ಲಾಕ್‌ಡೌನ್ ನಿಯಮಗಳಲ್ಲಿ ಕೆಲ ಸಡಿಲಿಕೆ
Team Udayavani, Apr 25, 2020, 10:49 AM IST
ಧಾರವಾಡ: ಕೋವಿಡ್ 19 ಲಾಕ್‌ಡೌನ್ ನಿಯಮಗಳಲ್ಲಿ ಕೆಲ ಸಡಿಲಿಕೆ ಮಾಡಿದ್ದು, ಈ ಪೈಕಿ ಮಹಾನಗರ ಪಾಲಿಕೆ, ಕಂಟೈನ್‌ಮೆಂಟ್ ವ್ಯಾಪ್ತಿ ಹೊರತುಪಡಿಸಿ ಜಿಲ್ಲೆಯ ಉಳಿದ ಎಲ್ಲಾ ಸ್ಥಳಗಳಲ್ಲಿ ರಸ್ತೆ, ಕಟ್ಟಡ ನಿರ್ಮಾಣ ಕಾಮಗಾರಿಗಳು ಹಾಗೂ ಜಲ್ಲಿಕಲ್ಲು, ಕ್ರಷರ್ ಘಟಕಗಳ ಕಾರ್ಯಾರಂಭಕ್ಕೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಲಾಕ್‌ಡೌನ್-2ರ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಕೈಗಾರಿಕೆಗಳನ್ನು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಪ್ರಾರಂಭಿಸಬಹುದು. ಜಿಲ್ಲಾಡಳಿತ ಈ ಚಟುವಟಿಕೆಗಳಿಗೆ ಆನ್‌ಲೈನ್‌ನಲ್ಲಿ ಸರಳವಾಗಿ ಅನುಮತಿ ನೀಡಲಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ ಸೇರಿದಂತೆ ರಸ್ತೆ ಕಾಮಗಾರಿ ಹಾಗೂ ಕಟ್ಟಡಗಳನ್ನು ನಿರ್ಮಿಸುವ ಎಲ್ಲ ಇಲಾಖೆಗಳು ಹಾಗೂ ಅರೆ ಸರ್ಕಾರಿ ಸಂಸ್ಥೆಗಳು ಆನ್ ಲೈನ್ ಮೂಲಕ ಕಾಮಗಾರಿ ವಿವರಗಳನ್ನು ಸಲ್ಲಿಸಿ ಜಿಲ್ಲಾಡಳಿತದ ಅನುಮತಿ ಪಡೆಯಬೇಕು. ಬೇರೆ ಜಿಲ್ಲೆಗಳಿಂದ ಕಾರ್ಮಿಕರನ್ನು ಒಂದು ಬಾರಿ ಕರೆತಂದು ಕಾಮಗಾರಿ ಸ್ಥಳದಲ್ಲಿ ಅವರಿಗೆ ಊಟ, ವಸತಿ ಸೌಲಭ್ಯವುಳ್ಳ ಕ್ಯಾಂಪ್ ಮಾಡಿಸಬೇಕು. ಗುತ್ತಿಗೆದಾರರಿಗೆ ಈ ಷರತ್ತು ತಿಳಿಸಬೇಕು. ಹುಬ್ಬಳ್ಳಿ-ಧಾರವಾಡ ಹೊರವಲಯದ ಗಬ್ಬೂರ ಕ್ರಾಸ್, ಬೈಪಾಸ್ ರಸ್ತೆಗಳ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ರಸ್ತೆ ಮತ್ತು ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳಲು ಕಬ್ಬಿಣ, ಸಿಮೆಂಟ್, ಉಸುಕು ಸಾಗಾಣೆಗೆ ಪೊಲೀಸರು ಅಡ್ಡಿಪಡಿಸಬಾರದು. ಹಾಲು, ಮಾಂಸ ಮಾರಾಟಗಾರರು ಪಾಸ್ ಹೊಂದಿದ್ದರೂ ಕೂಡಾ ತಡೆದ ಬಗ್ಗೆ ವರದಿಯಾಗಿದೆ. ಸರ್ಕಾರಿ ಸೇವೆಯಲ್ಲಿರುವ ನೌಕರರು ಹಾಗೂ ಮಾಧ್ಯಮದವರನ್ನು ಕೂಡಾ ಅವರ ಗುರುತಿನ ಚೀಟಿ ನೋಡಿ ಕರ್ತವ್ಯಕ್ಕೆ ಅನುವು ಮಾಡಿಕೊಡಬೇಕು. ಹಲ್ಲೆ ನಡೆಸುವಂತ ಘಟನೆಗಳು ಪುನರಾವರ್ತನೆಯಾಗಬಾರದು. ಸರ್ಕಾರದ ಕಂದಾಯ, ಪೊಲೀಸ್, ಆರೋಗ್ಯ, ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಗ್ರಾ.ಪಂ. ಅವಧಿ ವಿಸ್ತರಿಸಲು ಮನವಿ: ವಿಧಾನಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಗ್ರಾ.ಪಂ. ಅಧ್ಯಕ್ಷರ ನೇತೃತ್ವದಲ್ಲಿ ಆರೋಗ್ಯ ಕಾರ್ಯಪಡೆಗಳು ಉತ್ತಮ ಕಾರ್ಯ ಮಾಡುತ್ತಿವೆ. ಆದರೆ ಲಾಕ್‌ಡೌನ್ ಅವಧಿ ಪೂರ್ಣಗೊಂಡಕೂಡಲೇ, ಗ್ರಾ.