ಲಾಕ್‌ಡೌನ್ ಸಡಿಲಿಕೆ ದುರಂತಕ್ಕೆ ಆಹ್ವಾನ: ಎಚ್.ಕೆ.ಪಾಟೀಲ್
Team Udayavani, Apr 25, 2020, 9:31 PM IST
ಬೆಂಗಳೂರು: ಲಾಕ್‌ಡೌನ್ ಸಡಿಲಿಕೆ ನಿರ್ಣಯ ಶ್ರೀಮಂತರ ಪರವಾಗಿದ್ದು ಈ ನಿರ್ಣಯಗಳಿಂದ ರಾಜ್ಯಕ್ಕೆ ತಾವು ದುರಂತಮಯ ಸನ್ನಿವೇಶ ತಂದೊಡ್ಡಿದ ಅಪಕೀರ್ತಿಗೆ ಪಾತ್ರರಾಗುತ್ತೀರಿ. ತತ್‌ಕ್ಷಣ ಈ ನಿರ್ಧಾರವನ್ನು ಕೈಬಿಡಬೇಕೆಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.
ಈ ಕುರಿತು ಸಿಎಂಗೆ ಪತ್ರ ಬರೆದಿರುವ ಅವರು, ಹಳಿತಪ್ಪಿರುವ ಅರ್ಥವ್ಯವಸ್ಥೆಯನ್ನು ಮರಳಿ ಅಭಿವೃದ್ಧಿ ಪಥದತ್ತ ಚಲಿಸುವಂತೆ ಮಾಡಲು ಕೇವಲ ಲಾಕ್‌ಡೌನ್ ಸಡಿಲಿಕೆ ಉಪಾಯವಾಗುವುದಿಲ್ಲ. ಇದರಿಂದ ಆದಾಯವನ್ನು ಕ್ರೋಡೀಕರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಇಲ್ಲಿಯವರೆಗೆ 29,512 ಜನರನ್ನು ಪರೀಕ್ಷೆ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಸರಕಾರ ಬೆನ್ನು ತಟ್ಟಿಕೊಳ್ಳುತ್ತಿದೆ. ಇದು ಸುಳ್ಳು ಸಮರ್ಥನೆಯಾಗಿದೆ. ರಾಜ್ಯದಲ್ಲಿ ಕ್ವಾರಂಟೈನ್ ಆಗಿರುವ ಕನಿಷ್ಠ ಮೂರು ಲಕ್ಷ ಜನರಲ್ಲಿ ಮೂವತ್ತು ಸಾವಿರ ಜನರನ್ನಷ್ಟೇ ಈವರೆಗೆ ಕೋವಿಡ್ ತಪಾಸಣೆಗೆ ಗುರಿಪಡಿಸಲಾಗಿದೆ. ತಪಾಸಣೆಗಳೇ ನಡೆಯದೇ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.