ಕ್ವಾರಂಟೈನ್ ಕೇಂದ್ರ ಸ್ಥಾಪಿಸಿದರೆ ಹೋರಾಟ
Team Udayavani, Apr 25, 2020, 5:07 PM IST
ಕಲಬುರಗಿ: ಕ್ವಾರಂಟೈನ್ ಕೇಂದ್ರ ಸ್ಥಾಪಿಸದಿರುವಂತೆ ಆಗ್ರಹಿಸಿ ಬಡಾವಣೆ ನಾಗರಿಕರು ಪ್ರತಿಭಟನೆ ನಡೆಸಿದರು.
ಕಲಬುರಗಿ: ಕೋಟನೂರ-ಧರಿಯಾಪುರ ಜಿಡಿಎ ಬಡಾವಣೆಯಲ್ಲಿರುವ ವಸತಿ ನಿಲಯಗಳಲ್ಲಿ ಕೊವಿಡ್-19 ಹೋಂ ಕ್ವಾರಂಟೈನ್ ಕೇಂದ್ರ ಸ್ಥಾಪಿಸದಿರುವಂತೆ ಆಗ್ರಹಿಸಿ ಬಡಾವಣೆ ನಾಗರಿಕರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಶುಕ್ರವಾರ ಬೆಳಗ್ಗೆ ದತ್ತಾತ್ರೇಯ ಪಾಟೀಲ್ ಬಡಾವಣೆ ಅಭಿವೃದ್ಧಿ ಸಂಘದವರು ತಮ್ಮ ಬಡಾವಣೆಯಲ್ಲಿರುವ ವಸತಿ ನಿಲಯಗಳಲ್ಲಿ ಕೊವಿಡ್-19 ಹೊಂ ಕ್ವಾರಂಟೈನ್ ಕೇಂದ್ರವನ್ನು ಸ್ಥಾಪಿಸದಿರುವಂತೆ ಆಗ್ರಹಿಸಿ ಬಡಾವಣೆ-ವರ್ತುಲ್ ರಸ್ತೆ ಸಂಪರ್ಕದ ರಸ್ತೆಯನ್ನು ಅಗೆದು ಪ್ರತಿಭಟನೆ ನಡೆಸಿದರು.
ಈಗಾಗಲೇ ಪಿಡಬ್ಲ್ಯುಡಿ ಕ್ವಾರ್ಟರ್ಸ್ ಕೆಲ ಮನೆಗಳಲ್ಲಿ ಹೋಂ ಕ್ವಾರಂಟೈನ್ ಮಾಡುತ್ತಿರುವ ನಾಗರಿಕರು ಪ್ರತಿಭಟಿಸಿದ್ದಕ್ಕೆ ಹಿಂದೆ ಸರಿಯಾಗಿದೆ. ಅದೇ ರೀತಿ ಜಿಡಿಎ ಬಡಾವಣೆಯಿಂದ ಹಿಂದೆ ಸರಿಯಬೇಕು. ಬಹು ಮುಖ್ಯವಾಗಿ ವಸತಿ ನಿಲಯಗಳ ಸುತ್ತ ನೂರಾರು ಮನೆಗಳಿರುವುದರಿಂದ ಯಾವುದೇ ಕಾರಣಕ್ಕೂ ಹೋಂ ಕ್ವಾರಂಟೈನ್ ಕೇಂದ್ರಕ್ಕೆ ಕ್ರಮ ಕೈಗೊಳ್ಳಬಾರದು ಎಂದರು. ಅಣ್ಣಾರಾಯ ಪಾಟೀಲ್ ಸಿರಸಗಿ, ಕುಶಾಲ ಯಡವಳ್ಳಿ, ಮಂಜುನಾಥ ಹಿರೇಮಠ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.