ಪಂ. ಚುನಾಯಿತ ಸದಸ್ಯರ ಅವಧಿಯೂ ಮುಕ್ತಾಯಗೊಳ್ಳುವ ಮೂಲಕ ಸಮಸ್ಯೆ ಉದ್ಭವವಾಗಬಹುದು. ತುರ್ತು ಪರಿಹಾರ ಕಂಡುಕೊಳ್ಳಲು ಆಡಳಿತಾ ಧಿಕಾರಿಗಳನ್ನು ನೇಮಕ ಮಾಡಬಹುದಾದರೂ ಸಮಗ್ರ ಕಾರ್ಯಗಳನ್ನು ನಿರ್ವಹಿಸಲು ಅಡಚಣೆಯಾಗಲಿದೆ. ಹೀಗಾಗಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಗ್ರಾ.ಪಂ. ಸದಸ್ಯರ ಅವಧಿ ವಿಸ್ತರಿಸಿದರೆ ಪರಿಣಾಮಕಾರಿಯಾದ ಕೆಲಸಗಳನ್ನು ನಿರೀಕ್ಷಿಸಬಹುದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಜಗದೀಶ ಶೆಟ್ಟರ್ ಅವರು, ಯಾವುದೇ ಚುನಾಯಿತ ಸಂಸ್ಥೆಯ ಅವಧಿ ವಿಸ್ತರಣೆ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ ಮತ್ತು ಅವಧಿ ವಿಸ್ತರಣೆ ಮಾಡಿದ ಉದಾಹರಣೆಗಳು ಕೂಡಾ ಇಲ್ಲ ಎಂದು ಸ್ಪಷ್ಟಪಡಿಸಿದರು.
ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಎಪಿಎಂಸಿ ರೈತರು ಮತ್ತು ವರ್ತಕರಿಗೆ ಪಾಸ್‌ಗಳ ತೊಂದರೆಯಾಗದಂತೆ ಅಧಿಕಾರಿಗಳು ಸ್ಪಂದಿಸಬೇಕು ಎಂದರು. ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಚೆಕ್‌ಪೋಸ್ಟ್‌ಗಳಲ್ಲಿ ಸೇವೆ ನೀಡುತ್ತಿರುವ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್ ಸಮರ್ಪಕವಾಗಿ ಪೂರೈಸಬೇಕು. ರಂಜಾನ್ ತಿಂಗಳು ಆರಂಭವಾಗಲಿರುವುದರಿಂದ ಮಾಂಸ ಮಾರಾಟಗಾರರನ್ನು ವಾರ್ಡ್‌ವಾರು ವಿಂಗಡಿಸಿ ಮಾರಾಟ ಘಟಕಗಳನ್ನು ವಿಕೇಂದ್ರಿಕರಣ ಮಾಡಿ, ಸಾಮಾಜಿಕ ಅಂತರದಲ್ಲಿ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಬೇಕು ಎಂದರು. ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಚೆಕ್ ಪೋಸ್ಟ್‌ಗಳಿಗೆ ನಿಯೋಜಿಸಲ್ಪಟ್ಟಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಪ್ರತಿ 8-10 ದಿನಗಳಿಗೊಮ್ಮೆ ಬದಲಾಯಿಸಿ ಬೇರೆಯವರನ್ನು ನಿಯೋಜಿಸಬೇಕು ಎಂದರು.
ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ನವಲಗುಂದ ಕ್ಷೇತ್ರದ ಗಡಿಭಾಗಕ್ಕೆ ಗದಗ ಹಾಗೂ ಬೆಳಗಾವಿ ಜಿಲ್ಲೆಗಳು ಹೊಂದಿಕೊಂಡಿವೆ. ಅಲ್ಲಿನ ಒಳಮಾರ್ಗಗಳಿಂದ ಕೆಲವರು ಜಿಲ್ಲೆಗೆ ಪ್ರವೇಶಿಸುತ್ತಿದ್ದಾರೆ. ಅನ್ಯ ಜಿಲ್ಲೆಯವರಪ್ರವೇಶವನ್ನು ಪರಿಣಾಮಕಾರಿಯಾಗಿ ನಿರ್ಬಂಧಿಸಬೇಕು ಎಂದರು. ಡಿಸಿ ದೀಪಾ ಚೋಳನ್ ಮಾತನಾಡಿ, ಚೆಕ್‌ಪೋಸ್ಟ್ ಸಿಬ್ಬಂದಿಗೆ ಪ್ರತಿವಾರ ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳನ್ನು ಪೂರೈಸಿ ದಾಖಲೆಗಳನ್ನು ನಿರ್ವಹಿಸಲಾಗುತ್ತಿದೆ. ಕಟ್ಟಡ ಮತ್ತು ರಸ್ತೆ ಕಾಮಗಾರಿ ಕೈಗೊಳ್ಳುವ ಇಲಾಖೆಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ತ್ವರಿತವಾಗಿ ಅನುಮತಿ ನೀಡಲಾಗುವುದು ಎಂದರು.
