಕರಾದ ನವೀನ್‌, ರಾಮ ಕಾಟಿಪಳ್ಳ, ದಿವಾಕರ್‌, ಬುಡಾ ಅಧ್ಯಕ್ಷ ದೇವದಾಸ್‌ ಶೆಟ್ಟಿ , ಪುರುಷೋತ್ತಮ ವಾಮದಪದವು ಮೊದಲಾದವರಿದ್ದರು.

ಶಾಸಕರ ನಡೆಗೆ ಮೆಚ್ಚುಗೆ
ಬಂಟ್ವಾಳ ಮಹಿಳೆಯ ಮೃತದೇಹದ ಅಂತ್ಯಸಂಸ್ಕಾರಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಸಕ ರಾಜೇಶ್‌ ನಾೖಕ್‌ ಅವರು ತಮ್ಮ ಜಮೀನಿನ ತೋಟದಲ್ಲಿ ಅಂತ್ಯಸಂಸ್ಕಾರ ನಡೆಸುವುದಕ್ಕೆ ಅವಕಾಶ ನೀಡುವುದಾಗಿ ಅಧಿಕಾರಿಗಳಿಗೆ ಹೇಳಿದರು. ಶಾಸಕರ ಈ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಪೊಲೀಸರ ನಡೆಗೆ ಪ್ರಶಂಸೆ ಜನರ ಮನವೊಲಿಸುವ ಜತೆಗೆ ಶವಸಂಸ್ಕಾರಕ್ಕೆ ಕಟ್ಟಿಗೆ, ತುಪ್ಪ ಒದಗಿಸಿರುವ ಪೊಲೀಸರ ಕಾರ್ಯವು ಮೆಚ್ಚುಗೆಗೆ ಪಾತ್ರ ವಾಗಿದೆ. ತಾಲೂಕಾಡಳಿತ, ಪುರಸಭೆಯ ಸ್ಪಂದನೆಗೆ ಪ್ರಶಂಸೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.