ಶಿವಣ್ಣ ಹೊಸಸಿನಿಮಾ ಅನೌನ್ಸ್‌


Team Udayavani, Apr 25, 2020, 10:06 AM IST

ಶಿವಣ್ಣ ಹೊಸಸಿನಿಮಾ ಅನೌನ್ಸ್‌

ಏಪ್ರಿಲ್‌ 24 ಬಂದರೆ, ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಉತ್ಸಾಹವಿರುತ್ತೆ. ಅನೇಕ ಸಿನಿಮಾ ಚಟುವಟಿಕೆಗಳು ಬಿರುಸಾಗುತ್ತವೆ. ಅದಕ್ಕೆ ಕಾರಣ, ಅಂದು ಡಾ.ರಾಜಕುಮಾರ್‌ ಅವರ ಹುಟ್ಟುಹಬ್ಬ.

ಹೌದು, ರಾಜ್‌ ಅವರ ಹುಟ್ಟುಹಬ್ಬದ ದಿನ ಅನೇಕ ಸಿನಿಮಾಗಳ ಹಾಡು, ಮುಹೂರ್ತ ಸೇರಿದಂತೆ ಇನ್ನಿತರೆ ಚಿತ್ರರಂಗದ ಕೆಲಸಗಳಿಗೆ ಚಾಲನೆ ದೊರೆಯುತ್ತದೆ. ಅದರಲ್ಲೂ ಡಾ.ರಾಜಕುಮಾರ್‌ ಅವರ ಪುತ್ರರ ಹೊಸ ಸಿನಿಮಾಗಳಿಗೂ ಚಾಲನೆ ಸಿಗುತ್ತದೆ, ಇಲ್ಲವೆ, ಅವರ ಚಿತ್ರಗಳ ಹಾಡು, ಟ್ರೇಲರ್‌, ಟೀಸರ್‌ ಇತ್ಯಾದಿ ಬಿಡುಗಡೆಯಾಗುತ್ತವೆ. ಈ ಬಾರಿ ನಡೆದ ರಾಜಕುಮಾರ್‌ ಹುಟ್ಟುಹಬ್ಬದ ಸಂದರ್ಭದಲ್ಲಿ ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಅವರ ಹೊಸ ಚಿತ್ರವೊಂದು ಅಧಿಕೃತವಾಗಿ ಘೋಷಣೆಯಾಗಿದೆ.

ಹೌದು, ಇನ್ನೂ ಹೆಸರಿಡದ ಚಿತ್ರವನ್ನು ಡಾ.ರಾಜಕುಮಾರ್‌ ಅವರ ಬರ್ತ್‌ಡೇ ದಿನ ಅನೌನ್ಸ್‌ ಮಾಡಿದ್ದು, ಶಿವಣ್ಣ ಅವರ ಫ್ಯಾನ್ಸ್‌ಗೆ ಡಬ್ಬಲ್‌ ಖುಷಿಯಾಗಿದೆ. ಅಂದಹಾಗೆ, ಚಿತ್ರಕ್ಕೆ ರಾಮ್‌ ಧುಲಿಪುಡಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಶಿವರಾಜಕುಮಾರ್‌ ಹೊರತುಪಡಿಸಿ ಬೇರೆ ಕಲಾವಿದರ ಆಯ್ಕೆ ಪ್ರಕ್ರಿಯೆ ಇನ್ನಷ್ಟೇ ಶುರುವಾಗಬೇಕಿದೆ.

ಚಿತ್ರ ಬರುವ ಸೆಪ್ಟೆಂಬರ್‌ನಲ್ಲಿ ಚಿತ್ರೀಕರಣಕ್ಕೆ ಹೊರಡುವ ಸಾಧ್ಯತೆ ಇದೆ ಎನ್ನಲಾಗಿದೆ. ತೆಲುಗು ಚಿತ್ರರಂಗದಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ, ಚಿತ್ರಕಥೆ, ಸಂಭಾಷಣೆ ಬರಹಗಾರರಾಗಿ ಸಾಕಷ್ಟು ಕೆಲಸ ಮಾಡಿ ಗುರುತಿಸಿಕೊಂಡಿರುವ ರಾಮ್‌ ಧುಲಿಪುಡಿ ಅವರ ಮೊದಲ ನಿರ್ದೇಶನದ ಚಿತ್ರವಿದು. ಈ ಚಿತ್ರದಲ್ಲಿ ಶಿವರಾಜಕುಮಾರ್‌ ಅವರು ಯೋಧ ಪಾತ್ರ ನಿರ್ವಹಿಸುತ್ತಿದ್ದಾರೆ ಎಂಬುದು ವಿಶೇಷ.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.