ಅಂಗನವಾಡಿ ಕಾರ್ಯಕರ್ತೆ, ನಿವೃತ್ತ ಪೊಲೀಸ್ ಪೇದೆಗೆ ಕೋವಿಡ್-19 ಸೋಂಕು
Team Udayavani, Apr 25, 2020, 5:42 PM IST
ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿಯಲ್ಲಿ ಸೋಂಕಿತನ ಸಮೀಕ್ಷೆ ನಡೆಸಲು ಹೋದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸೋಂಕಿತನ ಮನೆ ಪಕ್ಕದ ನಿವೃತ್ತ ಪೊಲೀಸ್ ಪೇದೆ ಸೇರಿದಂತೆ ಒಟ್ಟು 9 ಜನರಿಗೆ ಶನಿವಾರ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ಈ ಹೊಸ ಒಂಬತ್ತು ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 54ಕ್ಕೆ ಏರಿದಂತಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಶನಿವಾರ ಬೆಳಗಿನ ಪತ್ರಿಕಾ ಪ್ರಕಟಣೆಯ ಪ್ರಕಾರ ಬೆಳಗಾವಿಯಲ್ಲಿ 6 ಹಾಗೂ ಸಂಜೆಯ ಪ್ರಕಟಣೆಯಲ್ಲಿ ಮೂರು ಪ್ರಕರಣಗಳು ದೃಢಪಟ್ಟಿರುತ್ತವೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ಸೋಂಕಿತ ಸಂಖ್ಯೆ128ನಿಂದ 45 ವರ್ಷದ ಪುರುಷ ಪಿ-482; 38 ವರ್ಷದ ಪುರುಷ ಪಿ-483; ಮತ್ತು 80 ವರ್ಷದ ವೃದ್ಧೆ ಪಿ-484; 55 ವರ್ಷದ ಮಹಿಳೆ 485; 42 ವರ್ಷದ ಮಹಿಳೆ ಪಿ-486, 39 ವರ್ಷದ ಮಹಿಳೆ ಪಿ-487, 20 ವರ್ಷದ ಯುವಕ ಪಿ-494; 8 ವರ್ಷದ ಬಾಲಕ ಪಿ-495 ಹಾಗೂ 30 ವರ್ಷದ ಮಹಿಳೆ ಪಿ-496 ಇದರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ ಪಿ-128 ಸೋಂಕಿತನ ಜತೆ ದ್ವಿತೀಯ ಸಂಪರ್ಕಕ್ಕೆ ಬಂದಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟಾರೆ 54 ಜನರಲ್ಲಿ ಸೋಂಕು ಕಂಡುಬಂದಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. ಈ ಪೈಕಿ ಗುಣಮುಖರಾಗಿರುವ ನಾಲ್ಕು ಜನರನ್ನು ಬಿಮ್ಸ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Belthangady: ಹೆಬ್ಬಾವು ಹಿಡಿದು ವೈರಲ್ ಆದ ಕುಪ್ಪೆಟ್ಟಿ ನಿವಾಸಿ ಆಶಾ!
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.