ಶಾಸಕರಾದ ಸಿ.ಎಂ.ನಿಂಬಣ್ಣವರ, ಅಮೃತ ದೇಸಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಜಿ.ಪಂ.ಸಿಇಒ ಡಾ|ಬಿ.ಸಿ. ಸತೀಶ್, ಮಹಾನಗರ ಪಾಲಿಕೆಯ ಆಯುಕ್ತ ಡಾ|ಸುರೇಶ್ ಇಟ್ನಾಳ, ಅಪರ ಜಿಲ್ಲಾ ಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಮಹಮ್ಮದ್ ಜುಬೇರ್ ಇದ್ದರು.
ಕೋವಿಡ್-19 ತ್ವರಿತ ತಪಾಸಣೆ : ಹುಬ್ಬಳ್ಳಿಯ ಕಿಮ್ಸ್, ಧಾರವಾಡದ ಡಿಮ್ಹಾನ್ಸ್ ಹಾಗೂ ನೆರೆಯ ಬೆಳಗಾವಿ ಹಾಗೂ ಗದಗ ಜಿಲ್ಲೆಗಳಲ್ಲಿಯೂ ಕೋವಿಡ್-19 ತಪಾಸಣಾ ಪ್ರಯೋಗಾಲಯಗಳು ಪ್ರಾರಂಭ ಆಗಿವೆ. ಹೀಗಾಗಿ ಇನ್ನು ಮುಂದೆ ಕೋವಿಡ್ ಪರೀಕ್ಷಾ ಫಲಿತಾಂಶಗಳು ತ್ವರಿತವಾಗಿ ಲಭ್ಯವಾಗಲಿವೆ. ಕಿಮ್ಸ್, ರೈಲ್ವೆ ಆಸ್ಪತ್ರೆ, ಡಿಮ್ಹಾನ್ಸ್, ಎಸ್‌ಡಿಎಂ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್-19 ಚಿಕಿತ್ಸೆ ಮತ್ತು ಪರೀಕ್ಷೆಗೆ ಅಗತ್ಯವಾದ ಆರೋಗ್ಯ ರಕ್ಷಣಾ ಸಾಮಾಗ್ರಿಗಳ ಪೂರೈಕೆಯಲ್ಲಿ ಕೊರತೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಾಮೂಹಿಕ ಪ್ರಾರ್ಥನೆ ಬೇಡ : ರಂಜಾನ್ ಮಾಸ ಆರಂಭವಾಗಿದ್ದು, ಈ ಮಾಸದಲ್ಲಿ ಉಪವಾಸ ವೃತ ಕೈಗೊಳ್ಳುವವರಿಗೆ ಅವರ ಮನೆ ಬಳಿಯೇ ಡ್ರೆ ಡ್ರೈಪ್ರೂಟ್ಸ್, ಮಾಂಸದ ಉತ್ಪನ್ನಗಳು ಮತ್ತು ಅಗತ್ಯ ವಸ್ತುಗಳು ಪೂರೈಕೆಯಾಗುವಂತೆ ವ್ಯವಸ್ಥೆ ಮಾಡಬೇಕು. ಮಸೀದಿಗಳಲ್ಲಿ ಧರ್ಮ ಗುರುಗಳನ್ನು ಹೊರತುಪಡಿಸಿ ಹೆಚ್ಚು ಜನ ಸೇರಿ ಸಾಮೂಹಿಕ ಪ್ರಾರ್ಥನೆ ಮಾಡಬಾರದು. ಆಯಾ ಮಸೀದಿಗಳ ಜಮಾತ್ ಸಮಿತಿಯವರು ತಮ್ಮ ಸದಸ್ಯರಿಗೆ ತಿಳುವಳಿಕೆ ನೀಡಿ ಮನೆಗಳಲ್ಲಿಯೇ ಪ್ರಾರ್ಥನೆ ಮಾಡಲು ಜಾಗೃತಿ ಮೂಡಿಸಬೇಕು ಎಂದು ಸಚಿವ ಜಗದೀಶ ಶೆಟ್ಟರ್ ಮನವಿ ಮಾಡಿದರು.
ಭಾರತೀಯ ಹತ್ತಿ ನಿಗಮ ನಿಯಮಾನುಸಾರ ಕೂಡಲೇ ರೈತರಿಗೆ ಮಾಹಿತಿ ನೀಡಬೇಕು. ಹತ್ತಿಯ ಗುಣಮಟ್ಟ ಪರಿಶೀಲಿಸಿ ತನ್ನ ಷರತ್ತುಗಳಿಗೆ ಅನುಗುಣವಾಗಿ ಹತ್ತಿ ಖರೀದಿಸಬೇಕು. –ಜಗದೀಶ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.